ಚಿಕ್ಕಜಾಜೂರು: ‘ಧಾರ್ಮಿಕ ಆಚರಣೆ ಆಡಂಬರ ಆಗಬಾರದು. ಅದು ಆತ್ಮ ಸಾಕ್ಷಾತ್ಕಾರಕ್ಕೆ ಪ್ರೇರಣೆಯಾಗಬೇಕು’ ಎಂದು ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಸಮೀಪದ ಕಲ್ಲವ್ವನಾಗತಿಹಳ್ಳಿಯ ಬನಶಂಕರಿ ದೇವಸ್ಥಾನದಲ್ಲಿ ನಡೆದ ಅಮ್ಮನವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಕೆಲ ಮಹಿಳೆಯರು ತಂದೆ ಮನೆಯ ಆಸ್ತಿಗಾಗಿ ಕೋರ್ಟ್ ಮೆಟ್ಟಿಲು ಹತ್ತುತ್ತಿರುವುದು ಸರಿಯಲ್ಲ. ಪೋಷಕರು ನಿಮಗೆ ಶಿಕ್ಷಣ ಕೊಡಿಸಲು ಹಾಗೂ ಸಲಹಲು ಸಾಕಷ್ಟು ಶ್ರಮ ವಹಿಸಿರುತ್ತಾರೆ. ಅಲ್ಲದೆ, ಮದುವೆಗಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿರುತ್ತಾರೆ. ಬಾಣಂತನ, ಮೊಮ್ಮಕ್ಕಳಿಗೆ ಒಡವೆ ಮತ್ತಿತರ ಕೆಲಸಗಳಿಗೆ ಹಣ ಖರ್ಚು ಮಾಡಿರುತ್ತಾರೆ. ಇಷ್ಟಾದರೂ ಕೆಲವರು ತವರಿನವರ ವಿರುದ್ಧ ಆಸ್ತಿಗಾಗಿ ನ್ಯಾಯಾಲಯದ ಮೆಟ್ಟಿಲೇರುತ್ತಾರೆ. ಅವರಿಂದ ಮತ್ತೆ ಪರಿಹಾರಕ್ಕೆ ಬೇಡಿಕೆ ಇಡುವುದು ಎಷ್ಟರ ಮಟ್ಟಿಗೆ ಸರಿ. ಅವರು ನೊಂದರೆ ನಿಮಗೂ ನೋವು, ಅವರಿಗೂ ನೋವು ಆಗುತ್ತದೆ’ ಎಂದು ನುಡಿದರು.

ರಾಜ್ಯಸಭಾ ಸದಸ್ಯ ಕೆ. ನಾರಾಯಣ ಮಾತನಾಡಿದರು. ಶಾಸಕ ಎಂ. ಚಂದ್ರಪ್ಪ ದೇವಸ್ಥಾನ ನಿರ್ಮಾಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಹಂಪಿ ಹೇಮಕೂಟದ ಗಾಯತ್ರಿ ಪೀಠದ ದಯಾನಂದಪುರಿ ಸ್ವಾಮೀಜಿ ಗ್ರಾಮಸ್ಥರ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಗ್ರಾಮದ ದೇವಾಂಗ ಸಮಾಜದ ಅಧ್ಯಕ್ಷ ಎಸ್.ಡಿ. ರಾಜಪ್ಪ ಅಧ್ಯಕ್ಷತೆ ವಹಿಸಿದ್ದರು. ಚಿಕ್ಕಜಾಜೂರಿನ ಎ.ಆರ್. ಸುರೇಶ್, ಮಲ್ಲಾಡಿಹಳ್ಳಿ ದೇವರಾಜ್, ಎಚ್.ಟಿ. ಹನುಮಂತಪ್ಪ, ರುದ್ರೇಗೌಡ, ಕುಬೇರಪ್ಪ, ದೇವಸ್ಥಾನ ಸಮಿತಿ ಪದಾಧಿಕಾರಿಗಳು ಹಾಗೂ ಗ್ರಾಮದ ಮುಖಂಡರು ಪಾಲ್ಗೊಂಡಿದ್ದರು. ವೇದಿಕೆ ಕಾರ್ಯಕ್ರಮದ ನಂತರ ಅನ್ನಸಂತರ್ಪಣೆ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-44-411203778

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.