ಚಿಕ್ಕಜಾಜೂರು: ‘ನಾವು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದೇವೆ. ಆದರೆ, ಗ್ರಾಮ ಪಂಚಾಯಿತಿ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ’ ಎಂದು ಹನುಮನಕಟ್ಟೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಚಿತ್ರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಈ ಗ್ರಾಮದಲ್ಲಿ ತಿಂಗಳಿಂದ ಕುಡಿಯುವ ನೀರಿಗಾಗಿ ಜನ ಪರದಾಡುತ್ತಿದ್ದಾರೆ. ಕೊಳವೆ ಬಾವಿಗಳು ಬರಿದಾಗಿವೆ. ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಎಂದು ಪಿಡಿಒಗೆ ಹಲವು ಬಾರಿ ಮನವಿ ಮಾಡಿದ್ದರಿಂದ ಮೂರು ದಿನಕ್ಕೆ ಒಂದರಿಂದ ಎರಡು ಟ್ಯಾಂಕರ್ ನೀರನ್ನು ಸರಬರಾಜು ಮಾಡುತ್ತಿದ್ದರು. ಈಗ ಅದನ್ನೂ ನಿಲ್ಲಿಸಿದ್ದು, ನೀರಿಗಾಗಿ ಪರದಾಡುವ ಸ್ಥಿತಿ ಎದುರಾಗಿದೆ. ತೋಟಗಳನ್ನು ಉಳಿಸಿಕೊಳ್ಳುವುದೇ ರೈತರಿಗೆ ಸವಾಲಾಗಿದೆ ಎಂದು ಗ್ರಾಮಸ್ಥರಾದ ಗಿರೀಶ್, ಪ್ರದೀಪಕುಮಾರ್, ನಾಗರಾಜ್, ಪ್ರಸನ್ನ, ಆನಂದ್, ಶ್ರೀನಿವಾಸ್ ಅಸಮಾಧಾನ ವ್ಯಕ್ತಪಡಿಸಿದರು.

ವಿದ್ಯುತ್ ಸಂಪರ್ಕ ಇದ್ದಾಗ ಕೊಳವೆ ಬಾವಿಯ ನೀರನ್ನು ತುಂಬಿಸಿಕೊಳ್ಳಲು ಜನ ಮುಗಿ ಬೀಳುತ್ತಿದ್ದಾರೆ. ಅಲ್ಲದೆ, ಕೆಲವರು ಕೆಂಚಾಂಬ ದೇವಸ್ಥಾನದ ಬಳಿ ಇರುವ ತೊಟ್ಟಿಯಿಂದ ನೀರನ್ನು ತರುತ್ತಿದ್ದಾರೆ. ದೇವಸ್ಥಾನದ ಕೊಳವೆ ಬಾವಿಯಲ್ಲೂ ನೀರು ಕಡಿಮೆಯಾಗಿದ್ದು, ಮನೆ ಬಳಕೆಗೆ ನೀರನ್ನು ಹೊಂದಿಸುವುದೇ ಕಷ್ಟವಾಗಿದೆ ಎನ್ನುತ್ತಾರೆ ಗ್ರಾಮದ ಮಹಿಳೆಯರಾದ ಚಂದ್ರಮ್ಮ, ಕೆಂಚಮ್ಮ, ರಾಜಮ್ಮ, ರತ್ನಮ್ಮ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-44-1903492834

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.