ಮೊಳಕಾಲ್ಮುರು: ‘ನನಗಿನ್ನೂ 18 ವರ್ಷ ತುಂಬಿಲ್ಲ. ಆದರೂ ಮನೆಯವರು ಬಲವಂತವಾಗಿ ಮದುವೆ ಮಾಡಲು ಸಿದ್ಧತೆ ನಡೆಸಿದ್ದಾರೆ. ನನಗೆ ಇಷ್ಟು ಬೇಗ ಮದುವೆ ಮಾಡಿಕೊಳ್ಳಲು ಇಷ್ಟವಿಲ್ಲ ದಯವಿಟ್ಟು ರದ್ದುಪಡಿಸಿʼ ಎಂದು ಸ್ವತಃ ಬಾಲಕಿಯೇ ಶುಕ್ರವಾರ ಇಲ್ಲಿನ ಪೊಲೀಸ್ ಠಾಣೆಗೆ ಬಂದು ಹೇಳಿಕೆ ನೀಡಿದ್ದಾಳೆ.

ಸ್ಥಳೀಯ ಠಾಣೆಗೆ ಬಂದಿರುವ ತಾಲ್ಲೂಕಿನ ಗ್ರಾಮವೊಂದರ ಬಾಲಕಿ, ‘ಮನೆಯಲ್ಲಿ ಆಗಸ್ಟ್ 17ರಂದು ಮದುವೆ ಮಾಡುತ್ತಿದ್ದಾರೆ. ನಾನು ಶಾಲೆಯಲ್ಲಿ ಪೊಲೀಸ್ ಇಲಾಖೆಯು ಬಾಲ್ಯವಿವಾಹ ಜಾಗೃತಿ ಕಾರ್ಯಕ್ರಮದಲ್ಲಿ ಹೇಳಿದ್ದನ್ನು ಗಮನಿಸಿ ಠಾಣೆಗೆ ಬಂದು ನೆರವು ಕೋರುತ್ತಿದ್ದೇನೆ. ಅಮ್ಮ, ಅಪ್ಪ ಹಾಗೂ ಅಣ್ಣ ಮದುವೆ ಪರವಾಗಿದ್ದಾರೆ’ ಎಂದು ಹೇಳಿಕೊಂಡಿದ್ದಾಳೆ.

ಹೇಳಿಕೆ ಆಲಿಸಿದ ಪಿಎಸ್ಐ ಮಹೇಶ್ ಹೊಸಪೇಟೆ ತಾಲ್ಲೂಕು ಶಿಶು ಅಭಿವೃದ್ಧಿ ಅಧಿಕಾರಿ ನವೀನ್ಕುಮಾರ್ ಅವರ ಗಮನಕ್ಕೆ ತಂದಿದ್ದಾರೆ. ನಂತರ ಪಾಲಕರನ್ನು ಠಾಣೆಗೆ ಕರೆಸಿ ಮದುವೆ ಸಿದ್ಧತೆ ಮಾಹಿತಿ ಪಡೆದಿದ್ದಾರೆ. ಕಾನೂನು ಪ್ರಕಾರ ಬಾಲಕಿಯ ಮದುವೆ ಮಾಡುವಂತಿಲ್ಲ ಎಂದು ಬುದ್ದಿ ಹೇಳಿದ್ದಾರೆ. ಪಾಲಕರು ಮದುವೆ ಸಿದ್ಧತೆ ಮಾಡಿಕೊಂಡಿಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ ಎನ್ನಲಾಗಿದೆ.

ಸಂಜೆಯೇ ಬಾಲಕಿಯನ್ನು ಜಿಲ್ಲಾ ಮಕ್ಕಳ ಕಲ್ಯಾಣ ಕೇಂದ್ರಕ್ಕೆ ದಾಖಲು ಮಾಡಲಾಗಿದೆ ಎಂದು ಶಿಶು ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.