ಚಿತ್ರದುರ್ಗ: ‘ಸರ್ಕಾರದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯುವ ಫಲಾನುಭವಿಗಳಿಗೆ ಸಿಬಿಲ್ ಸ್ಕೋರ್ ಅಥವಾ ಇತರೆ ಯಾವುದೇ ತಾಂತ್ರಿಕ ಕಾರಣಗಳು ಅಡ್ಡಿಯಾಗಬಾರದು. ಅರ್ಹರಿಗೆ ತಲುಪಬೇಕಾದ ಸವಲತ್ತುಗಳನ್ನು ಶೀಘ್ರವಾಗಿ ವಿತರಿಸಬೇಕು’ ಎಂದು ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ರಾಮಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾ ಭೋವಿ ಅಭಿವೃದ್ಧಿ ನಿಗಮದ ಕಚೇರಿಗೆ ಗುರುವಾರ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು,‘ಬಡವರ ಆರ್ಥಿಕ ಸಬಲೀಕರಣಕ್ಕಾಗಿ ಸರ್ಕಾರ ನಿಗಮದ ಮೂಲಕ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಆದರೆ ಬ್ಯಾಂಕಿಂಗ್ ವ್ಯವಹಾರ ಗಳಲ್ಲಿ ಸಿಬಿಲ್ ಸ್ಕೋರ್ ಸಮಸ್ಯೆ ಮುಂದಿಟ್ಟುಕೊಂಡು ಫಲಾನುಭವಿಗಳನ್ನು ಅಲೆದಾಡಿಸುವುದು ಸರಿಯಲ್ಲ’ ಎಂದರು.

‘ಮೇ 4ರಂದು ಮೈಸೂರಿನಲ್ಲಿ , ಬಳಿಕ ಚಳ್ಳಕೆರೆ ಯಲ್ಲಿ 75 ದಿನಗಳ ಟೈಲರಿಂಗ್ ಕಾರ್ಯಾಗಾರಕ್ಕೆ ಚಾಲನೆ ನೀಡಲಾಗುತ್ತಿದೆ. ತರಬೇತಿ ಯಶಸ್ವಿಯಾಗಿ ಪೂರ್ಣಗೊಳಿಸಿದವರಿಗೆ ನಿಗಮದಿಂದಉಚಿತವಾಗಿ ಹೊಲಿಗೆ ಯಂತ್ರ ವಿತರಿಸಲಾಗುತ್ತದೆ’ ಎಂದು ತಿಳಿಸಿದರು.

‘ಪ್ರಸಕ್ತ ವರ್ಷದಿಂದ ಕಾರುಗಳ ಬದಲಿಗೆ ಟ್ರ್ಯಾಕ್ಟರ್ ಗಳನ್ನು ನೀಡಲು ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. ರಾಜ್ಯದ 11 ಜಿಲ್ಲೆಗಳಲ್ಲಿ ನಿಗಮದ ಕಚೇರಿಗಳಿದ್ದು, ಅವುಗಳಿಗೆ ಸ್ವಂತ ಜಾಗ ಗುರುತಿಸಿ ಶಾಶ್ವತ ಕಟ್ಟಡ ನಿರ್ಮಿಸುವ ಗುರಿ ಹೊಂದಲಾಗಿದೆ’ ಎಂದರು.

ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ವೈ.ರವಿಕುಮಾರ್, ಭೋವಿ ಗುರುಪೀಠದ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಗೌನಹಳ್ಳಿ ಗೋವಿಂದಪ್ಪ, ಮುಖಂಡರಾದ ಕನಕದಾಸ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-44-474285507

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.