ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುರುವನೂರು ಆರೋಗ್ಯ ಕೇಂದ್ರಕ್ಕೆ ಸಿಇಒ ನಂದಿನಿ ದೇವಿ ಭೇಟಿ

Last Updated 21 ಏಪ್ರಿಲ್ 2021, 5:40 IST
ಅಕ್ಷರ ಗಾತ್ರ

ಪ್ರಜಾವಾಣಿ ವಾರ್ತೆ

ಚಿತ್ರದುರ್ಗ: ತಾಲ್ಲೂಕಿನ ತುರುವನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಡಾ.ಕೆ. ನಂದಿನಿ ದೇವಿ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ ಔಷಧ ಕೊಠಡಿ ವೀಕ್ಷಣೆ ಮಾಡಿದರು. ಗಂಟಲು ಮತ್ತು ಮೂಗಿನ ದ್ರವದ ಮಾದರಿ ಸಂಗ್ರಹಿಸುವ ವಿಭಾಗ ಪರಿಶೀಲಿಸಿದರು. ರೋಗ ಲಕ್ಷಣವಿರುವ ಪ್ರಕರಣಗಳ ತಪಾಸಣೆ ಮಾಡಲು ಸೂಚನೆ ನೀಡಿದರು.

ಲಸಿಕಾ ಪ್ರಗತಿ ಪರಿಶೀಲನೆ ನಡೆಸಿದರು. ಹೆಚ್ಚು ಜನರು ಲಸಿಕೆ ಪಡೆಯಲು ಸಾರ್ವಜನಿಕರಿಗೆ ಮಾಹಿತಿ ಒದಗಿಸಬೇಕು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದರು. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ. ಗಿರೀಶ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT