ಚಿತ್ರದುರ್ಗ: ‘ವೈಯಕ್ತಿಕ ದ್ವೇಷ, ಅಸೂಯೆಯಿಂದ ಸರ್ಕಾರಿ ನೌಕರರ ವಿರುದ್ಧ ಸಲ್ಲಿಸುವ ದೂರು ಅರ್ಜಿಗಳಿಗೆ ಪೂರಕ ದಾಖಲೆ ಒದಗಿಸಬೇಕಿದೆ. ದಾಖಲೆ ಇಲ್ಲದ ಅರ್ಜಿ ಆಧರಿಸಿ ನೌಕರರ ವಿರುದ್ಧ ಕ್ರಮ ಕೈಗೊಳ್ಳದಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ ಕುರಿತು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಜಂಟಿ ಸಮಾಲೋಚನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಸರ್ಕಾರದ ಸುತ್ತೋಲೆಯನ್ವಯ ರಾಜ್ಯ ಸರ್ಕಾರಿ ಅಧಿಕಾರಿ, ಸಿಬ್ಬಂದಿ ಕುರಿತು ಅನಾಮಧೇಯ ಪತ್ರ, ಆರೋಪಕ್ಕೆ ಪೂರಕವಾಗಿರುವ ದಾಖಲೆಗಳನ್ನು ಸಲ್ಲಿಸದ ದೂರುಗಳನ್ನು ಪರಿಗಣಿಸಬೇಕಿಲ್ಲ. ಜಿಲ್ಲೆಯಲ್ಲಿ ಕೆಲವು ಅಧಿಕಾರಿಗಳು, ಆಧಾರ ರಹಿತ ಮತ್ತು ಅನಾಮಧೇಯ ದೂರು ಪತ್ರಗಳನ್ನು ಆಧರಿಸಿ, ನೌಕರರ ವಿರುದ್ಧ ನೇರವಾಗಿ ತನಿಖೆಗೆ ಒಳಪಡಿಸುತ್ತಿರುವುದು ಕಂಡುಬಂದಿದೆ. ಇದು ಸರ್ಕಾರಿ ನೌಕರರು ನಿರ್ಭೀತಿಯಿಂದ, ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಲು ತೊಂದರೆಯಾಗುತ್ತಿದೆ’ ಎಂದು ಹೇಳಿದರು.

‘ಅನವಶ್ಯಕ ದೂರುಗಳು ಬಂದಾಗ ಸರ್ಕಾರಿ ನೌಕರರ ಆತ್ಮಸ್ಥೈರ್ಯ ಕುಸಿಯುತ್ತದೆ. ನೌಕರರ ವಿರುದ್ಧ ಯಾವುದೇ ದೂರು ಸಲ್ಲಿಕೆಯಾದಾಗ, ದೂರುದಾರರ ಹೆಸರು, ವಿಳಾಸ ಖಚಿತಪಡಿಸಿಕೊಂಡು, ದೂರುದಾರರು ಆರೋಪಕ್ಕೆ ಪೂರಕ ದಾಖಲೆಗಳನ್ನು ಒದಗಿಸುವಂತೆ ತಿಳಿಸಬೇಕು. ದಾಖಲೆ ಅಥವಾ ಮಾಹಿತಿ ಒದಗಿಸಿದ ನಂತರ ಆರೋಪವು ಮೇಲ್ನೋಟಕ್ಕೆ ಕಂಡುಬಂದಲ್ಲಿ, ಅಂತಹ ದೂರು ಅರ್ಜಿಗಳಿಗೆ ಸಂಬಂಧಿಸಿದಂತೆ ಮಾತ್ರ ಪ್ರಾಥಮಿಕ ತನಿಖೆ ನಡೆಸಬೇಕು’ ಎಂದರು.

ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಾಲತೇಶ ಮುದ್ದಜ್ಜಿ ಮಾತನಾಡಿ, ‘ಯಾವುದೇ ದಾಖಲಾತಿಗಳನ್ನು ನೀಡದಿರುವ ಅರ್ಜಿಗಳನ್ನು ಪರಿಗಣಿಸದಂತೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು’ ಎಂದು ಒತ್ತಾಯಿಸಿದರು.

‘ಅಂತಹ ದೂರುಗಳನ್ನು ಮಾನ್ಯ ಮಾಡಬಾರದು, ಪೂರಕ ದಾಖಲೆಗಳಿರಬೇಕು. ಸತ್ಯಾಸತ್ಯತೆ ಪರಿಶೀಲಿಸದೇ ತನಿಖೆಗೆ ಆದೇಶಿಸುವುದು ಸೂಕ್ತವಲ್ಲ. ಅಧಿಕಾರಗಳು ಸುತ್ತೋಲೆಯಲ್ಲಿನ ಅಂಶಗಳನ್ನು ಉಲ್ಲಂಘಿಸಿ, ನೌಕರರ ವಿರುದ್ಧ ನೇರ ಕ್ರಮಕ್ಕೆ ಮುಂದಾಗದಂತೆ ಹಾಗೂ ಸರ್ಕಾರದ ನಿರ್ದೇಶನಗಳನ್ನು ಪಾಲಿಸುವಂತೆ ಸೂಚಿಸಿ, ಅಧಿಕಾರಿಗಳಿಗೆ ಮತ್ತೊಮ್ಮೆ ಸುತ್ತೋಲೆ ಹೊರಡಿಸಲಾಗುವುದು’ ಎಂದು ಕುಮಾರಸ್ವಾಮಿ ಹೇಳಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ವೆಂಕಟೇಶ್ ನಾಯ್ಕ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ, ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ತುಕಾರಾಂರಾವ್ ಬಿ.ವಿ., ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಖಜಾಂಜಿ ಮಲ್ಲಿಕಾರ್ಜುನ್, ರಾಜ್ಯ ಪರಿಷತ್ ಸದಸ್ಯ ರಾಜಪ್ಪ, ರಮೇಶ್, ಶಾಂತಕುಮಾರ್, ತಿಪ್ಪೇಶ್, ಸಿ.ಟಿ.ವೀರೇಶ್, ಅಧ್ಯಕ್ಷ ರಂಗಪ್ಪ ಇದ್ದರು.

ಮಹಿಳಾ ನೌಕರರಿಗೆ ರಜೆ ಕೊಡಿ

‘ಮಹಿಳಾ ಸರ್ಕಾರಿ ನೌಕರರಿಗೆ ಇಡೀ ಸೇವಾ ಅವಧಿಯಲ್ಲಿ 180 ದಿನಗಳ ಶಿಶುಪಾಲನೆ ರಜೆ ಮಂಜೂರು ಮಾಡಬೇಕು. ಇದರ ಜೊತೆಗೆ 18 ರಿಂದ 52 ವರ್ಷದ ಒಳಗಿನ ಮಹಿಳಾ ನೌಕರರಿಗೆ ಪ್ರತಿ ತಿಂಗಳು 1 ಋತುಚಕ್ರ ರಜೆಯ ಸೌಲಭ್ಯ ನೀಡುವಂತೆ ಈಗಾಗಲೇ ಸರ್ಕಾರವೇ ಆದೇಶ ಹೊರಡಿಸಿದೆ. ಇಲಾಖಾವಾರು ಪ್ರತ್ಯೇಕ ಆದೇಶ ಬಂದಿಲ್ಲ ಎನ್ನುವ ನೆಪ ಹೇಳಬಾರದು. ಕ್ಯಾನ್ಸರ್ಗೆ ತುತ್ತಾಗಿ ಕಿಮೋಥೆರಪಿ ಚಿಕಿತ್ಸೆ ಪಡೆಯುತ್ತಿರುವ ಸರ್ಕಾರಿ ನೌಕರರಿಗೆ ಗರಿಷ್ಠ 6 ತಿಂಗಳ ಮಿತಿಗೆ ಒಳಪಟ್ಟು ಸಾಂದರ್ಭಿಕ ರಜೆ ಮಂಜೂರು ಮಾಡಬೇಕು’ ಎಂದು ಬಿ.ಟಿ.ಕುಮಾರಸ್ವಾಮಿ ಹೇಳಿದರು.

‘ರಾಜ್ಯ ಸರ್ಕಾರಿ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ನೀಡುವಂತಹ ಕರ್ನಾಟಕ ಆರೊಗ್ಯ ಸಂಜೀವಿನಿ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಲಾಗಿದೆ. ನೋಂದಾಯಿತವಾಗಿರುವ ಖಾಸಗಿ ಆಸ್ಪತ್ರೆಗಳು ಸಿಜಿಎಚ್ಎಸ್ ಚಿಕಿತ್ಸಾ ದರ ಕಡಿಮೆ ಇದೆ ಎಂಬ ಸಬೂಬು ಹೇಳಿ ಚಿಕಿತ್ಸೆ ನೀಡಲು ನಿರಾಕರಿಸುತ್ತಿದ್ದಾರೆ’ ಎಂದು ಮಾಲತೇಶ್ ಮುದ್ದಜ್ಜಿ ಮನವಿ ಮಾಡಿದರು. ‘ಯೋಜನೆ ಅನುಷ್ಠಾನಕ್ಕೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಕುಷ್ಠರೋಗ ನಿವಾರಣಾ ಅಧಿಕಾರಿಗಳನ್ನು ಸದಸ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಅಸಹಕಾರ ತೋರುವ ಆಸ್ಪತ್ರೆಗಳ ವಿರುದ್ಧ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.