ಚಿತ್ರದುರ್ಗ: ‘ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಕೈಬಿಟ್ಟಿರುವ ತಾಲ್ಲೂಕಿನ 8 ಕೆರೆಗಳನ್ನು ಹೆಚ್ಚುವರಿಯಾಗಿ ಸೇರ್ಪಡೆ ಮಾಡಬೇಕು’ ಎಂದು ಒತ್ತಾಯಿಸಿ ಶಾಸಕ ಕೆ.ಸಿ.ವೀರೇಂದ್ರ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಬೆಂಗಳೂರಿನ ಕೃಷ್ಣ ನಿವಾಸದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾದ ಅವರು ‘ಮಠದ ಕುರುಬರಹಟ್ಟಿ ಕೆರೆ, ಕಾಟಿಹಳ್ಳಿ ಕೆರೆ, ಸಿದ್ದಾಪುರ ಕೆರೆ, ಮಾನಂಗಿ ಕೆರೆ, ಹುಲ್ಲೂರು ಕೆರೆ, ತಿಮ್ಮಣ್ಣನಾಯಕನ ಕೆರೆ, ನಂದೀಪುರ ಕೆರೆ ಮತ್ತು ಅನ್ನೇಹಾಳು ಕೆರೆಗಳನ್ನು ಭದ್ರಾ ಮೇಲ್ದಂಡೆ ಯೋಜನೆಯಡಿ ಸೇರ್ಪಡೆ ಮಾಡಬೇಕು. ಯೋಜನೆಯಡಿ ಚಿತ್ರದುರ್ಗ ತಾಲ್ಲೂಕಿನ ಒಟ್ಟು 28,966 ಹೆಕ್ಟೇರ್ ಪ್ರದೇಶಕ್ಕೆ ಹನಿ ನೀರಾವರಿ ಮುಖಾಂತರ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ 9 ಕೆರೆಗಳನ್ನು ಮಾತ್ರ ತುಂಬಿಸಲು ಡಿಪಿಆರ್ನಲ್ಲಿ ಸೇರಿಸಲಾಗಿದೆ’ ಎಂದರು.

‘ತಾಲ್ಲೂಕು ವ್ಯಾಪ್ತಿಯ ಕಾತ್ರಾಳು ಕೆರೆ, ಮುದ್ದಾಪುರ ಕೆರೆ ಮತ್ತು ಯಳಗೋಡು ಕೆರೆಗಳಿಗೆ ಒಟ್ಟು 0.147 ಟಿಎಂಸಿ ಅಡಿ ನೀರನ್ನು ತುಂಬಿಸಲು ಜಗಳೂರು ಶಾಖಾ ಕಾಲುವೆ-2 (ಚಿತ್ರದುರ್ಗ ಬ್ಲಾಕ್) ಕಾಮಗಾರಿಯಲ್ಲಿ ಯೋಚಿಸಲಾಗಿದೆ. ಆದರೆ ಈ ಮೂರು ಕೆರೆಗಳು ಕರ್ನಾಟಕ ನೀರಾವರಿ ನಿಗಮ ನಿಯಮಿತದಿಂದ ಕೈಗೊಳ್ಳಲಾಗಿರುವ ಭರಮಸಾಗರ ಏತ ನೀರಾವರಿ ಯೋಜನೆಯಲ್ಲಿ ಸೇರ್ಪಡೆಗೊಂಡಿವೆ. ಕೆರೆಗಳಿಗೆ ಈಗಾಗಲೇ ಪೈಪ್ ಅಳವಡಿಕೆ ಕಾಮಗಾರಿಯೂ ಪೂರ್ಣಗೊಂಡಿದೆ. ಪ್ರಸ್ತುತ ಈ ಮೂರು ಕೆರೆಗಳನ್ನು ವಿಶ್ವೇಶ್ವರಯ್ಯ ಜಲ ನಿಗಮದ ವತಿಯಿಂದ ಕೈಗೆತ್ತಿಕೊಳ್ಳುವುದರಿಂದ ಕೈಬಿಡಲು ಈಗಾಗಲೇ ಅನುಮೋದನೆ ದೊರೆತಿರುತ್ತದೆ’ ಎಂದು ತಿಳಿಸಿದರು.

‘ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 8 ಕೆರೆಗಳು ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಸೇರ್ಪಡೆಯಾಗದೇ ಇರುವುದರಿಂದ ಈ ಭಾಗದ ರೈತರು ಹಾಗೂ ಗ್ರಾಮಸ್ಥರು ಸೌಲಭ್ಯದಿಂದ ವಂಚಿತರಾಗುತ್ತಾರೆ. ಈ ಭಾಗದ ಗ್ರಾಮಗಳು ಬರಗಾಲ ಪೀಡಿತ ಪ್ರದೇಶವಾಗಿದ್ದು, ಈ 8 ಕೆರೆಗಳನ್ನು ತುಂಬಿಸುವುದರಿಂದ ಈ ಗ್ರಾಮಗಳ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗುವುದಲ್ಲದೇ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಸಹಕಾರಿಯಾಗಲಿದೆ’ ಎಂದು ಮುಖ್ಯಮಂತ್ರಿಯವರಿಗೆ ಮನವರಿಕೆ ಮಾಡಿಕೊಟ್ಟರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-44-535944363

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.