ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನಾ ಕಾಮಗಾರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ರೈತಸಂಘ ಹಾಗೂ ಹಸಿರು ಸೇನೆ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಬುಧವಾರ 3ನೇ ದಿನಕ್ಕೆ ತಲುಪಿತು. ಉಪವಾಸ ನಿರತರ ಪೈಕಿ ಮೂವರು ಮುಖಂಡರು ಅಸ್ವಸ್ಥರಾಗಿ ಚಿಕಿತ್ಸೆ ಪಡೆದು, ನಂತರ ಹೋರಾಟ ಮುಂದುವರಿಸಿದರು.

ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ, ಮುಖಂಡರಾದ ಸಣ್ಣತಿಮ್ಮಣ್ಣ, ಸಣ್ಣೀರಪ್ಪ ಅವರು ಸೋಮವಾರ ರಾತ್ರಿ ಅಸ್ವಸ್ಥರಾದರು. ಸ್ಥಳಕ್ಕೆ ಆಂಬುಲೆನ್ಸ್ ಕರೆಸಿ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಯಿತು. ರಕ್ತದೊತ್ತಡ ಹಾಗೂ ಹೃದಯ ಬಡಿತದಲ್ಲಿ ವ್ಯತ್ಯಾಸವಾಗಿದ್ದ ಕಾರಣ ಅವರಿಗೆ ಚಿಕಿತ್ಸೆ ನೀಡಲಾಯಿತು. ಮಧ್ಯರಾತ್ರಿವರೆಗೆ ಆಸ್ಪತ್ರೆಯಲ್ಲಿದ್ದ ಅವರು ನಂತರ ಮತ್ತೆ ಧರಣಿ ಸ್ಥಳಕ್ಕೆ ಬಂದು ಹೋರಾಟ ಮುಂದುವರಿಸಿದರು.

ಕಲಾವಿದರ ಬೆಂಬಲ: ರೈತಸಂಘದ ಹೋರಾಟಕ್ಕೆ ರಂಗಭೂಮಿ ಕಲಾವಿದರು ಬೆಂಬಲ ವ್ಯಕ್ತಪಡಿಸಿದರು. ಕೆಪಿಎಂ ಗಣೇಶಯ್ಯ, ಎಂ.ಕೆ.ಹರೀಶ್, ಎಸ್.ಚನ್ನಬಸಪ್ಪ, ಡಿ.ಹೇಮಂತ್, ಹನುಮಂತಪ್ಪ, ತಿಪ್ಪೇಸ್ವಾಮಿ ಅವರು ಧರಣಿ ಸ್ಥಳದಲ್ಲಿ ಕ್ರಾಂತಿ ಗೀತೆಗಳನ್ನು ಹಾಡಿ ಹೋರಾಟಕ್ಕೆ ಸ್ಫೂರ್ತಿಯಾದರು. ತಮಟೆ, ಕಂಜೀರ, ಡೋಲಾಕ್, ಹಾರ್ಮೋನಿಯಂ, ತಾಳಗಳು ಸದ್ದು ಮಾಡಿದವು.

‘ಕೇಂದ್ರ ಸರ್ಕಾರ 2023ರ ಬಜೆಟ್ನಲ್ಲಿ ಘೋಷಿಸಿದ್ದ ₹5,300 ಕೋಟಿ ಬಿಡುಗಡೆ ಮಾಡದಿರುವುದು ದ್ರೋಹ. ರಾಜ್ಯ ಸರ್ಕಾರ ತನ್ನ ಜವಾಬ್ದಾರಿ ನಿರ್ವಹಿಸದೆ ಕೇಂದ್ರದತ್ತ ಬೊಟ್ಟು ಮಾಡುತ್ತಿರುವುದು ಜಿಲ್ಲೆಯ ಜನರಿಗೆ ಮಾಡುವ ಅನ್ಯಾಯವಾಗಿದೆ. ಬಯಲುಸೀಮೆ ಚಿತ್ರದುರ್ಗ ಜಿಲ್ಲೆ ಬರಗಾಲವನ್ನೇ ಹೊದ್ದು ಮಲಗಿದೆ. ಇಲ್ಲಿನ ರೈತರು, ಹಳ್ಳಿ ಜನರು ಕುಡಿಯುವ ನೀರಿಗೆ ಪರಿತಪಿಸುವ ಸ್ಥಿತಿಯಿದೆ’ ಎಂದು ಕಲಾವಿದರು ಬೇಸರ ವ್ಯಕ್ತಪಡಿಸಿದರು.

‘ಜಿಲ್ಲೆಯ ಜನರ ಬದುಕು ಸಂಕಷ್ಟಮಯವಾಗಿದೆ. ಹನಿ ನೀರಿಗಾಗಿ ಪರಿತಪಿಸುವ ಸ್ಥಿತಿ ಎಲ್ಲರಿಗೂ ಗೊತ್ತಿದೆ. ನೀರಿಲ್ಲದೆ ಬೆಳೆಗಳು ಒಣಗಿ ಕೃಷಿಕರ ಬದುಕು ಬೀದಿಗೆ ಬಿದ್ದಿದೆ. ಇದಕ್ಕೆ ಏಕೈಕ ಪರಿಹಾರ ಭದ್ರಾ ನೀರನ್ನು ಜಿಲ್ಲೆಗೆ ತುರ್ತು ಹರಿಸುವುದು. ಈ ನಿಟ್ಟಿನಲ್ಲಿ ರೈತರ ಹೋರಾಟಕ್ಕೆ ನಾವೆಲ್ಲರೂ ಬೆಂಬಲವಾಗಿ ನಿಂತಿದ್ದೇವೆ’ ಎಂದು ಜಿ.ಪಂ. ಮಾಜಿ ಅಧ್ಯಕ್ಷ ಮೀಸೆ ಮಹಾಲಿಂಗಪ್ಪ ಹೇಳಿದರು.

ರೈತಸಂಘದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಬೇಡರರೆಡ್ಡಿಹಳ್ಳಿ ಬಸವರೆಡ್ಡಿ, ಈಚಘಟ್ಟ ಸಿದ್ದವೀರಪ್ಪ, ಮುಖಂಡರಾದ ರಂಗಣ್ಣ, ತಿಪ್ಪೇಸ್ವಾಮಿ, ಸಣ್ಣೀರಪ್ಪ, ಸಣ್ಣತಿಮ್ಮಣ್ಣ, ನಿಂಗಪ್ಪ, ಪ್ರಸನ್ನ, ರೆಡ್ಡಿಹಳ್ಳಿ ವೀರಣ್ಣ, ವೆಂಕಟೇಶ್, ವೀರಭದ್ರಪ್ಪ, ಜಿಲ್ಲಾ ನೀರಾವರಿ ಹೋರಾಟ ಸಮಿತಿ ಸಂಚಾಲಕರಾದ ಜೋಗಿಮಟ್ಟಿ ಮಹೇಶಬಾಬು, ಚಳ್ಳಕೆರೆ ಬಸವರಾಜ್, ಆರ್.ಶೇಷಣ್ಣಕುಮಾರ್ ಇದ್ದರು.

ಅಹವಾಲು ಆಲಿಸಿದ ಎಡಿಸಿ

ಎರಡು ದಿನಗಳಿಂದಲೂ ಯಾವೊಬ್ಬ ಜನಪ್ರತಿನಿಧಿ ಅಧಿಕಾರಿ ಧರಣಿ ಸ್ಥಳಕ್ಕೆ ಭೇಟಿ ನೀಡಿ ರೈತರ ಅಹವಾಲು ಆಲಿಸಿರಲಿಲ್ಲ. ಇದರ ವಿರುದ್ಧ ಆಕ್ರೋಶ ತೀವ್ರಗೊಂಡ ಹಿನ್ನೆಲೆಯಲ್ಲಿ ಬುಧವಾರ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ ಅಹವಾಲು ಆಲಿಸಿದರು. ‘ರೈಸಂಘದ ಬೇಡಿಕೆಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು. ಭದ್ರಾ ಯೋಜನೆ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು’ ಎಂದು ಕುಮಾರಸ್ವಾಮಿ ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.