ಚಿತ್ರದುರ್ಗ: ‘ಬಿಜೆಪಿ ಪಕ್ಷದ ಇತಿಹಾಸ, ತತ್ವ ಸಿದ್ಧಾಂತಗಳು ಹಾಗೂ ಕೇಂದ್ರ ಸರ್ಕಾರದ ಸಾಧನೆಗಳನ್ನು ಸಮಗ್ರವಾಗಿ ಜನರಿಗೆ ತಲುಪಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ. ಪಕ್ಷದ ವಿಚಾರಧಾರೆ ಮತ್ತು ಅಭಿವೃದ್ಧಿ ಕಾರ್ಯಗಳ ಬಗ್ಗೆ ಸ್ಪಷ್ಟ ಅರಿವು ಹೊಂದಿ ಗ್ರಾಮಮಟ್ಟದಲ್ಲಿ ಜನಜಾಗೃತಿ ಮೂಡಿಸಬೇಕು’ ಎಂದು ವಿಭಾಗ ಸಹಪ್ರಭಾರ ಎ.ಮುರುಳಿ ತಿಳಿಸಿದರು.

ನಗರದ ಅಲ್ಲಮಪ್ರಭು ಸಭಾಭವನದಲ್ಲಿ ಶನಿವಾರ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ‘ಪ್ರಶಿಕ್ಷಣ ಮಹಾ ಅಭಿಯಾನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪಕ್ಷದ ಸಾಧನೆಯನ್ನು ವಿವರವಾಗಿ ಜನರಿಗೆ ತಿಳಿಸುವ ಕಾರ್ಯ ಆಗಬೇಕು. ಆಗ ಮಾತ್ರ ಪಕ್ಷ ಇನ್ನಷ್ಟು ಬಲಿಷ್ಠವಾಗಿ ಬೆಳೆಯಲು ಸಾಧ್ಯವಾಗುತ್ತದೆ’ ಎಂದರು.

‘ಶ್ಯಾಮ್ ಪ್ರಸಾದ್ ಮುಖರ್ಜಿ ಹಾಗೂ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರು ಜನಸಂಘವನ್ನು ಸ್ಥಾಪಿಸಿ ಪಕ್ಷದ ಬುನಾದಿಯನ್ನು ಹಾಕಿದ ಮಹನೀಯರು. ಬಳಿಕ 1980ರಲ್ಲಿ ಬಿಜೆಪಿ ರೂಪುಗೊಂಡು ದೇಶದ ಪ್ರಮುಖ ರಾಜಕೀಯ ಶಕ್ತಿಯಾಗಿ ಬೆಳೆದಿದೆ. ಈ ಪಯಣದ ಇತಿಹಾಸವನ್ನು ಕಾರ್ಯಕರ್ತರು ಸರಿಯಾದ ರೀತಿಯಲ್ಲಿ ತಿಳಿದುಕೊಂಡು ಜನರಿಗೆ ಮನವರಿಕೆ ಮಾಡಿಕೊಡಬೇಕು’ ಎಂದು ಹೇಳಿದರು.

‘ಪ್ರಶಿಕ್ಷಣ ಮಹಾ ಅಭಿಯಾನವು ಬಿಜೆಪಿಯ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ಸಾಮಾನ್ಯ ಕಾರ್ಯಕರ್ತರಿಂದ ಹಿಡಿದು ದೇಶದ ಪ್ರಧಾನಿವರೆಗೆ ಎಲ್ಲರೂ ಈ ಅಭಿಯಾನದಲ್ಲಿ ಭಾಗವಹಿಸುತ್ತಾರೆ. ರಾಜ್ಯದಲ್ಲಿ 654 ಹಾಗೂ ಜಿಲ್ಲೆಯಲ್ಲಿ 18 ತರಬೇತಿ ಕಾರ್ಯಕ್ರಮಗಳು ನಡೆಯಲಿದ್ದು, ಏಳು ಪ್ರಮುಖ ವಿಷಯಗಳ ಕುರಿತು ಮಾಹಿತಿ ನೀಡಲಾಗುತ್ತದೆ’ ಎಂದು ಜಿಲ್ಲಾ ಸಂಯೋಜಕ ಜಿ.ಎಚ್.ಮೋಹನ್ ಕುಮಾರ್ ತಿಳಿಸಿದರು.

‘ಕೇಂದ್ರ ಸರ್ಕಾರದ ಸಾಧನೆಗಳು ಹಾಗೂ ಪಕ್ಷದ ಕಾರ್ಯಚಟುವಟಿಕೆಗಳನ್ನು ಮತದಾರರಿಗೆ ತಲುಪಿಸುವ ಕಾರ್ಯ ಆಗಬೇಕು. ಇದರಲ್ಲಿ ಪ್ರತಿಯೊಬ್ಬ ಕಾರ್ಯಕರ್ತರೂ ತೊಡಗಿಸಿಕೊಳ್ಳಬೇಕು’ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಮನವಿ ಮಾಡಿದರು.

ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಜಿಲ್ಲಾ ಘಟಕದ ಉಪಾಧ್ಯಕ್ಷ ಡಾ.ಸಿದ್ಧಾರ್ಥ ಗುಂಡಾರ್ಪಿ, ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್ ಯಾದವ್, ಮಾಧುರಿ ಗಿರೀಶ್, ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಮದಾಸ್, ಮಾಜಿ ಅಧ್ಯಕ್ಷ ಟಿ.ಜಿ.ನರೇಂದ್ರನಾಥ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-44-890295877

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.