ಚಿಕ್ಕಜಾಜೂರು: ಗ್ರಾಮ ಪಂಚಾಯಿತಿ ವತಿಯಿಂದ ಚಿಕ್ಕ ಜಾಜೂರಿನಲ್ಲಿ ನಿರ್ಮಿಸಲಾದ ಶೌಚಾಲಯ ಶಿಥಿಲವಾಗಿದ್ದು, ನೂತನ ಶೌಚಾಲಯ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸುವಂತೆ ಗ್ರಾಮ ಪಂಚಾಯಿತಿ ನಿಯೋಜಿತ ಆಡಳಿತಾಧಿಕಾರಿ ಶ್ರೀನಿವಾಸ್ ಸೂಚಿಸಿದರು.

ಸಾರ್ವಜನಿಕ ಶೌಚಾಲಯ ಶಿಥಿಲಗೊಂಂಡಿರುವ ಬಗ್ಗೆ ‘ಪ್ರಜಾವಾಣಿ’ಯಲ್ಲಿ ಮೇ 12ರಂದು ವಿಶೇಷ ವರದಿ ಪ್ರಕಟವಾಗಿತ್ತು. ಶುಕ್ರವಾರ ಶೌಚಾಲಯದ ಸ್ಥಳಕ್ಕೆ ಭೇಟಿ ನೀಡಿದ ಶ್ರೀನಿವಾಸ್ ಅವರು ಅಲ್ಲಿನ ಸ್ಥಿತಿಯನ್ನು ಅವಲೋಕಿಸಿದರು.

‘ಚಿಕ್ಕಜಾಜೂರು ಜನಸಂಖ್ಯೆ ಹೆಚ್ಚಳವಾಗುತ್ತಿದೆ. ರೈಲ್ವೆ ಜಂಕ್ಷನ್ ಕೂಡ ಆಗಿರುವುದರಿಂದ ರೈಲಿನಿಂದ ಇಳಿದು ಪ್ರಯಾಣಿಕರು ಬಸ್ ನಿಲ್ದಾಣಕ್ಕೆ ಬರುತ್ತಾರೆ. ಗ್ರಾಮವು ಪ್ರಮುಖ ವ್ಯಾಪಾರ ಕೇಂದ್ರವೂ ಆಗಿರುವುದರಿಂದ ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಜನರು ಖರೀದಿ ಮತ್ತು ವ್ಯಾಪಾರಕ್ಕೆ ನಿತ್ಯ ಬಂದು ಹೋಗುತ್ತಿದ್ದಾರೆ. ಅಂತಹವರಿಗೆ ಶೌಚಾಲಯದ ಅವಶ್ಯಕತೆ ಹೆಚ್ಚಾಗಿದೆ. ಈ ಬಗ್ಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಸಂಬಂಧಪಟ್ಟ ಇಲಾಖೆಯವರಿಗೆ ಗ್ರಾಮಕ್ಕೆ ಅಂದಾಜು ₹ 25 ಲಕ್ಷ ವೆಚ್ಚದ ಹೈಟೆಕ್ ಶೌಚಾಲಯವನ್ನು ನಿರ್ಮಿಸಿಕೊಡುವಂತೆ ಪ್ರಸ್ತಾವನೆಯನ್ನು ಸಿದ್ಧಪಡಿಸಿ’ ಎಂದು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಜಗದೀಶ್ ಅವರಿಗೆ ಸೂಚನೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-44-1578961919

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.