ಚಿಕ್ಕಜಾಜೂರು: ಸಮೀಪದ ಹೋಬಳಿ ಕೇಂದ್ರವಾದ ಬಿ. ದುರ್ಗದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗಾಗಿ ನಿರ್ಮಿಸಲಾದ ಶೌಚಾಲಯ ಕಳಪೆಯಾಗಿದೆ ಎಂಬ ದೂರು ಬಂದಿದ್ದಕ್ಕೆ ತಹಶೀಲ್ದಾರ್ ವಿಜಯಕುಮಾರ್ ಅವರು ಬುಧವಾರ ಸ್ಥಳ ಪರಿಶೀಲನೆ ನಡೆಸಿದರು.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶೌಚಾಲಯವನ್ನು ನಿರ್ಮಿಸಲು ಅನಿರ್ಬಂಧಿತ ಯೋಜನೆಯ ಅಡಿಯಲ್ಲಿ ₹ 5 ಲಕ್ಷ ಅನುದಾನವನ್ನು ಬಿಡುಗಡೆ ಮಾಡಲಾಗಿತ್ತು. 2026 ಮಾರ್ಚ್ ತಿಂಗಳಿನಲ್ಲಿ ಕಾಮಗಾರಿ ಪೂರ್ಣಗೊಂಡಿದ್ದು, ಶಾಲೆಯ ಮುಖ್ಯ ಶಿಕ್ಷಕರಿಗೆ ಶೌಚಾಲಯವನ್ನು ಹಸ್ತಾಂತರಿಸಲಾಗಿತ್ತು. ಆದರೆ, ಕಾಮಗಾರಿ ಸಂಪೂರ್ಣವಾಗಿ ಕಳಪೆಯಾಗಿದೆ ಎಂದು ಕರ್ನಾಟಕ ಗಣಿಬಾಧಿತ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಬಿ.ದುರ್ಗ ರಮೇಶ್ ತಹಶೀಲ್ದಾರ್ ಅವರಿಗೆ ದೂರು ನೀಡಿ, ಪರಿಶೀಲನೆ ನಡೆಸುವಂತೆ ಮನವಿ ಮಾಡಿದ್ದರು.

ಶೌಚಾಲಯದ ಪರಿಶೀಲಿಸಿದ ತಹಶೀಲ್ದಾರ್, ‘ಕಳಪೆ ಕಾಮಗಾರಿಯ ಬಗ್ಗೆ ಸಂಪೂರ್ಣ ವಿವರಣೆ ನೀಡಿ’ ಎಂದು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ದಯಾನಂದ್ಗೆ ಸೂಚಿಸಿದರು.

ಸಹಾಯಕ ಎಂಜಿನಿಯರ್ ಆನಂದ್, ಗುತ್ತಿಗೆದಾರರು, ಮುಖ್ಯ ಶಿಕ್ಷಕರು, ದೂರುದಾರರಾದ ಬಿ. ದುರ್ಗ ರಮೇಶ್, ಗ್ರಾಮಸ್ಥರಾದ ರಾಘವೇಂದ್ರ, ಗಿರೀಶ್, ನಾಗರಾಜ್, ಧರಣೇಂದ್ರಪ್ಪ, ವಿನಯ್ ಮತ್ತಿತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-44-303586083

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.