ಮಂಗಳವಾರ, ಆಗಸ್ಟ್ 9, 2022
23 °C

17 ವರ್ಷದ ಪತ್ನಿ ಮೇಲೆ ಪತಿ ಹಾಗೂ ಆತನ ಸ್ನೇಹಿತರಿಂದ ಅತ್ಯಾಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಬಾಲಕಿಯನ್ನು ವಿವಾಹವಾದ ಪತಿ ಹಾಗೂ ಆತನ ಮೂವರು ಸ್ನೇಹಿತರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ನಗರದಲ್ಲಿ ನಡೆದಿದೆ. 17 ವರ್ಷದ ಬಾಲಕಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ತವರಿಗೆ ತೆರಳಿದ್ದ ಬಾಲಕಿಯನ್ನು ನಿರ್ಮಾಣ ಹಂತದ ಕಟ್ಟಡಕ್ಕೆ ಎಳೆದೊಯ್ದು ಕೃತ್ಯ ಎಸಗಲಾಗಿದೆ. ಬಾಲಕಿಯ ಪತಿ ಹಾಗೂ ಆತನ ಸ್ನೇಹಿತರ ವಿರುದ್ಧ ಅತ್ಯಾಚಾರ, ಕೊಲೆ ಯತ್ನ ಹಾಗೂ ಬಾಲ್ಯವಿವಾಹ ತಡೆ ಕಾಯ್ದೆಯಡಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೂನ್‌ 7ರಂದು ಬಾಲಕಿಗೆ ದೂರವಾಣಿ ಕರೆ ಮಾಡಿದ ಪತಿ, ಮಾಳಪ್ಪನಹಟ್ಟಿ ರಸ್ತೆಯ ಬಳಿ ಬರುವಂತೆ ಸೂಚಿಸಿದ್ದಾನೆ. ನಿರ್ಜನ ಪ್ರದೇಶದಲ್ಲಿರುವ ನಿರ್ಮಾಣ ಹಂತದ ಕಟ್ಟಡಕ್ಕೆ ಎಳೆದೊಯ್ದ ಪತಿಯೊಂದಿಗೆ ಮೂವರು ಸ್ನೇಹಿತರು ಇದ್ದರು. ಅಕ್ರಮ ಸಂಬಂಧದ ವಿಚಾರವಾಗಿ ಪತಿ ಹಾಗೂ ಪತ್ನಿಯ ನಡುವೆ ಗಲಾಟೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘ವಿವಸ್ತ್ರಗೊಳಿಸಿ ಸಿಗರೇಟಿನಿಂದ ದೇಹ ಸುಟ್ಟರು. ಅತ್ಯಾಚಾರ ನಡೆಸಲು ಮುಂದಾದಾಗ ಕೂಗಾಡುತ್ತಿದ್ದೆ. ತಲೆಗೆ ಬಿದ್ದ ಬಲವಾದ ಏಟಿನಿಂದ ಪ್ರಜ್ಞೆ ಕಳೆದುಕೊಂಡೆ. ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸುವಾಗ ಪ್ರಜ್ಞೆ ಮರಳಿತು. ಘಟನೆಯ ಬಗ್ಗೆ ಬಾಯಿಬಿಟ್ಟರೆ ಕೊಲೆ ಮಾಡುವುದಾಗಿ ಪತಿ ಬೆದರಿಸಿದ್ದನು’ ಎಂದು ದೂರಿನಲ್ಲಿ ಬಾಲಕಿ ವಿವರಿಸಿದ್ದಾಳೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು