ಚಿತ್ರದುರ್ಗ: ‘ಮಹಿಳೆಯರಿಗೆ ರಾಜಕೀಯ ಮೀಸಲಾತಿ ಕಲ್ಪಿಸುವ ಸಂಬಂಧ ಲೋಕಸಭೆಯಲ್ಲಿ ಮಂಡನೆಯಾದ ಮಸೂದೆಗೆ ಸೋಲುಂಟಾಗಿದೆ. ಪುರುಷ ಪ್ರಧಾನ ದೇಶದಲ್ಲಿ ಇದೊಂದು ಕಹಿ ಘಟನೆಯಾಗಿದೆ. ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ನೀತಿಯಿಂದಲೇ ಮಸೂದೆಗೆ ಸೋಲುಂಟಾಯಿತು’ ಎಂದು ಸಂಸದ ಗೋವಿಂದ ಕಾರಜೋಳ ದೂರಿದರು.

‘ಪ್ರಧಾನಿ ನರೇಂದ್ರ ಮೋದಿ ಅವರು ಏ. 16, 17 ಹಾಗೂ 18ರಂದು ಲೋಕಸಭೆಯ ವಿಶೇಷ ಅಧಿವೇಶನ ಕರೆದಿದ್ದರು. ಮಹಿಳೆಯರಿಗೆ ಮೀಸಲಾತಿ ಜಾರಿ ಮಾಡುವ ಸಲುವಾಗಿ ಈ ಅಧಿವೇಶನ ಕರೆಯಲಾಗಿತ್ತು. ಇದರಲ್ಲಿ ಯಾವುದೇ ರಾಜಕೀಯ ಇರಲಿಲ್ಲ. ಮಸೂದೆ ಪಾಸ್ ಆಗಿದ್ದರೆ ದೇಶದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗುತ್ತಿತ್ತು. ಆದರೆ ಇಂಡಿಯಾ ಮೈತ್ರಿಕೂಟದ ರಾಜಕಾರಣದಿಂದಾಗಿ ಮಸೂದೆಗೆ ಸೋಲಾಯಿತು’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಬಸವಣ್ಣನವರ ಕಾಲದಲ್ಲೂ ಮಹಿಳೆಯರ ವಿಚಾರದಲ್ಲಿ ಸೋಲಾಗಿದೆ. ಪಟ್ಟಭದ್ರ ಹಿತಾಸಕ್ತಿಗಳು ಇದನ್ನು ವಿರೋಧ ಮಾಡಿವೆ. ಲೋಕಸಭೆಯ ಒಟ್ಟು ಸೀಟುಗಳನ್ನು 543ರಿಂದ 850ಕ್ಕೆ ಹೆಚ್ಚಳ ಮಾಡುವ ಉದ್ದೇಶದಿಂದ ಮಸೂದೆ ತರಲಾಗಿತ್ತು. ಆದರೆ, ಕಾಂಗ್ರೆಸ್ನ ಕುಟಿಲ ನೀತಿಯಿಂದ ಮಸೂದೆ ಅಂಗೀಕಾರ ಆಗಲಿಲ್ಲ. ದಕ್ಷಿಣ ಭಾರತದಲ್ಲಿ ಸೀಟುಗಳು ಕಡಿಮೆಯಾಗುತ್ತವೆ ಎಂಬ ಕುಂಟು ನೆಪವೊಡ್ಡಿ ಕಾಂಗ್ರೆಸ್ ಸದಸ್ಯರು ಮಸೂದೆಗೆ ವಿರೋಧ ಮಾಡಿದರು’ ಎಂದರು.

‘ನೆಹರೂ ಅವರ ಮನೆಯಲ್ಲಿ ಎಲ್ಲಾ ಮಹಿಳೆಯರು ಅಧಿಕಾರ ಅನುಭವಿಸಿದ್ದಾರೆ. ದೇಶದ ಇತರ ಮಹಿಳೆಯರಿಗೂ ಅಧಿಕಾರ ಸಿಗಬೇಕು ಎನ್ನುವ ಉದ್ದೇಶ ಕಾಂಗ್ರೆಸ್ ಪಕ್ಷದ ಮುಖಂಡರಿಗಿಲ್ಲ. ಒಕ್ಕೂಟ ವ್ಯವಸ್ಥೆಗೆ ದ್ರೋಹ ಮಾಡುತ್ತಿರುವ ಕಾಂಗ್ರೆಸ್ ಕುಟಿಲ ನೀತಿ ಅನುಸರಿಸುತ್ತಿದೆ. ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ನಂತರ ಮಹಿಳೆಯರಿಗೆ ಸಾಕಷ್ಟು ಯೋಜನೆ ಜಾರಿಗೆ ತಂದಿದ್ದಾರೆ. ಮಹಿಳೆಯರಿಗಾಗಿ 12 ಕೋಟಿ ಶೌಚಾಲಯ ನಿರ್ಮಾಣ ಮಾಡಿದ್ದಾರೆ’ ಎಂದು ಹೇಳಿದರು.

ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಸ್.ಕೆ. ಬಸವರಾಜ್, ಖನಿಜ ನಿಗಮದ ಮಾಜಿ ಅಧ್ಯಕ್ಷ ಲಿಂಗಮೂರ್ತಿ, ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆ ಶ್ಯಾಮಲಾ ಶಿವಪ್ರಕಾಶ್, ಕೆ.ಟಿ.ಕುಮಾರಸ್ವಾಮಿ, ಉಪಾಧ್ಯಕ್ಷ ಡಾ.ಸಿದ್ಧಾರ್ಥ ಗುಂಡಾರ್ಪಿ, ಮುರಳಿ, ಮಾಧುರಿ ಗಿರೀಶ್, ಶ್ರೀನಿವಾಸ್, ರೇಖಾ, ನಾಗಾರಜ್ ಬೇದ್ರೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-44-309262121

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.