ಚಿಕ್ಕಜಾಜೂರು: ‘ತುಳಿತಕ್ಕೆ ಒಳಗಾದವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವಲ್ಲಿ ಬಿ.ಆರ್. ಅಂಬೇಡ್ಕರ್ ಅವರ ಪಾತ್ರ ಮಹತ್ತರವಾದುದು’ ಎಂದು ದಲಿತ ಸಂಘದ ಅಧ್ಯಕ್ಷ ಪಾಂಡುರಂಗ ಸ್ವಾಮಿ ಅಭಿಪ್ರಾಯಪಟ್ಟರು.

ಸಮೀಪದ ಮುತ್ತುಗದೂರು ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬಿ.ಆರ್. ಅಂಬೇಡ್ಕರ್ ಜಯಂತಿ ಹಾಗೂ ಅಂಬೇಡ್ಕರ್ ಪುತ್ಥಳಿಯ ಪ್ರತಿಷ್ಠಾಪನೆಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಸಮಾಜದ ಎಲ್ಲಾ ವರ್ಗ, ಜಾತಿಗಳಲ್ಲೂ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಹಿಂದುಳಿದವರಿದ್ದಾರೆ. ಕಡು ಕಷ್ಟದಲ್ಲಿ ಬದುಕುತ್ತಿದ್ದ ಮತ್ತು ಪ್ರಬಲ ವರ್ಗಗಳ ದೌರ್ಜನ್ಯಕ್ಕೆ ಒಳಗಾದ ಎಲ್ಲರಿಗೆ ಸಾಮಾಜಿಕ ಮತ್ತು ಶೈಕ್ಷಣಿಕ ನ್ಯಾಯ ಕೊಡಿಸುವಲ್ಲಿ ಅಂಬೇಡ್ಕರ್ ಯಶಸ್ವಿಯಾಗಿದ್ದರು’ ಎಂದರು.

ಹೊಳಲ್ಕೆರೆ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷ ಎಂ.ಬಿ. ಸಿದ್ಧೇಶ್ ಭೂಮಿ ಪೂಜೆ ನೆರವೇರಿಸಿದರು. ಕೆಡಿಪಿ ಸದಸ್ಯ ಕಿರಣ್ ಕುಮಾರ್, ದಲಿತ ಸಂಘದ ಜಿಲ್ಲಾ ಸಂಚಾಲಕ ಜಿ. ಶಿವಣ್ಣ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮದನ್ಕುಮಾರ್, ಗ್ರಾಮಸ್ಥರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-44-989357623

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.