ಚಿತ್ರದುರ್ಗ: ‘ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಮುದಾಯದ ಸಹಭಾಗಿತ್ವ ಬಹು ಮುಖ್ಯ. ಜನ ಕಸವನ್ನು ಎಲ್ಲೆಂದರಲ್ಲಿ ಎಸೆಯದೆ, ಹಸಿ ಕಸ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ವಿಂಗಡಿಸಿ ಕಸದ ಗಾಡಿಗೆ ನೀಡುವ ಮೂಲಕ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಕೈಜೋಡಿಸಬೇಕು’ ಎಂದು ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ ಮನವಿ ಮಾಡಿದರು.

ಇಲ್ಲಿನ ಪ್ರಶಾಂತನಗರದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಕಸವನ್ನು ಎಲ್ಲೆಂದರಲ್ಲಿ ಹಾಕಿದರೆ ಅದರಲ್ಲಿ ವಿಷಾಣು ಉತ್ಪತ್ತಿಯಾಗಿ, ದುರ್ವಾಸನೆ ಸೂಸುವುದರ ಜೊತೆಗೆ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ನಗರಸಭೆಯಿಂದ ಮನೆ ಬಾಗಿಲಿಗೆ ಬರುವ ಕಸದ ಗಾಡಿಗೆ ಕಸವನ್ನು ಹಾಕಬೇಕು’ ಎಂದು ತಿಳಿಸಿದರು.

ಪರಿಸರ ಎಂಜಿನಿಯರ್ ಜೆ. ಜಾಫರ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಟಿ. ಶ್ರೀನಿವಾಸ ಮೂರ್ತಿ, ಹಿರಿಯ ಆರೋಗ್ಯ ನಿರೀಕ್ಷಕರಾದ ರುಕ್ಮಿಣಿ, ಬಾಬುರೆಡ್ಡಿ, ಕಿರಿಯ ಆರೋಗ್ಯ ನಿರೀಕ್ಷಕರಾದ ಜಯಪ್ರಕಾಶ್, ಹೀನ ಕೌಸರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-44-1773611600

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.