ಚಳ್ಳಕೆರೆ: ‘ತಾಲ್ಲೂಕಿನಲ್ಲಿ ನೀರು ಶುದ್ಧೀಕರಣ ಘಟಕಗಳು ಕೆಲವು ಕಡೆ ಸಂಪೂರ್ಣವಾಗಿ ಕೆಟ್ಟು ಹೋಗಿದ್ದು, ಕೂಡಲೇ ಸಂಬಂಧಪಟ್ಟ ಇಲಾಖೆಯವರು ದುರಸ್ತಿಗೊಳಿಸಬೇಕು’ ಎಂದು ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಘಟಕದ ಉಪಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಒತ್ತಾಯಿಸಿದರು.

ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ನೀಡಿದರು.

‘ತಾಲ್ಲೂಕಿನಾದ್ಯಂತ ಸರಿಯಾಗಿ ಮಳೆ ಬಾರದ ಕಾರಣ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಅನುದಾನಕ್ಕಾಗಿ ಮಾತ್ರ ನೀರಿನ ಶುದ್ಧೀಕರಣ ಘಟಕಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಕೆಲವು ಹಳ್ಳಿಗಳಲ್ಲಿ ಘಟಕ ನಿರ್ಮಾಣ ಮಾಡಿ ಹಣ ಬಿಡುಗಡೆ ಆಗುತ್ತಿದ್ದಂತೆ ನಮಗೂ ಅದಕ್ಕೂ ಸಂಬಂಧ ಇಲ್ಲ ಎಂದು ಕೈತೊಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಗ್ರಾಮ ಪಂಚಾಯಿತಿಯಲ್ಲಿ ಕೇಳಿದರೆ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಹಾರಿಕೆ ಉತ್ತರ ನೀಡುತ್ತಾರೆ’ ಎಂದು ಕಿಡಿಕಾರಿದರು.

‘ನಮ್ಮ ಮನವಿಗೆ ಸ್ಪಂದಿಸದೇ ಇದ್ದರೆ ಹೋರಾಟದ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಅಧಿಕಾರಿಗಳನ್ನು ಎಚ್ಚರಿಸಿದರು.

ರೈತ ಮುಖಂಡರಾದ ಕೆ.ಪಿ.ಭೂತಯ್ಯ, ಮಲ್ಲಿಕಾರ್ಜುನ್, ಯರ್ರಿಸ್ವಾಮಿ, ಕೆ.ಟಿ.ತಿಪ್ಪೇಸ್ವಾಮಿ, ಮರ್ಲಹಳ್ಳಿ ರವಿಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-44-541473403

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.