ಬುಧವಾರ, ಡಿಸೆಂಬರ್ 2, 2020
22 °C

ಚಿತ್ರದುರ್ಗ ನಗರಸಭೆ ಗದ್ದುಗೆ ಏರಿದ ಬಿಜೆಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಕಾಂಗ್ರೆಸ್ ಹಾಗೂ ಜೆಡಿಎಸ್ ಭದ್ರಕೋಟೆಯಂತಿದ್ದ ಚಿತ್ರದುರ್ಗ ನಗರಸಭೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಬಾವುಟ ಹಾರಾಡುತ್ತಿದೆ. ಸರಳ ಬಹುಮತ ಹೊಂದಿದ್ದ ಬಿಜೆಪಿ, ಪ್ರಥಮ ಬಾರಿಗೆ ಅಧಿಕಾರದ ಗದ್ದುಗೆ ಏರಿದೆ.

ಭಾನುವಾರ ನಡೆದ ಚುನಾವಣೆಯಲ್ಲಿ ನಗರಸಭೆಯ ನೂತನ ಅಧ್ಯಕ್ಷೆಯಾಗಿ 19ನೇ ವಾರ್ಡ್‌ನ ತಿಪ್ಪಮ್ಮ ವೆಂಕಟೇಶ್ ಹಾಗೂ ಉಪಾಧ್ಯಕ್ಷೆಯಾಗಿ 28ನೇ ವಾರ್ಡ್‌ನ ಶ್ವೇತಾ ವೀರೇಶ್ ಅವಿರೋಧವಾಗಿ ಆಯ್ಕೆಯಾದರು.

ಪರಿಶಿಷ್ಟ ಪಂಗಡದ ಮಹಿಳೆಗೆ ಅಧ್ಯಕ್ಷ ಸ್ಥಾನ ಹಾಗೂ ಹಿಂದುಳಿದ ವರ್ಗ ‘ಎ’ಗೆ ಉಪಾಧ್ಯಕ್ಷ ಸ್ಥಾನ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ತಿಪ್ಪಮ್ಮ, ಉಪಾಧ್ಯಕ್ಷ ಸ್ಥಾನಕ್ಕೆ ಶ್ವೇತಾ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಪ್ರತಿಸ್ಪರ್ಧಿಗಳು ಇಲ್ಲದಿರುವುದರಿಂದ ಅವಿರೋಧ ಆಯ್ಕೆ ನಡೆಯಿತು.

ನಗರಸಭೆಯ 35 ವಾರ್ಡ್‌ಗಳಿಗೆ 2018ರ ಆಗಷ್ಟ್‌ನಲ್ಲಿ ಚುನಾವಣೆ ನಡೆದಿತ್ತು. ಬಿಜೆಪಿ 17, ಪಕ್ಷೇತರ 7, ಜೆಡಿಎಸ್‌ 6 ಹಾಗೂ ಕಾಂಗ್ರೆಸ್‌ 5 ಸದಸ್ಯ ಬಲ ಹೊಂದಿದೆ. ಸರಳ ಬಹುಮತಕ್ಕೆ 19 ಮತಗಳ ಅಗತ್ಯವಿತ್ತು. ಪಕ್ಷೇತರರು ಬಿಜೆಪಿ ಬೆಂಬಲಿಸಿದ್ದರಿಂದ ಸರಳ ಬಹುಮತ ಪಡೆಯುವುದು ಬಿಜೆಪಿಗೆ ಕಷ್ಟವಾಗಲಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು