ಚಿತ್ರದುರ್ಗ: ‘ವಿಶ್ವಗುರು ಬಸವಣ್ಣನವರ ಆಶಯಗಳಿಗೆ ಕಾಂಗ್ರೆಸ್ ಮುಖಂಡರು ಅಪಮಾನ ಮಾಡುತ್ತಿದ್ದಾರೆ. ಬಸವಣ್ಣನವರು ಕನಸು ಕಂಡ ಸಮ ಸಮಾಜ ನಿರ್ಮಿಸುವಲ್ಲಿ ಕಾಂಗ್ರೆಸ್ ಸಂಪೂರ್ಣವಾಗಿ ಸೋತಿದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಜಿ.ಎಚ್.ಮೋಹನ್ಕುಮಾರ್ ಹೇಳಿದರು.

ಬಸವೇಶ್ವರರ ಜಯಂತಿ ಅಂಗವಾಗಿ ಬಿಜೆಪಿ ಕಚೇರಿಯಲ್ಲಿ ಸೋಮವಾರ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

‘ಮಹಿಳಾ ಮೀಸಲಾತಿಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಬಸವಣ್ಣನವರ ಜಯಂತಿ ಆಚರಿಸುವ ನೈತಿಕತೆಯಿಲ್ಲ. 12ನೇ ಶತಮಾನದಲ್ಲಿಯೇ ಬಸವಣ್ಣನವರು ಅಸಮಾನತೆ ವಿರುದ್ಧ ಹೋರಾಡಿದರು. ಅನುಭವ ಮಂಟಪದಲ್ಲಿ ಮಹಿಳೆಯರಿಗೆ ಪ್ರವೇಶ ಕಲ್ಪಿಸಿ ಮಹಿಳಾ ಸಮಾನತೆಯನ್ನು ಅಂದಿನ ಕಾಲದಲ್ಲಿಯೇ ಎತ್ತಿ ಹಿಡಿದಿದ್ದರು’ ಎಂದರು.

‘12ನೇ ಶತಮಾನದಲ್ಲಿ ಸಮಾಜ ಸುಧಾರಣೆಗಾಗಿ ಹೋರಾಡಿದ ಬಸವಣ್ಣನವರ ಜಯಂತಿಯನ್ನು ವಿಶ್ವದೆಲ್ಲೆಡೆ ಆಚರಿಸಲಾಗುತ್ತಿದೆ. ಮೂಢನಂಬಿಕೆ, ಕಂದಾಚಾರಗಳನ್ನು ನಿರ್ಮೂಲನೆಗೊಳಿಸಿ ಸಮ ಸಮಾಜ ನಿರ್ಮಾಣ ಕ್ಕಾಗಿ ಕ್ರಾಂತಿ ಮಾಡಿದ ಬಸವಣ್ಣನವರು ಅನುಭವ ಮಂಟಪದಲ್ಲಿ ಎಲ್ಲಾ ಜಾತಿಯ ವರಿಗೆ ಮುಕ್ತವಾಗಿ ಪ್ರವೇಶ ಕಲ್ಪಿಸಿದ್ದರು’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಹೇಳಿದರು.

ಸಿದ್ಧಾರ್ಥ ಗುಂಡಾರ್ಪಿ, ರೇಖಾ, ಪಾಲಯ್ಯ, ವೆಂಕಟೇಶ್ ಯಾದವ್, ನಾಗರಾಜ್ಬೇದ್ರೆ, ನಾಗರಾಜ್, ಕಲ್ಲೇಶಯ್ಯ, ಬಸವೇಶ್, ವಸಂತ ಆಚಾರ್, ಬಸಮ್ಮ, ಶಾಂತಮ್ಮ, ವೀಣಾ, ಮಂಜುಳಮ್ಮ, ಉಮಾ, ಶಂಭು, ವೀರೇಶ್, ಲಕ್ಷ್ಮಿಸಾಗರ ವಸಂತ್, ಸತೀಶ್ ಆಚಾರ್, ಪಿ.ಮಹಾಂತೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-44-1861727989

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.