ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೊಳಲ್ಕೆರೆ | ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

Published 21 ಫೆಬ್ರುವರಿ 2024, 16:18 IST
Last Updated 21 ಫೆಬ್ರುವರಿ 2024, 16:18 IST
ಅಕ್ಷರ ಗಾತ್ರ

ಹೊಳಲ್ಕೆರೆ: ಚುನಾವಣೆಗೂ ಮುಂಚೆ ಭರವಸೆ ನೀಡಿದಂತೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಬುಧವಾರ ಪ್ರತಿಭಟನೆ ನಡೆಸಿದರು.

‘ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ ಐದು ಗ್ಯಾರಂಟಿ ಯೋಜನೆಗಳಿಗೆ ಅನುದಾನ ಮೀಸಲಿಟ್ಟಿದೆ. ಆದರೆ ಚುನಾವಣೆಗೂ ಮೊದಲು ಹೇಳಿದಂತೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಿಸಲು ಹಣ ತೆಗೆದಿಟ್ಟಿಲ್ಲ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಚುನಾವಣೆಗೂ ಮುಂಚೆ ನಮ್ಮ ಗೌರವಧನ ಹೆಚ್ಚಿಸುವುದಾಗಿ ಹೇಳಿದ್ದರು. ಅದರಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ ₹15,000, ಸಹಾಯಕಿಯರಿಗೆ ₹10,000 ಗೌರವಧನ ನೀಡಬೇಕು. ನಿವೃತ್ತರಾದವರಿಗೆ ₹3 ಲಕ್ಷ ಇಡಿಗಂಟು ನೀಡಬೇಕು’ ಎಂದು ಆಗ್ರಹಿಸಿದರು.

ಶಾಸಕ ಎಂ.ಚಂದ್ರಪ್ಪ ಅವರಿಗೆ ಬರೆದ ಮನವಿ ಪತ್ರವನ್ನು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಬಿ.ಸಿದ್ದೇಶ್ ಅವರಿಗೆ ಸಲ್ಲಿಸಿದರು.

ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಡಿ.ನಿರ್ಮಲಾ, ಸಾಜೀದಾ, ಟಿ.ಗಂಗಮ್ಮ, ಅಮೀನಾಬಿ, ಎಂ.ವಿ.ಜಯಮ್ಮ, ಚಂದ್ರಮತಿ, ಹೊನ್ನಮ್ಮ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT