ಚಿಕ್ಕಜಾಜೂರು: ‘ಮಕ್ಕಳು ಮತ್ತು ಮಹಿಳೆಯರ ಕಳ್ಳಸಾಗಣೆ ತಡೆಗಟ್ಟಲು ರೈಲ್ವೆ ಪ್ರಯಾಣಿಕರು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯವಿದೆ’ ಎಂದು ಚಿತ್ರದುರ್ಗ ಆಶ್ರಿತ ಸಂಸ್ಥೆಯ ಜಿಲ್ಲಾ ಸಮನ್ವಯಾಧಿಕಾರಿ ಡಿ.ಒ.ಮುರಾರ್ಜಿ ತಿಳಿಸಿದರು.

ಚಿಕ್ಕಜಾಜೂರು ರೈಲ್ವೆ ನಿಲ್ದಾಣದಲ್ಲಿ ಚಿತ್ರದುರ್ಗ ಆಶ್ರಿತ ಸಂಸ್ಥೆ, ನೈರುತ್ಯ ರೈಲ್ವೆ ಇಲಾಖೆ ಹಾಗೂ ರೈಲ್ವೆ ಪೊಲೀಸ್ ಇಲಾಖೆ ಸಹಯೋಗದಲ್ಲಿ ನಡೆದ ಮಾನವ ಕಳ್ಳ ಸಾಗಣೆ ವಿರೋಧಿ ದಿನದ ಅಂಗವಾಗಿ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮಕ್ಕಳಿಗೆ, ಮಹಿಳೆಯರಿಗೆ ದೇಶ, ವಿದೇಶಗಳಲ್ಲಿ ಕೆಲಸ ಕೊಡಿಸುವ ಆಮಿಷ ಒಡ್ಡುವ ಕುತಂತ್ರಗಳು ನಡೆಯುತ್ತಿದ್ದು, ಆ ಮೂಲಕ ಮಹಿಳೆ ಹಾಗೂ ಮಕ್ಕಳನ್ನು ಮಾರಾಟ ಮಾಡುತ್ತಿದ್ದಾರೆ. ನಗರ ಪ್ರದೇಶಗಳಲ್ಲಿ, ರೈಲ್ವೆ ನಿಲ್ದಾಣಗಳಲ್ಲಿ ಅನಾಥ ಮಕ್ಕಳನ್ನು ಬಳಸಿಕೊಂಡು ಭಿಕ್ಷಾಟನೆಗೆ ದೂಡುವ ಜಾಲಗಳು ಸಾಮಾಜಿಕ ಪಿಡುಗಾಗಿ ಬೆಳೆಯುತ್ತಿದ್ದು, ಅದನ್ನು ಮಟ್ಟ ಹಾಕಲು ಸಾರ್ವಜನಿಕರ ಸಹಕಾರ ಅಗತ್ಯವಿದೆ’ ಎಂದರು.

‘ಜಿಲ್ಲೆಯಲ್ಲಿ ಆಶ್ರಿತ ಸಂಸ್ಥೆಯು ಮಕ್ಕಳು ಮತ್ತು ಮಹಿಳೆಯರ ಹಕ್ಕುಗಳ ರಕ್ಷಣೆಗಾಗಿ ಕೆಲಸ ಮಾಡುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.

ರೈಲ್ವೆ ರಕ್ಷಣಾ ದಳದ ಎಸ್.ಐ. ಚಂದ್ರಶೇಖರ್ ಮಾತನಾಡಿದರು. ರೈಲ್ವೆ ನಿಲ್ದಾಣ ವ್ಯವಸ್ಥಾಪಕ ವಿ. ನಾಗಪ್ರತಾಪ್, ಹೆಡ್ಕಾನ್ಸ್ಟೆಬಲ್ ಈರನಾಗಪ್ಪ, ಆಶ್ರಿತ ಸಂಸ್ಥೆಯ ತಿಪ್ಪೇಸ್ವಾಮಿ, ಹರ್ಷವರ್ಧನ್, ದೇವೀರಮ್ಮ, ರೈಲ್ವೆ ಇಲಾಖೆ ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.