ಸೋಮವಾರ, ಫೆಬ್ರವರಿ 17, 2020
25 °C

ಚಿತ್ರದುರ್ಗ: ಚನ್ನಕೇಶವ ಸ್ವಾಮಿ ಅದ್ದೂರಿ ರಥೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಇಲ್ಲಿನ ಕೆಳಗೋಟೆಯ ಸಿ.ಕೆ. ಪುರದ ಚನ್ನಕೇಶವ ಸ್ವಾಮಿ ದೇಗುಲ ಮುಂಭಾಗದಲ್ಲಿ ಭಾನುವಾರ ಶ್ರೀದೇವಿ, ಭೂದೇವಿ ಸಹಿತ ಚನ್ನಕೇಶವ ಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.

ರಥೋತ್ಸವಕ್ಕೆ ಚಾಲನೆ ದೊರೆಯುತ್ತಿದ್ದಂತೆ ಮಂಗಳವಾದ್ಯಗಳು ಮೊಳಗಿದವು. ದಾಸಯ್ಯನವರು ಗಂಟೆ, ಜಾಗಟೆ, ಶಂಖ ಮೊಳಗಿಸಿದರು.

ಭವ್ಯ ರಥವನ್ನು ನೂರಾರು ಭಕ್ತರು ಎಳೆಯುವ ಮೂಲಕ ಭಕ್ತಿ ಸಮರ್ಪಿಸಿದರು. ದೇಗುಲದಿಂದ ಆರಂಭವಾದ ರಥೋತ್ಸವ ಕೆಳಗೋಟೆಯ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಪುನಾ ದೇಗುಲ ತಲುಪಿತು. ಇದೇ ಸಂದರ್ಭದಲ್ಲಿ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.

ಸಿ.ಕೆ. ಪುರ ಬಡಾವಣೆ, ಕೆಳಗೋಟೆ, ಆಕಾಶವಾಣಿ ಸುತ್ತಲಿನ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಚನ್ನಕೇಶವ ಸ್ವಾಮಿಯ ಕಲ್ಯಾಣೋತ್ಸವವೂ ಅದ್ದೂರಿಯಾಗಿ ನಡೆಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು