ಚಿಕ್ಕಜಾಜೂರು: ಸಮೀಪದ ಕಾಳಘಟ್ಟದಲ್ಲಿ ಕರಿಯಮ್ಮ ಹಾಗೂ ಮೈಲೆ ಮಾರಮ್ಮ ದೇವಿಯರ ರಥೋತ್ಸವ ಶನಿವಾರ ನಡೆಯಿತು.

ಬೆಳಿಗ್ಗೆ ದೇವಸ್ಥಾನದಲ್ಲಿ ಕರಿಯಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ, ಅಮ್ಮನ ಉತ್ಸವ ಮೂರ್ತಿಯ ಜತೆ ಮೈಲೆ ಮಾರಮ್ಮನ ಉತ್ಸವ ಮೂರ್ತಿಯನ್ನೂ ಪಲ್ಲಕ್ಕಿಯಲ್ಲಿ ಕೂರಿಸಿ ಗ್ರಾಮದಲ್ಲಿ ಮೆರವಣಿಗೆ ನಡೆಸಲಾಯಿತು. ಮಧ್ಯಾಹ್ನ ಅಲಂಕೃತ ರಥದಲ್ಲಿ ಕೂರಿಸಿ, ದೊಡ್ಡೆಡೆ ಸೇವೆ ಸಲ್ಲಿಸಲಾಯಿತು. ನಂತರ ನೂರಾರು ಭಕ್ತರು ರಥವನ್ನು ಎಳೆದು ಭಕ್ತಿ ಸಮರ್ಪಿಸಿದರು.

ಶಾಸಕ ಎಂ. ಚಂದ್ರಪ್ಪ ರಥೋತ್ಸವದಲ್ಲಿ ಪಾಲ್ಗೊಂಡರು. ಅನ್ನ ಸಂತರ್ಪಣೆ ನಡೆಯಿತು.

ಸಿಡಿ ಉತ್ಸವ: ಸಂಜೆ ಅಮ್ಮನವರ ಸಿಡಿ ಉತ್ಸವ ನಡೆಯಿತು. ಭಾನುವಾರ ಬೆಳಿಗ್ಗೆ ಕರಿಯಮ್ಮ ದೇವಿಯ ಕೆಂಡಾರ್ಚನೆ ನಡೆಯಲಿದೆ. ನಂತರ, ಓಕಳಿಯೊಂದಿಗೆ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-44-1504678497

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.