ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಳ್ಳಕೆರೆ | ಚೆಕ್‍ಪೋಸ್ಟ್‌ಗಳಲ್ಲಿ ಕಟ್ಟೆಚ್ಚರ: ಡಿವೈಎಸ್‌ಪಿ ರಾಜಣ್ಣ

Published 20 ಮಾರ್ಚ್ 2024, 16:06 IST
Last Updated 20 ಮಾರ್ಚ್ 2024, 16:06 IST
ಅಕ್ಷರ ಗಾತ್ರ

ಚಳ್ಳಕೆರೆ: ಲೋಕಸಭಾ ಚುನಾವಣೆಯಲ್ಲಿ ಅಕ್ರಮ ತಡೆಯಲು ನಗರದಲ್ಲಿ ತೆರೆಯಲಾದ ಚೆಕ್‍ಪೋಸ್ಟ್‌ಗಳಿಗೆ ಡಿವೈಎಸ್ಪಿ ಟಿ.ಬಿ.ರಾಜಣ್ಣ ಬುಧವಾರ ಭೇಟಿ ಸಿಸಿಟಿವಿ ಕ್ಯಾಮೆರಾ, ವಿದ್ಯುತ್ ದೀಪ ಹಾಗೂ ಶುದ್ಧ ಕುಡಿಯುವ ನೀರು ಮುಂತಾದ ವ್ಯವಸ್ಥೆಗಳನ್ನು ಪರಿಶೀಲಿಸಿದರು.

‘ಪ್ರತಿ ವಾಹನದ ಮೇಲೆ ಸದಾ ನಿಗಾ ಇಡಬೇಕು. ಅಗತ್ಯ ದಾಖಲೆ ಪರಿಶೀಲಿಸಿ ವಾಹನದ ಮಾಹಿತಿಯನ್ನು ಪುಸ್ತಕದಲ್ಲಿ ದಾಖಲಿಸಬೇಕು. ತಪಾಸಣೆ ನಡೆಸುವಾಗ ಚಾಲಕ ಹಾಗೂ ಮಾಲೀಕರ ಜತೆ ಸೌಜನ್ಯಯುತವಾಗಿ ನಡೆದುಕೊಳ್ಳಬೇಕು’ ಎಂದು ಚೆಕ್‍ಪೋಸ್ಟ್ ಸಿಬ್ಬಂದಿಗೆ ಸೂಚಿಸಿದರು.

ಅಧಿಕಾರಿಗಳ ಕಾರ್ಯನಿರ್ವಹಣೆ ಪರಿಶೀಲಿಸಲು ಪ್ರತಿ ರಾತ್ರಿ ಚೆಕ್‍ಪೋಸ್ಟ್‌ಗಳಿಗೆ ಭೇಟಿ ನೀಡಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT