ಚಿತ್ರದುರ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲೆಯ ವಿವಿಧ ತಾಲ್ಲೂಕುಗಳ ಅಂಗನವಾಡಿಗಳಲ್ಲಿ ಖಾಲಿ ಇರುವ ಒಟ್ಟು 93 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಚಿತ್ರದುರ್ಗ 15 ಹುದ್ದೆ, ಭರಮಸಾಗರ 14, ಚಳ್ಳಕೆರೆ 14, ಹಿರಿಯೂರು 13, ಹೊಳಲ್ಕೆರೆ 13, ಹೊಸದುರ್ಗ 14 ಮತ್ತು ಮೊಳಕಾಲ್ಮುರಿನಲ್ಲಿ 10 ಹುದ್ದೆಗಳು ಖಾಲಿಯಿವೆ. ಕಾರ್ಯಕರ್ತೆಯರಿಗೆ ಮಾಸಿಕ ₹ 5,500 ಹಾಗೂ ಸಹಾಯಕಿಯರಿಗೆ ಮಾಸಿಕ ₹ 3,000 ಗೌರವಧನ ನೀಡಲಾಗುವುದು.

18 ರಿಂದ 35 ವರ್ಷದೊಳಗಿನ ಮಹಿಳೆಯರು ಅರ್ಜಿ ಸಲ್ಲಿಸಬಹುದು. ಕಾರ್ಯಕರ್ತೆ ಹುದ್ದೆ ದ್ವಿತೀಯ ಪಿಯುಸಿ ತೇರ್ಗಡೆಯಾಗಿರಬೇಕು. ಒಂದು ವೇಳೆ ಪಿಯುಸಿ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದರೆ 10ನೇ ತರಗತಿ ಪಾಸಾದವರನ್ನು ಪರಿಗಣಿಸಲಾಗುವುದು. ಸಹಾಯಕಿ ಹುದ್ದೆಗೆ ಕನಿಷ್ಠ 10ನೇ ತರಗತಿ ಪಾಸಾಗಿರಬೇಕು. ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ 7ನೇ ತರಗತಿ ಪಾಸಾದವರನ್ನು ಪರಿಗಣಿಸಲಾಗುತ್ತದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜೂನ್ 8ರ ಒಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-44-1507580459

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.