ಶುಕ್ರವಾರ, ಜನವರಿ 22, 2021
24 °C

ಈಜಲು ಹೋದ ಬಾಲಕ ಕೆರೆಯಲ್ಲಿ ಮುಳುಗಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಳ್ಳಕೆರೆ: ಇಲ್ಲಿನ ಬಳ್ಳಾರಿ ರಸ್ತೆ ಬಳಿಯ ಕರೆಕಲ್‍ಕೆರೆಯಲ್ಲಿ ಶನಿವಾರ ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಬಾಲಕ ಭವಾನಿ ಶಂಕರ್ (13) ಮೃತಪಟ್ಟ ಬಾಲಕ. ತಾತ ಹಾಗೂ ತಮ್ಮನ ಜತೆಯಲ್ಲಿ ಈಜಾಡಲು ಕೆರೆಗೆ ತೆರಳಿದ್ದ ಭವಾನಿ ಶಂಕರ್, ಕಾಲು ಜಾರಿ ಕೆರೆಗೆ ಬಿದ್ದಿದ್ದಾನೆ. 

ಶಾಸಕ ಟಿ. ರಘುಮೂರ್ತಿ, ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ, ಬಿಇಒ ಕೆ.ಎಸ್. ಸುರೇಶ್ ಆಸ್ಪತ್ರೆಗೆ ತೆರಳಿ ಬಾಲಕನ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಮಕ್ಕಳ ಮತ್ತು ಶಿಕ್ಷಕರ ಕಲ್ಯಾಣ ನಿಧಿಯಿಂದ ₹ 50 ಸಾವಿರ ಪರಿಹಾರ ಕೊಡಿಸು‌ದಾಗಿ ಬಿಇಒ ಕೆ.ಎ. ಸುರೇಶ್ ಭರವಸೆ ನೀಡಿದರು.
ತಾಲ್ಲೂಕು ಪಂಚಾಯಿತಿ ಸದಸ್ಯ ವೀರೇಶ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶಗೌಡ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು