ಸಿರಿಗೆರೆ: ‘ಭೀಮಸಮುದ್ರದ ಸಮೀಪ ಇರುವ ಗುಡ್ಡಗಳಲ್ಲಿ ವ್ಯಾಪಕ ಗಣಿಗಾರಿಕೆ ನಡೆಸುತ್ತಿರುವುದನ್ನು ವಿರೋಧಿಸಿ ಭೀಮಸಮುದ್ರದಿಂದ ಜಿಲ್ಲಾ ಕೇಂದ್ರಕ್ಕೆ ಜೂ.1ರಂದು ಪಾದಯಾತ್ರೆ ನಡೆಸಲು ರೈತ ಸಂಘ ಮುಂದಾಗಿದೆ’ ಎಂದು ಮುಖಂಡ ಡಿ.ಎಂ. ಪ್ರಸನ್ನಕುಮಾರ್ ತಿಳಿಸಿದ್ದಾರೆ.

‘ಗಣಿಗಾರಿಕೆಯನ್ನು ವಿರೋಧಿಸಿ ಹಲವು ಹಂತಗಳಲ್ಲಿ ಹೋರಾಟ ಮಾಡಿದ್ದೇವೆ. ಗಣಿಬಾಧಿತ ಪ್ರದೇಶದ ಜನರ ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಉಂಟಾಗಿದೆ. ನಿತ್ಯವೂ ಓಡಾಡುವ ನೂರಾರು ಲಾರಿಗಳಿಂದ ಹರಡುವ ದೂಳಿನಿಂದ ಜನರ ಬದುಕು ಹದಗೆಟ್ಟಿದೆ’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

‘ಪಾದಯಾತ್ರೆಯಲ್ಲಿ ಗಣಿಬಾಧಿತ ಪ್ರದೇಶದ ಜನ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಬೇಕು’ ಎಂದು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-44-2002114562

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.