ಚಿತ್ರದುರ್ಗ: ಕಳೆದೆರಡು ದಿನದಿಂದ ಜಿಲ್ಲೆಯ ವಿವಿಧೆಡೆ ಹದ ಮಳೆಯಾಗಿದ್ದು, ರೈತರು ಸಿರಿಧಾನ್ಯ ಹಾಗೂ ಮೆಕ್ಕೆಜೋಳ, ಸೂರ್ಯಕಾಂತಿ, ಶೇಂಗಾ, ತೊಗರಿ ಬಿತ್ತನೆಗೆ ಭೂಮಿ ಹದ ಮಾಡಿಕೊಳ್ಳುತ್ತಿದ್ದು ಬಿತ್ತನೆ ಬೀಜ, ರಸಗೊಬ್ಬರ ಸಂಗ್ರಹದಲ್ಲಿ ತೊಡಗಿದ್ದಾರೆ.

ಹೊಸದುರ್ಗ ತಾಲ್ಲೂಕಿನಲ್ಲಿ ಈಗಾಗಲೇ ಮುಂಗಾರು ಪೂರ್ವ ಅವಧಿಯ ಬಿತ್ತನೆ ನಡೆದಿದೆ. ಚಿತ್ರದುರ್ಗ ತಾಲ್ಲೂಕು, ಚಳ್ಳಕೆರೆ, ಹಿರಿಯೂರು, ಮೊಳಕಾಲ್ಮುರು ಭಾಗದಲ್ಲಿ ಮೆಕ್ಕೆಜೋಳ ಹಾಗೂ ಸೂರ್ಯಕಾಂತಿ ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಮೇ ಅಂತಿಮ ವಾರದಲ್ಲಿ ಬಿತ್ತನೆ ಆರಂಭಗೊಳ್ಳಲಿದ್ದು, ರಸಗೊಬ್ಬರ ಖರೀದಿಸಲಾಗುತ್ತಿದೆ ಎಂದು ರೈತರು ಹೇಳಿದ್ದಾರೆ.

ಚಿತ್ರದುರ್ಗ ತಾಲ್ಲೂಕು ಸೇರಿದಂತೆ ವಿವಿಧೆಡೆ ಗುರುವಾರ ತಡರಾತ್ರಿ ಆರಂಭವಾದ ಮಳೆ ಶುಕ್ರವಾರ ಬೆಳಿಗ್ಗೆವರೆಗೂ ಸುರಿದಿದೆ. ಜಿಲ್ಲೆಯಲ್ಲಿ ಸರಾಸರಿ 1.78 ಸೆಂ.ಮೀ ಮಳೆಯಾಗಿದೆ. ಭೂಮಿ ಹದವಾಗಿದ್ದು, ಹಸನು ಮಾಡುವ ಚಟುವಟಿಕೆ ಆರಂಭಿಸಲಾಗಿದೆ. ಚದುರಿದಂತೆ ಮಳೆಯಾದರೂ ಬಹುತೇಕ ಭಾಗದಲ್ಲಿ ಕೃಷಿ ಚಟುವಟಿಕೆ ಆರಂಭಿಸುವಷ್ಟು ಮಳೆಯಾಗಿದೆ.

‘ಮೇ 25ರ ನಂತರ ರೇವತಿ ಮಳೆ ಆರಂಭವಾಗುತ್ತಿದ್ದಂತೆಯೇ ಸೂರ್ಯಕಾಂತಿ, ಮೆಕ್ಕೆಜೋಳ ಬಿತ್ತನೆ ಆರಂಭವಾಗುತ್ತದೆ. ಜೂನ್ ಅಂತಿಮ ವಾರದಿಂದ ಈರುಳ್ಳಿ, ಶೇಂಗಾ, ತೊಗರಿ ಬಿತ್ತನೆ ಆರಂಭಗೊಳ್ಳಲಿದೆ. ಇನ್ನೊಂದು ಹದ ಮಳೆಯಾದರೆ ಜಿಲ್ಲೆಯಾದ್ಯಂತ ಕೃಷಿ ಚಟುವಟಿಕೆಗಳು ಗರಿಗೆದರಲಿವೆ. ಈಗಷ್ಟೇ ಮಳೆಯಾಗಿರುವ ಕಾರಣ ಇನ್ನೊಂದು ಹದ ಮಳೆ ಬೇಕಿದೆ’ ಎಂದು ರೈತರೊಬ್ಬರು ತಿಳಿಸಿದರು.

ರಸಗೊಬ್ಬರಕ್ಕೆ ಬೇಡಿಕೆ: ಬಿತ್ತನೆ ಕಾರ್ಯ ಆರಂಭಗೊಳ್ಳಲಿರುವ ಕಾರಣ ರೈತರು ರಸಗೊಬ್ಬರಕ್ಕೆ ಕೃಷಿ ಇಲಾಖೆ ಕಚೇರಿಗೆ ಎಡತಾಕುತ್ತಿದ್ದಾರೆ. ಪ್ರತಿ ವರ್ಷ ಜಿಲ್ಲೆಗೆ 75,000 ಟನ್ ರಸಗೊಬ್ಬರದ ಬೇಡಿಕೆ ಇದೆ. ಆದರೆ, ಸದ್ಯ ಜಿಲ್ಲೆಯಲ್ಲಿ 20,000 ಟನ್ ರಸಗೊಬ್ಬರ ಸಂಗ್ರಹ ಮಾತ್ರವಿದ್ದು ಬಿತ್ತನೆ ಆರಂಭವಾದಾಗ ಆಗುವ ಕೊರತೆಯನ್ನು ಕೃಷಿ ಇಲಾಖೆ ಅಧಿಕಾರಿಗಳು ಹೇಗೆ ನಿಭಾಯಿಸುತ್ತಾರೆ ಎಂಬುದು ರೈತರಲ್ಲಿ ಆತಂಕ ಸೃಷ್ಟಿಸಿದೆ. ಮಳೆ ಆರಂಭವಾದ ನಂತರ ಜಿಲ್ಲೆಯಲ್ಲಿ 4,000 ಟನ್ ರಸಗೊಬ್ಬರ ವಿತರಣೆ ಮಾಡಲಾಗಿದೆ.

ಕೃಷಿ ಇಲಾಖೆಯಲ್ಲಿರುವ ರೈತರ ಎಫ್ಐಡಿ ಆಧರಿಸಿ ರಸಗೊಬ್ಬರ ವಿತರಿಸಲಾಗುವುದು ಎಂದು ಸರ್ಕಾರ ಹೇಳಿರುವುದು ರೈತರ ಆತಂಕ ಹೆಚ್ಚಳಕ್ಕೆ ಕಾರಣವಾಗಿದೆ. ಹೆಚ್ಚಿನ ರಸಗೊಬ್ಬರ ಖರೀದಿ, ಅನವಶ್ಯಕ ಸಂಗ್ರಹ ತಪ್ಪಿಸುವುದಕ್ಕಾಗಿ ರೈತರು ಹೊಂದಿರುವ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ರಸಗೊಬ್ಬರ ವಿತರಿಸುವಂತೆ ಸರ್ಕಾರದ ಸೂಚನೆ ಇದೆ.

‘1 ಎಕರೆ ಜಮೀನಿಗೆ ಎಷ್ಟು ರಸಗೊಬ್ಬರ ನೀಡುತ್ತಾರೆ ಎಂಬ ಬಗ್ಗೆ ಮಾಹಿತಿ ಇಲ್ಲ. ನಾವು ಕೂಡ ಕೃಷಿ ಇಲಾಖೆ ಕಚೇರಿಗೆ ತೆರಳಿ ಮಾಹಿತಿ ಪಡೆಯುತ್ತಿದ್ದೇವೆ. ಏನೇ ಆದರೂ ಮುಂಗಾರು ಆರಂಭವಾದಾಗ ರೈತರಿಗೆ ಕೊರತೆಯಾಗದಂತೆ ರಸಗೊಬ್ಬರ ವಿತರಣೆಗೆ ಕ್ರಮ ವಹಿಸಬೇಕು’ ಎಂದು ರೈತಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್ ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-44-2046099187

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.