ಚಿತ್ರದುರ್ಗ: ‘ಬಿಎಸ್ವೈ ಅಭಿಮಾನೋತ್ಸವಕ್ಕೆ ನಿರೀಕ್ಷೆಗೂ ಮೀರಿದ ಜನಬೆಂಬಲ ವ್ಯಕ್ತವಾಗುತ್ತಿದೆ. ರಾಜ್ಯದ ಮೂಲೆ ಮೂಲೆಯಿಂದ 10 ಲಕ್ಷಕ್ಕೂ ಹೆಚ್ಚು ಜನರು ಐತಿಹಾಸಿಕ ನಗರ ಚಿತ್ರದುರ್ಗಕ್ಕೆ ಬರಲಿದ್ದಾರೆ’ ಎಂದು ಬಿ.ವೈ. ವಿಜಯೇಂದ್ರ ಹೇಳಿದರು.

‘ಅಪ್ರತಿಮ ಹೋರಾಟಗಾರ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಜೀವನದ 50 ವರ್ಷಗಳ ಪಯಣ ಪೂರೈಸಿದ ಶುಭ ಘಳಿಗೆಯಲ್ಲಿ ಅಭಿಮಾನೋತ್ಸವ ಆಯೋಜನೆಗೊಂಡಿದೆ. ಹಳ್ಳಿಹಳ್ಳಿಗಳಿಂದ ಸಾರ್ವಜನಿಕರು ಕಾರ್ಯಕ್ರಮಕ್ಕೆ ಬರಲು ತುದಿಗಾಲಿನಲ್ಲಿ ನಿಂತಿದ್ದಾರೆ. ಸಮಾರಂಭಕ್ಕೆ ಯಾವುದೇ ತೊಂದರೆಯಾಗದಂತೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಪ್ರತಿ ಜಿಲ್ಲೆಗೂ ತೆರಳಿ ಸ್ವಾಮೀಜಿಗಳಿಗೆ ಆಹ್ವಾನ ಪತ್ರ ನೀಡಲು ಯೋಜಿಸಿದ್ದೆವು. ಆದರೆ, ಸಮಯದ ಅಭಾವದಿಂದ ಎಲ್ಲರ ಭೇಟಿ ಸಾಧ್ಯವಾಗಿಲ್ಲ. ನಾಡಿನ ಎಲ್ಲಾ ಮಠಾಧೀಶರು, ಸ್ವಾಮೀಜಿಗಳು ಮೇ 9ರಂದು ಅಭಿಮಾನೋತ್ಸವದಲ್ಲಿ ಪಾಲ್ಗೊಳ್ಳಬೇಕು’ ಎಂದು ಮನವಿ ಮಾಡಿದರು.

‘ಎಲ್ಲಾ ಕೆಲಸಗಳನ್ನು ವ್ಯವಸ್ಥಿತವಾಗಿ ಮಾಡುತ್ತಿದ್ದೇವೆ. ಕಾರ್ಯಕ್ರಮಕ್ಕೆ ಸಾವಿರಾರು ಕಾರ್ಯಕರ್ತರು ಹಗಲಿರುಳು ಕೆಲಸ ಮಾಡುತ್ತಿದ್ದಾರೆ. ಯಡಿಯೂರಪ್ಪ ಅವರಿಗೆ ಗೌರವ ನೀಡುವ ಕೆಲಸವನ್ನು ಬದ್ಧತೆಯಿಂದ ಮಾಡುತ್ತಿದ್ದಾರೆ. ಎಲ್ಲರಿಗೂ ನಾನು ಕೃತಜ್ಞತೆ ಅರ್ಪಿಸುತ್ತೇನೆ’ ಎಂದರು.

‘ಮೇ 8ರಂದು ಬಿ.ಎಸ್. ಯಡಿಯೂರಪ್ಪ ಅವರು ನಗರಕ್ಕೆ ಪುರ ಪ್ರವೇಶ ಮಾಡಲಿದ್ದು, ಅವರನ್ನು 20,000ಕ್ಕೂ ಹೆಚ್ಚು ಜನರ ನಡುವೆ ಮೆರವಣಿಗೆಯಲ್ಲಿ ಕರೆತರಲಾಗುವುದು. ದಸರಾ ಮಾದರಿಯಲ್ಲಿ 25ಕ್ಕೂ ಹೆಚ್ಚು ಕಲಾತಂಡಗಳೊಂದಿಗೆ ಮೆರವಣಿಗೆ ಸಾಗಲಿದ್ದು, ಚಿತ್ರದುರ್ಗದ ಪಾಲಿಗೆ ಇದೊಂದು ಸಾಂಸ್ಕೃತಿಕ ಹಬ್ಬವಾಗಲಿದೆ’ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.

‘ಕನಕ ಸರ್ಕಲ್ನಿಂದ ಮೆರವಣಿಗೆ ಆರಂಭವಾಗಲಿದ್ದು, ಮದಕರಿ ವೃತ್ತದವರೆಗೂ ನಡೆಯಲಿದೆ. ರಸ್ತೆಯುದ್ದಕ್ಕೂ ಹಲವು ಮಾನವತಾವಾದಿಗಳ ಪ್ರತಿಮೆಗಳಿದ್ದು, ಎಲ್ಲಾ ಪ್ರತಿಮೆಗಳಿಗೂ ಮಾಲಾರ್ಪಣೆ ಮಾಡಲಾಗುವುದು’ ಎಂದರು.

ಸಮರೋಪಾದಿ ಸಿದ್ಧತೆ: ‘ಹಳೇ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಮೈದಾನದಲ್ಲಿ ಸಮಾರಂಭ ನಡೆಯಲಿದ್ದು, ಸಾವಿರಾರು ಕಾರ್ಮಿಕರು ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಒಂದೆಡೆ ವೇದಿಕೆ ನಿರ್ಮಾಣ ಕೆಲಸ ನಡೆಯುತ್ತಿದ್ದರೆ, ಇನ್ನೊಂದೆಡೆ ಪ್ರಚಾರ ಸಾಮಗ್ರಿಗಳನ್ನು ಅಳವಡಿಸಲಾಗುತ್ತಿದೆ. ಮತ್ತೊಂದೆಡೆ ನಗರದ ವಿವಿಧೆಡೆ ದೀಪಾಲಂಕಾರ ಅಳವಡಿಸುವ ಕೆಲಸವೂ ಭರದಿಂದ ಸಾಗುತ್ತಿದೆ.

ಮುಖ್ಯವೇದಿಕೆ ನಿರ್ಮಾಣ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದೆ. ಮುಖ್ಯ ವೇದಿಕೆಯ ಬಲಭಾಗದಲ್ಲಿ ಸಾವಿರ ಶ್ರೀಗಳಿಗಾಗಿ ನಿರ್ಮಿಸಲಾಗುತ್ತಿರುವ ಪ್ರತ್ಯೇಕ ವೇದಿಕೆ ನಿರ್ಮಾಣ ಬುಧವಾರದಿಂದ ಆರಂಭವಾಗಿದೆ. ಜೊತೆಗೆ ಎಡಭಾಗಕ್ಕೆ ಶಾಸಕರು, ಸಂಸದರು ಹಾಗೂ ಮುಖಂಡರಿಗಾಗಿ ನಿರ್ಮಿಸುತ್ತಿರುವ ಇನ್ನೊಂದು ವೇದಿಕೆ ನಿರ್ಮಾಣವೂ ಆರಂಭಗೊಂಡಿದೆ.

‘ಬುಧವಾರ ಕಾರ್ಮಿಕರು ಮುಖ್ಯ ವೇದಿಕೆಗೆ ಬಿಳಿ ಹಾಗೂ ಕೇಸರಿ ಬಟ್ಟೆಗಳಿಂದ ಅಲಂಕಾರ ಮಾಡಿದರು. ಇಡೀ ಚಿತ್ರದುರ್ಗ ನಗರ ಕೇಸರಿ ಬಣ್ಣದಿಂದ ಕಂಗೊಳಿಸುತ್ತಿದ್ದು, ಮುಖಂಡರ ಕಟೌಟ್ಗಳು ರಾರಾಜಿಸುತ್ತಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-44-1835666470

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.