ಚಿತ್ರದುರ್ಗ: ‘ಸರ್ಕಾರ ಹಾಗೂ ಸಂಘ ಸಂಸ್ಥೆಗಳು ಬಾಲ್ಯವಿವಾಹ ಕೊನೆಗಾಣಿಸಲು ಸಾಕಷ್ಟು ಕೆಲಸ ಮಾಡುತ್ತಿದ್ದರೂ ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿರುವುದು ಬೇಸರ ತರಿಸುತ್ತಿದೆ. ಕೆಲ ಶಿಕ್ಷಿತರು ತಮ್ಮ ಕಣ್ಣೆದುರಲ್ಲಿ ಬಾಲ್ಯವಿವಾಹ ನಡೆಯುತ್ತಿದ್ದರೂ ಅದನ್ನು ತಡೆಯುವ ಕೆಲಸ ಮಾಡುತ್ತಿಲ್ಲ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ಎಸ್.ಆಕಾಶ್ ವಿಷಾದಿಸಿದರು.

ನಗರದ ಕ್ರೀಡಾ ಭವನದಲ್ಲಿ ಆಶ್ರಿತ ಸಂಸ್ಥೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಗುರುವಾರ ನಡೆದ ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ನಿಷೇಧ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

‘ಬಾಲ್ಯವಿವಾಹ ಮುಕ್ತ ಚಿತ್ರದುರ್ಗ ಜಿಲ್ಲೆಯನ್ನಾಗಿಸಲು ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಮತ್ತು ಸಾರ್ವಜನಿಕರು ಕೈ ಜೋಡಿಸಬೇಕು. ಬಾಲ್ಯ ವಿವಾಹ ತಡೆಯುವ ಕಾರ್ಯ ಮಹಿಳಾ ಮತ್ತು ಮಕ್ಕಳ ಇಲಾಖೆಯ ಜವಾಬ್ದಾರಿ ಎಂಬ ಮನಃಸ್ಥಿತಿಯಿಂದ ಶಿಕ್ಷಕರು ಹೊರಬರಬೇಕು. ಎಲ್ಲಾ ಇಲಾಖೆಯ ನೌಕರರು, ಮುಖ್ಯವಾಗಿ ಶಿಕ್ಷಕರು ಬಾಲ್ಯವಿವಾಹ ಮತ್ತು ಬಾಲಕಾರ್ಮಿಕರ ಬಗ್ಗೆ ಹೆಚ್ಚು ಗಮನಹರಿಸಬೇಕಿದೆ. ಬಾಲಗರ್ಭಿಣಿಯರ ಸಂಖ್ಯೆಗೆ ಕಡಿವಾಣ ಹಾಕಬೇಕಿದೆ’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ‘ಬಾಲ್ಯವಿವಾಹ ಮತ್ತು ಬಾಲಕಾರ್ಮಿಕ ಪದ್ಧತಿ ತಡೆಯುವ ಸಂಬಂಧ ವ್ಯಾಪಕವಾಗಿ ಜಾಗೃತಿ ಮೂಡಿಸಬೇಕು. ಪ್ರೌಢಶಾಲಾ ಮತ್ತು ಕಾಲೇಜು ಹಂತದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಬೇಕು. ಹಾಗೆಯೇ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಬೇಕು’ ಎಂದರು.

ಆಶ್ರಿತ ಸಂಸ್ಥೆ ಸಂಸ್ಥಾಪಕ ಕಾರ್ಯದರ್ಶಿ ಎಸ್.ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವಿಜಯ್ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಂಜುನಾಥ್, ಡಿವೈಎಸ್ಪಿ ದಿನಕರ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಪಿ.ಶೀಲಾ, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.