ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿರಿಗೆರೆ | ಆಯುಷ್ಮಾನ್‌ ಕಾರ್ಡ್‌ಗಳ ಸದುಪಯೋಗ ಮಾಡಿಕೊಳ್ಳಿ

ವೈದ್ಯಾಧಿಕಾರಿ ಬಿ.ವಿ. ಗಿರೀಶ್‌ ಸಲಹೆ
Published 6 ಡಿಸೆಂಬರ್ 2023, 13:24 IST
Last Updated 6 ಡಿಸೆಂಬರ್ 2023, 13:24 IST
ಅಕ್ಷರ ಗಾತ್ರ

ಸಿರಿಗೆರೆ: ಆಯುಷ್ಮಾನ್‌ ಭಾರತ್‌ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಚಿಕಿತ್ಸೆ ಪಡೆಯಲು ಆಯುಷ್ಮಾನ್‌ ಕಾರ್ಡುಗಳನ್ನು ಮಾಡಿಸಿಕೊಳ್ಳಿ ಎಂದು ತಾಲ್ಲೂಕು ವೈದ್ಯಾಧಿಕಾರಿ ಬಿ.ವಿ. ಗಿರೀಶ್‌ ಹೇಳಿದರು.

ಸಮೀಪದ ಲಕ್ಷ್ಮೀಸಾಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕರಿಯಮ್ಮನಹಟ್ಟಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಎನ್‌ಎಚ್‌ಎಂ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕ್ಯಾನ್ಸರ್, ಹೃದಯ ಕಾಯಿಲೆ, ನರರೋಗ, ಸುಟ್ಟ ಗಾಯ, ಅಪಘಾತ, ನವಜಾತ ಶಿಶುಗಳಿಗೆ ಸಂಬಂಧಿಸಿದ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಬಹುದು. ಸರ್ಕಾರವು ಬಿಪಿಎಲ್ ಕುಟುಂಬದವರಿಗೆ ವರ್ಷಕ್ಕೆ ₹5 ಲಕ್ಷದವರೆಗೆ, ಎಪಿಎಲ್ ಕುಟುಂಬದವರಿಗೆ ಶೇ 30ರಷ್ಟು ಉಚಿತ ಶಸ್ತ್ರಚಿಕಿತ್ಸಾ ಸೌಲಭ್ಯ ನೀಡುತ್ತಿದೆ. ಅದನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.

ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್ ಮಂಜುನಾಥ್ ಮಾತನಾಡಿ, ವಿದ್ಯಾರ್ಥಿಗಳು ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಉತ್ತಮ ಆರೋಗ್ಯ ಅಭ್ಯಾಸಗಳನ್ನು ಅಳವಡಿಸಿಕೊಂಡು, ಪೌಷ್ಟಿಕ ಆಹಾರ ಸೇವನೆ ಮಾಡುವ ಮೂಲಕ ರಕ್ತಹೀನತೆಯನ್ನು ತಡೆಗಟ್ಟಬೇಕು. ಸಾಂಕ್ರಾಮಿಕ ರೋಗ ಹರಡದಂತೆ ಪರಿಸರ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ದೈಹಿಕ ಆರೋಗ್ಯದ ಜತೆ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. 

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ ಮಾತನಾಡಿದರು. 

ಈ ಸಂದರ್ಭದಲ್ಲಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಎಸ್. ಶೋಭಾ ಪ್ರಥಮ, ಸಿ.ಎಸ್. ಪ್ರಿಯಾಂಕಾ ದ್ವಿತೀಯ, ಯು. ಸರೋಜಾ ತೃತೀಯ ಬಹುಮಾನ ಪಡೆದರು.

ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ.ವಿಜಯಕುಮಾರ್, ಸಿಎಚ್ಒ ಸಿ.ಕೃಷ್ಣಮೂರ್ತಿ, ಮುಖ್ಯೋಪಾಧ್ಯಾಯ ಎ.ಕುಮಾರ್, ನಿವೃತ್ತ ಶಿಕ್ಷಕ ಸಿ.ಕೆ.ರವೀಂದ್ರಸ್ವಾಮಿ, ಶಿಕ್ಷಕ ಅಡ್ಡಮನಿ, ನಾಗರತ್ನಮ್ಮ, ಕಾವ್ಯಾ, ಪ್ರಕಾಶ್, ಶೃತಿ, ಆಶಾ ಕಾರ್ಯಕರ್ತೆಯರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT