ಚಿಕ್ಕಜಾಜೂರು: ‘ಪರಿಸರದ ಸಂರಕ್ಷಣೆ ಮಾಡುವ ಮೂಲಕ ಭೂಮಿಯ ಫಲವತ್ತತೆ ಮತ್ತು ಭೂಮಿಯ ರಕ್ಷಣೆ ನಮ್ಮೆಲ್ಲರ ಹೊಣೆ’ ಎಂದು ಜ್ಞಾನವಿಕಾಸ ಸಮನ್ವಯಾಧಿಕಾರಿ ರೂಪಾ ತಿಳಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕೇಂದ್ರದ ಸಹಯೋಗದಲ್ಲಿ ಚಿಕ್ಕಜಾಜೂರು ಸಮೀಪದ ಬಿ. ದುರ್ಗ ವಲಯದ ಗ್ಯಾರೆಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜನಜಾಗೃತಿ ಬೀದಿ ನಾಟಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಶೃತಿ ಸಾಂಸ್ಕೃತಿಕ ಕಲಾ ತಂಡದ ಸದಸ್ಯರು ಭೂಮಿ ತಾಯಿಯನ್ನು ರಕ್ಷಿಸಿ, ಸ್ವಚ್ಛ ಪರಿಸರ ನಿರ್ಮಾಣ ಮಾಡುವ ಬಗ್ಗೆ, ನೀರಿನ ಸದ್ಬಳಕೆ, ಬಾಲ್ಯ ವಿವಾಹದ ದುಷ್ಪರಿಣಾಮಗಳ ಬಗ್ಗೆ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವಿವಿಧ ಯೋಜನೆಯ ಕಾರ್ಯಕ್ರಮಗಳ ಕುರಿತು ಬೀದಿ ನಾಟಕ ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷೆ ರೇಖಾ, ಸ್ವಸಹಾಯ ಸಂಘದ ಸದಸ್ಯರು, ಶೃತಿ ಕಲಾ ತಂಡದವರು ಹಾಗೂ ಗ್ರಾಮಸ್ಥರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-44-385674884

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.