ಚಿತ್ರದುರ್ಗ: ತಾಲ್ಲೂಕಿನ ಗೊಲ್ಲನಕಟ್ಟೆ ಗ್ರಾಮವೊಂದರಲ್ಲೇ 85 ಮಂದಿಗೆ ಚಿಕೂನ್ ಗುನ್ಯಾ ದೃಢಪಟ್ಟಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

1,500 ಜನಸಂಖ್ಯೆ ಹೊಂದಿರುವ ಗ್ರಾಮದಲ್ಲಿ ಕಳೆದ 5 ದಿನಗಳಿಂದ ನೂರಾರು ಮಂದಿಗೆ ಜ್ವರ ಕಾಣಿಸಿಕೊಂಡಿತ್ತು. ಆರೋಗ್ಯ ಇಲಾಖೆ ಸಿಬ್ಬಂದಿ ತಪಾಸಣೆ ನಡೆಸಿ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದರು. ಮಂಗಳವಾರ ಫಲಿತಾಂಶ ಬಂದಿದ್ದು, 85 ಮಂದಿಗೆ ಚಿಕೂನ್ ಗುನ್ಯಾ ದೃಢಪಟ್ಟಿದೆ.

ಗ್ರಾಮದಲ್ಲಿ ಆರೋಗ್ಯ ಇಲಾಖೆಯ ಕ್ಷಿಪ್ರ ಕಾರ್ಯಾಚರಣೆ ಪಡೆ ಬೀಡು ಬಿಟ್ಟಿದೆ. ಸಂಚಾರ ಕ್ಲಿನಿಕ್ ತೆರೆಯಲಾಗಿದ್ದು, ಅಗತ್ಯ ಔಷಧಿ ಒದಗಿಸಲಾಗಿದೆ. ಗ್ರಾಮ ಪಂಚಾಯಿತಿ ವತಿಯಿಂದ ಲಾರ್ವಾ ಸಮೀಕ್ಷೆ ನಡೆಸಲಾಗುತ್ತಿದ್ದು, ಜನರಿಗೆ ಸ್ವಚ್ಛತೆಯ ಅರಿವು ಮೂಡಿಸಲಾಗುತ್ತಿದೆ.

‘85 ಜನರು ಜ್ವರ, ಮೈಕೈ ನೋವು, ಕೀಲು ನೋವಿನಿಂದ ಬಳಲುತ್ತಿದ್ದಾರೆ. ಇದನ್ನು ಹೊರತುಪಡಿಸಿ ಯಾರಿಗೂ ಗಂಭೀರ ಸಮಸ್ಯೆಗಳಿಲ್ಲ. ರೋಗ ಲಕ್ಷಣ ಆಧರಿಸಿ ಚಿಕಿತ್ಸೆ ನೀಡಲಾಗಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿ, ಆಂಬುಲೆನ್ಸ್ ಗ್ರಾಮದಲ್ಲಿರಿಸಲಾಗಿದೆ. ಎಲ್ಲರ ಆರೋಗ್ಯದ ಮೇಲೂ ನಿಗಾ ವಹಿಸಲಾಗಿದೆ’ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಂದ್ರಶೇಖರ ಕಂಬಾಳಿಮಠ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.