ಚಳ್ಳಕೆರೆ (ಚಿತ್ರದುರ್ಗ): ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ನಸುಕಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್ಪೆಕ್ಟರ್ಗಳು (ಆರ್ಎಸ್ಐ) ಮೃತಪಟ್ಟಿದ್ದಾರೆ.

ಮಂಜುನಾಥ್ (32), ಅಮರೇಶ್ (25) ಹಾಗೂ ಸಚಿನ್ (31) ಸಾವಿಗೀಡಾದವರು.

ಸ್ನೇಹಿತನ ಮದುವೆಗೆಂದು ಬೆಂಗಳೂರಿನಿಂದ ಬಳ್ಳಾರಿಗೆ ಹೊರಟಿದ್ದರು. ಇವರಿದ್ದ ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಸಬ್ ಇನ್ಸ್ಪೆಕ್ಟರ್ ಈಶ್ವರ್, ಆರ್ಎಸ್ಐ ಮಹಾಂತೇಶ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ದಾವಣಗೆರೆಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎಲ್ಲರೂ ಪೊಲೀಸ್ ಇಲಾಖೆಗೆ ಹೊಸದಾಗಿ ನೇಮಕವಾಗಿದ್ದರು. ಒಬ್ಬರು ಮೈಸೂರಿನಲ್ಲಿ, ಉಳಿದ ನಾಲ್ವರು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕ ಟಿ.ರಘುಮೂರ್ತಿ, ಎಸ್ಪಿ ರಂಜಿತ್ ಕುಮಾರ್ ಬಂಡಾರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಮೂವರ ಸಾವು ನೋವಿನ ವಿಚಾರ. ಇವರು ಕರ್ತವ್ಯದಲ್ಲಿದ್ದರೇ ಅಥವಾ ರಜೆ ಮೇಲಿದ್ದರೆ ಎಂದು ಪರಿಶೀಲಿಸಲಾಗುವುದು. ಮೃತರ ಕುಟುಂಬಗಳಿಗೆ ಸರ್ಕಾರದಿಂದ ನೆರವು ಒದಗಿಸಲಾಗುವುದು.
-ಡಾ.ಜಿ.ಪರಮೇಶ್ವರ, ಗೃಹ ಸಚಿವ
.ಚಿತ್ರದುರ್ಗ: ನಿರ್ವಹಣೆ ಕೊರತೆಗೆ ನಲುಗಿದ ತೋಟಗಾರಿಕಾ ಕ್ಷೇತ್ರ.ಚಿತ್ರದುರ್ಗ: ಅಳತೆಯಲ್ಲಿ ಮೋಸ, ಹೂವು ಬೆಳೆಗಾರರ ಪ್ರತಿಭಟನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.