ಚಿತ್ರದುರ್ಗ: ನಾಲ್ಕು ತಿಂಗಳಿನಿಂದ ಬಾಕಿ ಇರುವ ಪ್ರೋತ್ಸಾಹಧನ ಹಾಗೂ ಎರಡು ತಿಂಗಳ ಗೌರವಧನ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ಎಐಯುಟಿಯುಸಿ) ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಜಮಾಯಿಸಿದ ಕಾರ್ಯಕರ್ತೆಯರು, ‘ಸಕಾಲಕ್ಕೆ ಮಾಸಿಕ ಗೌರವಧನ, ಪ್ರೋತ್ಸಾಹಧನ ಬರುತ್ತಿಲ್ಲ. ಇದರಿಂದ ಜೀವನ ನಿರ್ವಹಣೆ ಕಷ್ಟವಾಗಿದೆ. ನಮ್ಮ ನೋವು ಯಾರು ಅರ್ಥ ಮಾಡಿಕೊಳ್ಳುತ್ತಿಲ್ಲ’ ಎಂದು ಅಳಲು ತೋಡಿಕೊಂಡರು.

‘ಕೆಲಸ ಮಾಡಿದಷ್ಟು ಕೇಂದ್ರದ ಪ್ರೋತ್ಸಾಹಧನ ಬರುತ್ತಿಲ್ಲ. ಇದರ ನಡುವೆ ಗೌರವಧನ, ಪ್ರೋತ್ಸಾಹಧನ ಕಡಿತ ಮಾಡುವ ಕಾರ್ಯ ನಡೆಯುತ್ತಿದೆ. ಜಿಲ್ಲಾ, ತಾಲ್ಲೂಕು ಹಂತದಲ್ಲಿ ಸಮಸ್ಯೆ ಬಗೆಹರಿಸಲು ಕೇಳಿದರೆ, ರಾಜ್ಯಮಟ್ಟದ ಅಧಿಕಾರಿಗಳ ಕಡೆ ಕೈ ತೋರುತ್ತಾರೆ. ಇದರಿಂದ ನಮ್ಮ ಸಮಸ್ಯೆಗಳಿಗೆ ಪರಿಹಾರ ದೂರದ ಮಾತಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ 9 ವಿವಿಧ ಸೇವೆಗಳನ್ನು ಆಶಾ ನಿಧಿ ತಂತ್ರಾಂಶದಲ್ಲಿ ನಿಷ್ಕ್ರಿಯಗೊಳಿಸಲಾಗಿದೆ. ಇದರಿಂದ ಪ್ರತಿ ಕಾರ್ಯಕರ್ತೆಗೆ ₹ 500 ರಿಂದ ₹ 1,000 ದವರೆಗೆ ಪ್ರೋತ್ಸಾಹಧನ ಕಡಿತವಾಗಲಿದೆ. ಆದ್ದರಿಂದ ಇಲಾಖೆಯ ಸೇವೆಗಳನ್ನು ಮುಂದುವರಿಸಿ ಪ್ರೋತ್ಸಾಹಧನ ನೀಡಲು ಕ್ರಮಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

‘ಆ್ಯಪ್ ಮೂಲಕ ದಾಖಲಾತಿ ಮಾಡಿಸುವುದನ್ನು ಕೈಬಿಡಬೇಕು, ಮೌಲ್ಯಮಾಪನ ಹೆಸರಲ್ಲಿ ಆಶಾಗಳಿಗೆ ಆಗುತ್ತಿರುವ ಶೋಷಣೆ ನಿಲ್ಲಿಸಬೇಕು. ನಿವೃತ್ತಿ ಆಗಿರುವವರಿಗೆ ಇಡಿಗಂಟು ನೀಡಬೇಕು. ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರಿಸಬೇಕು’ ಎಂದು ಒತ್ತಾಯಿಸಿದರು.

‘2025ರ ಜನವರಿಯಲ್ಲಿ ಮುಖ್ಯಮಂತ್ರಿ ಘೋಷಿಸಿದಂತೆ ಕನಿಷ್ಠ ಮಾಸಿಕ ₹ 10,000 ಗೌರವಧನ ನೀಡಲು ಸೂಕ್ತ ಕ್ರಮ ಕೈಗೊಳ್ಳಬೇಕು. ಜತೆಗೆ ಬಜೆಟ್ನಲ್ಲಿ ರಾಜ್ಯ ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ಹೆಚ್ಚಳ ಮಾಡಿರುವಂತೆ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ₹1,000 ಹೆಚ್ಚಳ ಮಾಡಬೇಕು. ಸಮಸ್ಯೆಗಳ ಪರಿಹಾರಕ್ಕೆ ಕೂಡಲೇ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ಕರೆಯಬೇಕು’ ಎಂದು ಮನವಿ ಮಾಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಸ್.ಆಕಾಶ್ ಅವರಿಗೆ ಮನವಿ ಸಲ್ಲಿಸಿದರು. ಎಐಯುಟಿಯುಸಿ ಜಿಲ್ಲಾ ಮುಖಂಡರಾದ ರವಿಕುಮಾರ್, ಆಶಾ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಗಿರಿಜಮ್ಮ, ಕಾರ್ಯಕರ್ತೆಯರಾದ ಲಕ್ಷ್ಮಿಬಾಯಿ, ಗುರುಶಾಂತ, ನಾಗವೇಣಿ, ಪುಟ್ಟಮ್ಮ, ಸವಿತಾ, ನೇತ್ರಾವತಿ, ಫಾತೀಮಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-44-1913959932

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.