ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ | ಹೊಸಹಟ್ಟಿ ಗ್ರಾಮದಲ್ಲಿ ಕಲುಷಿತ ನೀರು: 12 ಜನರಲ್ಲಿ ವಾಂತಿ–ಭೇದಿ

Published 12 ಆಗಸ್ಟ್ 2023, 13:17 IST
Last Updated 12 ಆಗಸ್ಟ್ 2023, 13:17 IST
ಅಕ್ಷರ ಗಾತ್ರ

ಚಿತ್ರದುರ್ಗ: ತಾಲ್ಲೂಕಿನ ಮುದ್ದಾಪುರ ಹೊಸಹಟ್ಟಿ ಗ್ರಾಮದ 12 ಜನರಲ್ಲಿ ವಾಂತಿ–ಭೇದಿ ಕಾಣಿಸಿಕೊಂಡು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರಾಮಕ್ಕೆ ಪೂರೈಕೆ ಮಾಡುತ್ತಿದ್ದ ನೀರನ್ನು ಪರೀಕ್ಷೆಗೆ ಒಳಪಡಿಸಿದ್ದು, ಕುಡಿಯಲು ಯೋಗ್ಯವಾಗಿಲ್ಲ ಎಂಬುದು ದೃಢಪಟ್ಟಿದೆ.

ಕವಾಡಿಗರಹಟ್ಟಿಯ ವಾಂತಿ–ಭೇದಿ ಪ್ರಕರಣ ನಿಯಂತ್ರಣಕ್ಕೆ ಬಂದ ಕೆಲ ದಿನಗಳಲ್ಲೇ ಹೊಸಹಟ್ಟಿ ಗ್ರಾಮದಲ್ಲಿ ಕಾಣಿಸಿಕೊಂಡಿದ್ದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ತಾತ್ಕಾಲಿಕ ಆಸ್ಪತ್ರೆಯನ್ನು ತೆರೆದು, ಜನರನ್ನು ತಪಾಸಣೆ ಮಾಡಲಾಗುತ್ತಿದೆ. ಕುಡಿಯುವ ನೀರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.

‘ಆ.5 ರಂದು ಮೊದಲ ಬಾರಿಗೆ ವಾಂತಿ–ಭೇದಿ ಪ್ರಕರಣ ಕಾಣಿಸಿಕೊಂಡಿತ್ತು. ಶುಕ್ರವಾರ ಮತ್ತು ಶನಿವಾರ ಹಲವು ಜನರು ಅಸ್ವಸ್ಥಗೊಂಡಿದ್ದಾರೆ. ನೀರು ಕಲುಷಿತಗೊಂಡು ಈ ಸಮಸ್ಯೆ ಉಂಟಾಗಿದೆಯೇ ಎಂಬುದನ್ನು ಪರೀಕ್ಷಿಸಲಾಗುತ್ತಿದೆ. ಕುಡಿಯುವ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪರೀಕ್ಷಿಸಲಾಗಿದೆ. ಕುಡಿಯಲು ಯೋಗ್ಯವಾಗಿಲ್ಲ ಎಂಬುದಾಗಿ ವರದಿ ಲಭ್ಯವಾಗಿದ್ದು, ಹೆಚ್ಚಿನ ಪರೀಕ್ಷೆಗೆ ಚಿತ್ರದುರ್ಗದ ಸರ್ವೇಕ್ಷಣಾ ಘಟಕಕ್ಕೆ ರವಾನೆ ಮಾಡಲಾಗಿದೆ’ ಎಂದು ಉಪವಿಭಾಗಾಧಿಕಾರಿ ಕಾರ್ತಿಕ್‌ ಮಾಹಿತಿ ನೀಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT