ಚಿತ್ರದುರ್ಗ: ‘ಗೋಮಾತೆಯನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ’ ಆಗ್ರಹಿಸಿ ಕರ್ನಾಟಕ ನಾಗರಿಕರ ಹಿತರಕ್ಷಣಾ ವೇದಿಕೆಯವರು ಸೋಮವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಹಸು–ಕರುವಿನೊಂದಿಗೆ ಬಂದ ಪ್ರತಿಭಟನಕಾರರು, ‘ಭಾರತದಲ್ಲಿ ಹಿಂದೂ- ಮುಸ್ಲಿಮರ ನಡುವೆ ಕೋಮು ಸಂಘರ್ಷಗಳಿಗೆ ಕಾರಣವಾಗಿರುವ ಹಲವಾರು ಅಂಶಗಳಲ್ಲಿ ಗೋಹತ್ಯೆ ವಿವಾದವೂ ಅತ್ಯಂತ ಗಂಭೀರವಾದದು. ಇದನ್ನೇ ಮುಂದಿಟ್ಟುಕೊಂಡು ನಿತ್ಯ ದೇಶದ ಒಂದಿಲ್ಲೊಂದು ಕಡೆ ಕೋಮು ಘರ್ಷಣೆಗಳು ನಡೆಯುತ್ತಿವೆ. ಆದ್ದರಿಂದ ಗೋಮಾತೆಯನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿದರೆ ಎಲ್ಲ ಸಮಸ್ಯೆಗೆ ಮುಕ್ತಿ ಸಿಗಲಿದೆ’ ಎಂದು ಆಗ್ರಹಿಸಿದರು.

‘ಬಕ್ರೀದ್ ಹಬ್ಬದ ಸಂದರ್ಭದಲ್ಲಿ ದೇಶದ ಏಕತೆ, ಕೋಮು– ಸೌಹಾರ್ದತೆಯನ್ನು ಕಾಪಾಡುವ ಉದ್ದೇಶದಿಂದ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಿರುವುದಕ್ಕೆ ಧ್ವನಿಗೂಡಿಸಲಾಗಿದೆ. ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ ಅದಕ್ಕೆ ಸಾಂವಿಧಾನಿಕ ಮನ್ನಣೆ ನೀಡಬೇಕು’ ಎಂದು ಒತ್ತಾಯಿಸಿದರು.

ಕರ್ನಾಟಕ ನಾಗರಿಕರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಬಿ.ಕೆ.ರಹಮತ್ವುಲ್ಲಾ, ಕಾರ್ಯದರ್ಶಿ ಓ.ಪ್ರತಾಪ್ ಜೋಗಿ, ವಕೀಲರಾದ ಮಲ್ಲೇಶಪ್ಪ, ಅಶೋಕ್ ಬೆಳಗಟ್ಟ, ರಮೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-44-2062757209

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.