ಚಿತ್ರದುರ್ಗ: ‘ಹೆರಿಗೆ ಸಮಯದಲ್ಲಿ ಮಹಿಳೆಯರಿಗೆ ರಕ್ತಹೀನತೆಯಿಂದ ಬಳಲುತ್ತಿರುವವರಿಗೆ ಹಾಗೂ ಅಪಘಾತಕ್ಕೊಳಗಾದವರಿಗೆ ರಕ್ತದ ಅವಶ್ಯಕತೆ ಹೆಚ್ಚಿರುತ್ತದೆ. ಇಂತಹ ತುರ್ತು ಸಂದರ್ಭದಲ್ಲಿ ರಕ್ತದಾನ ಮಾಡುವುದರಿಂದ ಅಮೂಲ್ಯ ಜೀವಗಳನ್ನು ಉಳಿಸಲು ಸಾಧ್ಯ’ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಬಿ.ವಿ. ಗಿರೀಶ್ ತಿಳಿಸಿದರು.

ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರ ಆಯೋಜಿಸಿದ್ದ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಉಚಿತ ಶಿಬಿರ ಉದ್ಘಾಟಿಸಿ ಮಾತನಾಡಿದರು.

‘ರಕ್ತದಾನದ ಬಗ್ಗೆ ಇರುವ ಮೂಢನಂಬಿಕೆಯನ್ನು ನಂಬಬೇಡಿ. ರಕ್ತದಾನ ಮಾಡುವುದರಿಂದ ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಗಟ್ಟಬಹುದು’ ಎಂದರು.

‘ರಕ್ತದಾನ ಮಾಡುವುದರಿಂದ ಕೇವಲ ದೈಹಿಕ ಆರೋಗ್ಯವಷ್ಟೇ ಅಲ್ಲದೆ, ಮಾನಸಿಕ ನೆಮ್ಮದಿ ಮತ್ತು ಚೈತನ್ಯವೂ ಹೆಚ್ಚುತ್ತದೆ. ಇದೊಂದು ಪುಣ್ಯದ ಕೆಲಸ’ ಎಂದು ಆಡಳಿತ ವೈದ್ಯಾಧಿಕಾರಿ ಆರ್. ಮಂಜುನಾಥ್ ತಿಳಿಸಿದರು.

‘18 ರಿಂದ 65 ವರ್ಷದೊಳಗಿನ ಆರೋಗ್ಯವಂತ ಪುರುಷರು ಮತ್ತು ಮಹಿಳೆಯರು ರಕ್ತದಾನ ಮಾಡಬಹುದು. ರಕ್ತದಾನದಿಂದ ಯಾವುದೇ ಅಶಕ್ತತೆ ಉಂಟಾಗುವುದಿಲ್ಲ. ಪೌಷ್ಟಿಕ ಆಹಾರ, ಹಸಿರು ತರಕಾರಿ ಮತ್ತು ಹೆಚ್ಚಿನ ನೀರು ಸೇವಿಸುವ ಮೂಲಕ ರಕ್ತದ ಪ್ರಮಾಣವನ್ನು ಹೆಚ್ಚಿಸಿಕೊಳ್ಳಬಹುದು. ಜಂಕ್ ಫುಡ್ಗಳ ಬಳಕೆಯನ್ನು ಕಡಿಮೆ ಮಾಡಬೇಕು’ ಎಂದು ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರದ ಡಾ.ರೂಪಾ ಸಲಹೆ ನೀಡಿದರು.

ಶಿಬಿರದಲ್ಲಿ ಆರು ಜನ ರಕ್ತದಾನ ಮಾಡಿದರು. ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ತಜ್ಞ ವೈದ್ಯರ ತಂಡವು 82 ಜನರಿಗೆ ಆರೋಗ್ಯ ಉಚಿತ ತಪಾಸಣೆ ನಡೆಸಿತು.

ತಜ್ಞ ವೈದ್ಯ ಸಂತೋಷ್, ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಕಾರ್ಯದರ್ಶಿ ಮಜಹರ್ ಉಲ್ಲಾ, ಸಂಚಾಲಕ ಡಾ. ಪ್ರದೀಪ್ ಕುಮಾರ್, ಸದಸ್ಯ ಡಾ.ದೀಕ್ಷಿತ್, ನೆಹರು ಯುವ ಕೇಂದ್ರದ ಭರತ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-44-937636873

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.