ಚಿತ್ರದುರ್ಗ: ‘ಸಂಘಟನೆಯೇ ಆದ್ಯತೆ ಎಂಬ ಮಂತ್ರದೊಂದಿಗೆ ಕೆಲಸ ಮಾಡಿದಾಗ ಜನರ ನಂಬಿಕೆ ಗಳಿಸಬಹುದು. ಒಮ್ಮೆ ವಿಶ್ವಾಸ ಕಳೆದುಕೊಂಡರೆ ಅದನ್ನು ಪುನಃ ಪಡೆಯುವುದು ಕಷ್ಟದಾಯಕ’ ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ತಿಳಿಸಿದರು.

ಭೋವಿ ಗುರುಪೀಠದಲ್ಲಿ ಭೋವಿ ಸಂಘದ ಜಿಲ್ಲಾ ಘಟಕದಿಂದ ಈಚೆಗೆ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಹಾಗೂ ನೂತನ ಪದಾಧಿಕಾರಿಗಳ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ‘ಸಮಾಜದ ಋಣ ತೀರಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು. ಸಂಘಟನೆಯ ಜವಾಬ್ದಾರಿ ಸಿಕ್ಕಾಗ ಅದನ್ನು ಸ್ವಾರ್ಥಕ್ಕಾಗಿ ಬಳಸಿಕೊಳ್ಳದೆ, ಕಾಯಾ ವಾಚಾ ಮನಸಾ ಸೇವೆಯಲ್ಲಿ ತೊಡಗಿಸಿಕೊಳ್ಳುವುದು ನೈಜ ನಾಯಕತ್ವದ ಲಕ್ಷಣ’ ಎಂದರು.

‘ಅಧಿಕಾರ ಶಾಶ್ವತವಲ್ಲ. ಆದರೆ, ಅಧಿಕಾರದಲ್ಲಿದ್ದಾಗ ಮಾಡುವ ಕೆಲಸಗಳು ಶಾಶ್ವತವಾಗಿರಬೇಕು. ನಾಯಕತ್ವದ ಅವಕಾಶ ಸಿಕ್ಕಾಗ ಅದನ್ನು ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಮಾದರಿ ಸೇವೆಯನ್ನಾಗಿ ಪರಿವರ್ತಿಸಬೇಕು. ಪದಾಧಿಕಾರಿಗಳು ಪರಸ್ಪರ ಟೀಕೆ–ಟಿಪ್ಪಣಿಗಳಿಗೆ ಒಳಗಾಗದೆ ಸ್ಥಿತಪ್ರಜ್ಞೆಯನ್ನು ಕಾಯ್ದುಕೊಂಡು, ಒಗ್ಗಟ್ಟಿನಿಂದ ಶ್ರಮಿಸಬೇಕು’ ಎಂದು ಹೇಳಿದರು.

‘ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ದೂರದೃಷ್ಟಿಯ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಭವಿಷ್ಯದಲ್ಲಿ ಸಮಾಜದ ಎಲ್ಲ ಸ್ತರದ ಜನರನ್ನು ಒಳಗೊಳ್ಳುವ ಉದ್ದೇಶದಿಂದ ಮಹಿಳಾ ಘಟಕ, ಯುವ ಘಟಕ ಮತ್ತು ವಿದ್ಯಾರ್ಥಿ ಘಟಕಗಳನ್ನು ಸೃಜಿಸಲು ನಿರ್ಧರಿಸಲಾಗಿದೆ’ ಎಂದರು.

ಸಂಘದ ನೂತನ ಅಧ್ಯಕ್ಷ ಸೂರಗೊಂಡನಹಳ್ಳಿ ಟಿ.ಕೃಷ್ಣಮೂರ್ತಿ, ಗೌರವಾಧ್ಯಕ್ಷರಾದ ಟಿ.ತಿಪ್ಪೇಸ್ವಾಮಿ, ಡಿ.ತಿಮ್ಮಣ್ಣ, ಕಾರ್ಯಾಧ್ಯಕ್ಷ ಡಿ.ಸಿ.ಮೋಹನ, ಉಪಾಧ್ಯಕ್ಷರಾದ ಎಚ್.ಲಕ್ಷ್ಮಣ, ಅನ್ನೇಹಾಳ ತಿಪ್ಪೇಸ್ವಾಮಿ, ಪ್ರಧಾನ ಕಾರ್ಯದರ್ಶಿ ಈ.ಮಂಜುನಾಥ, ಸಹ ಕಾರ್ಯದರ್ಶಿ ಪಿ.ದೇವರಾಜ, ಖಜಾಂಚಿ ವಿ.ಹನುಮಂತಪ್ಪ, ಸಂಚಾಲಕ ರಾಮಚಂದ್ರಪ್ಪ, ಸಂಘಟನಾ ಕಾರ್ಯದರ್ಶಿ ಎಚ್.ಆಂಜನೇಯ, ನಿರ್ದೇಶಕರಾದ ಟಿ.ಚಂದ್ರಶೇಖರ್, ಎಚ್.ನಟೇಶ್, ಆರ್.ನಿರಂಜನ, ಎಲ್.ಬಿ.ವೆಂಕಟೇಶ, ಎಚ್.ನಾಗರಾಜ, ಸಿ.ಜೆ.ಅಣ್ಣಪ್ಪ, ಪಿ.ಅಂಜಿನಯ್ಯ, ಆರ್.ಈರಣ್ಣ, ಎಂ.ರಾಮು, ಎಚ್.ಭೀಮರಾಜು, ಭೋವಿ ಗುರುಪೀಠದ ಸಿಇಒ ಗೋವಿಂದಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-44-1366831578

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.