ಸಿರಿಗೆರೆ: ‘300 ವರ್ಷಗಳ ಹಿಂದೆ ಭರಮಣ್ಣನಾಯಕ ಕಟ್ಟಿಸಿದ 1,200 ಎಕರೆ ವ್ಯಾಪ್ತಿಯ ಐತಿಹಾಸಿಕ ಕೆರೆಗೆ ಪ್ರವಾಸಿ ತಾಣದ ರೂಪ ಕೊಟ್ಟು ಸಂರಕ್ಷಿಸಬೇಕು’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಭರಮಸಾಗರ ಹಾಗೂ ಸುತ್ತಲಿನ ಗ್ರಾಮಗಳ ನಿವಾಸಿಗಳು, ರೈತರು ಮನವಿ ಮಾಡಿದ್ದಾರೆ.

ಮೇ 9 ರಂದು ಜಿಲ್ಲಾ ಕೇಂದ್ರದಲ್ಲಿ ನಡೆಯುತ್ತಿರುವ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವದಲ್ಲಿ ಭಾಗಿಯಾಗುತ್ತಿರುವ ಅಮಿತ್ ಶಾ ಅವರು ಈ ವಿಷಯದಲ್ಲಿ ತಮ್ಮ ನಿರ್ಧಾ ಪ್ರಕಟಿಸಬೇಕೆಂದು ಕೋರಿದ್ದಾರೆ.

‘ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಭರಮಸಾಗರ ಏತ ನೀರಾವರಿ ಯೋಜನೆಯನ್ನು ಸಿರಿಗೆರೆಯ ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮಾರ್ಗದರ್ಶನದಲ್ಲಿ ಜಾರಿಯಾಗುವಂತೆ ಶ್ರಮ ವಹಿಸಿದ್ದಾರೆ. ಈ ಕೆರೆಯನ್ನು ಆಧುನೀಕರಣಗೊಳಿಸಿ ಪ್ರವಾಸಿ ತಾಣವಾಗುವಂತೆ ಮಾಡಬೇಕು’ ಎಂದು ಕೋರಿದ್ದಾರೆ.

‘ಭರಮಸಾಗರ ಕೆರೆಯ ಸುತ್ತಲೂ ಉತ್ತಮ ರಸ್ತೆ, ಉದ್ಯಾನ, ವಾಯುವಿಹಾರ ಮಾರ್ಗ ಹಾಗೂ ವಿಶ್ರಾಂತಿಗಾಗಿ ಆಸನಗಳ ವ್ಯವಸ್ಥೆ ಮಾಡಬೇಕು. ಕೆರೆಯ ನೀರು ಅತ್ಯಂತ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು. ಪ್ರವಾಸಿಗರ ಆಕರ್ಷಣೆಗೆ ದೋಣಿ ವಿಹಾರ, ವೀಕ್ಷಣಾ ತಾಣ ಹಾಗೂ ಪರಿಸರ ಸ್ನೇಹಿ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಬೇಕು’ ಎಂದು ಸ್ಥಳೀಯರು ವಿನಂತಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-44-850513290

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.