ಹೊಳಲ್ಕೆರೆ: ‘ಚಿತ್ರದುರ್ಗದಲ್ಲಿ ಶನಿವಾರ ನಡೆಯಲಿರುವ ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ತಾಲ್ಲೂಕಿನಿಂದ ಸಾವಿರಾರು ಸಂಖ್ಯೆಯಲ್ಲಿ ಬಿಎಸ್ವೈ ಅಭಿಮಾನಿಗಳು ಭಾಗವಹಿಸಲಿದ್ದಾರೆ’ ಎಂದು ಬಿಜೆಪಿ ಮಂಡಲ ಅಧ್ಯಕ್ಷ ರಾಮಗಿರಿ ಕುಮಾರ್ ತಿಳಿಸಿದ್ದಾರೆ.

‘ಯಡಿಯೂರಪ್ಪ ಅವರ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು, ಮಹಿಳೆಯರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ದಣಿವರಿಯದ ನಾಯಕ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಎಲ್ಲಾ ವರ್ಗದ ಜನರ ಕಲ್ಯಾಣಕ್ಕೆ ಶ್ರಮಿಸಿದ್ದಾರೆ. ಬಡವರು, ಹಿಂದುಳಿದವರು, ಮಹಿಳೆಯರು, ವೃದ್ಧರು, ವಿಧವೆಯರಿಗೆ ವಿವಿಧ ಯೋಜನೆಗಳ ಮೂಲಕ ನೆರವಾಗಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆ, ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆಗಳ ಮೂಲಕ ಮಧ್ಯ ಕರ್ನಾಟಕ ಭಾಗದ ರೈತರ ಭಗೀರಥ ಎನಿಸಿಕೊಂಡಿದ್ದಾರೆ’ ಎಂದು ಹೇಳಿದ್ದಾರೆ.

‘ಭಾಗ್ಯಲಕ್ಷ್ಮಿ ಯೋಜನೆಯ ಮೂಲಕ ಬಡ ಕುಟುಂಬದ ಹೆಣ್ಣುಮಕ್ಕಳಿಗೆ ಜೀವನ ಭದ್ರತೆ ಒದಗಿಸಿದ್ದಾರೆ. ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ನೀಡುವ ಯೋಜನೆ ಜಾರಿಗೊಳಿಸಿದ್ದರು. ಇದರಿಂದಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ದೂರದ ಶಾಲೆಗಳಿಗೆ ಕಿ.ಮೀ. ಗಟ್ಟಲೆ ನಡೆಯುವುದು ತಪ್ಪಿತ್ತು. ರೈತರಿಗೆ ಪ್ರತ್ಯೇಕ ಬಜೆಟ್ ಮಂಡಿಸುವ ಮೂಲಕ ದೇಶಕ್ಕೇ ಮಾದರಿಯಾದರು. ಶಾಸಕ ಎಂ.ಚಂದ್ರಪ್ಪ ಅವರಿಗೆ ಹೆಚ್ಚು ಅನುದಾನ ಕೊಡುವ ಮೂಲಕ ನಮ್ಮ ತಾಲ್ಲೂಕಿನ ಅಭಿವೃದ್ಧಿಗೆ ನೆರವಾಗಿದ್ದರು. ಅವರ ಅಭಿಮಾನೋತ್ಸವ ಕಾರ್ಯಕ್ರಮ ನಮ್ಮ ಜಿಲ್ಲೆ ಚಿತ್ರದುರ್ಗದಲ್ಲಿ ನಡೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ’ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-44-1324465956

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.