ಚಿತ್ರದುರ್ಗ: ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ.ಸುಧಾಕರ್ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ (ಡಿಸಿಸಿಬಿ) ಅಧ್ಯಕ್ಷ ಸ್ಥಾನಕ್ಕೆ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರು ಶುಕ್ರವಾರ ಅವಿರೋಧವಾಗಿ ಆಯ್ಕೆಯಾದರು. ಆ ಮೂಲಕ 18 ವರ್ಷಗಳಿಂದ 5 ಬಾರಿ ಗೆದ್ದು ಬ್ಯಾಂಕ್ ಅಧ್ಯಕ್ಷರಾಗಿದ್ದ ಡಿ.ಸುಧಾಕರ್ ಆಡಳಿತ ಕೊನೆಗೊಂಡಿತು.

ಟಿ.ರಘುಮೂರ್ತಿ ಅವರು ಕಡಬನಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವನ್ನು ಪ್ರತಿನಿಧಿಸುತ್ತಿದ್ದರು. 2024, ನವೆಂಬರ್ನಲ್ಲಿ ರಾಜ್ಯ ಸರ್ಕಾರ ಅವರನ್ನು ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಿಸಿತ್ತು. ಸಹಕಾರ ಸಂಘಗಳ ಕಾಯ್ದೆ ಅನುಸಾರ ಶುಕ್ರವಾರ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ನಡೆಯಿತು. ರಘುಮೂರ್ತಿ ಅವರನ್ನು ಹೊರತುಪಡಿಸಿ ಯಾರೂ ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿಯೂ ಆದ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಇಲ್ಯಾಸ್ ಉಲ್ಲಾ ಷರೀಫ್, ರಘುಮೂರ್ತಿ ಅವರ ಹೆಸರು ಘೋಷಿಸಿದರು.

‘ಬ್ಯಾಂಕಿನ ಪ್ರಸ್ತುತ ಆಡಳಿತ ಮಂಡಳಿಯ ಅಧಿಕಾರಾವಧಿ ಇನ್ನು 3.4 ವರ್ಷ ಇದೆ. 2029ರ ಸೆಪ್ಟೆಂಬರ್ ತಿಂಗಳವರೆಗೆ ನೂತನ ಅಧ್ಯಕ್ಷರು ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ’ ಎಂದು ವ್ಯವಸ್ಥಾಪಕ ನಿರ್ದೇಶಕ ತಿಳಿಸಿದರು.

‘ಬ್ಯಾಂಕಿನ ಪ್ರಗತಿ ಹಾಗೂ ರೈತರ ಹಿತರಕ್ಷಣೆಗೆ ಬದ್ಧವಾಗಿ ಕೆಲಸ ಮಾಡಲಾಗುವುದು. 1955ರಲ್ಲಿ ಆರಂಭವಾದ ಡಿಸಿಸಿ ಬ್ಯಾಂಕ್, ಸುಮಾರು 70 ವರ್ಷಗಳಿಂದ ಜಿಲ್ಲೆಯ ರೈತಾಪಿ ವರ್ಗದ ಹಿತ ಕಾಯುವಲ್ಲಿ ಯಶಸ್ವಿಯಾಗಿದೆ. ರಾಜ್ಯದಲ್ಲಿರುವ 21 ಡಿಸಿಸಿ ಬ್ಯಾಂಕ್ಗಳ ಪೈಕಿ ಚಿತ್ರದುರ್ಗ ಡಿಸಿಸಿ ಬ್ಯಾಂಕ್ ಅತ್ಯುತ್ತಮ ಆರ್ಥಿಕ ಪರಿಸ್ಥಿತಿಯಲ್ಲಿದೆ. ಜಿಲ್ಲಾ ಕೇಂದ್ರದ ಮುಖ್ಯ ಕಚೇರಿ ಸೇರಿದಂತೆ ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ ಒಟ್ಟು 22 ಶಾಖೆಗಳನ್ನು ಬ್ಯಾಂಕ್ ಹೊಂದಿದೆ’ ಎಂದು ಅಭಿನಂದನೆ ಸ್ವೀಕರಿಸಿದ ಟಿ.ರಘುಮೂರ್ತಿ ಹೇಳಿದರು.

‘ಬ್ಯಾಂಕಿನಲ್ಲಿ ಒಟ್ಟು 160 ಮಂಜೂರಾದ ಹುದ್ದೆಗಳಿದ್ದು, ಸದ್ಯ 151 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. 9 ಹುದ್ದೆಗಳು ಮಾತ್ರ ಖಾಲಿ ಇವೆ. ಹಿರಿಯೂರು, ಮೊಳಕಾಲ್ಮುರು ಹಾಗೂ ಹೊಸದುರ್ಗ ತಾಲ್ಲೂಕುಗಳಲ್ಲಿ ಬ್ಯಾಂಕ್ ಸದ್ಯ ಸ್ವಂತ ಕಟ್ಟಡವನ್ನು ಹೊಂದಿದೆ. ಒಟ್ಟು 422 ಸಹಕಾರ ಸಂಘಗಳು ಬ್ಯಾಂಕ್ನ ಸದಸ್ಯತ್ವ ಹೊಂದಿವೆ. ಬ್ಯಾಂಕ್ನ ಒಟ್ಟು ಷೇರು ಬಂಡವಾಳ ₹106.26 ಕೋಟಿಗಳಾಗಿದ್ದು, ಇದರಲ್ಲಿ ಸರ್ಕಾರದ ಪಾಲು ₹1.41 ಕೋಟಿಗಳಾಗಿವೆ’ ಎಂದರು.

‘2025-26ನೇ ಆರ್ಥಿಕ ವರ್ಷದಲ್ಲಿ ಕೃಷಿ ಉದ್ದೇಶಗಳಿಗಾಗಿ ರಾಜ್ಯ ಸರ್ಕಾರದ ಶೂನ್ಯ ಬಡ್ಡಿದರ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಜಿಲ್ಲೆಯ 56,263 ರೈತರಿಗೆ ಒಟ್ಟು ₹496 ಕೋಟಿ ಅಲ್ಪಾವಧಿ ಬೆಳೆ ಸಾಲ ವಿತರಣೆ ಮಾಡಲಾಗಿದೆ. ಇದರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಒಟ್ಟಾರೆಯಾಗಿ ₹115 ಕೋಟಿ ಸಾಲ ನೀಡಲಾಗಿದೆ. ರಾಜ್ಯ ಸರ್ಕಾರದ ಯೋಜನೆ ಅಡಿಯಲ್ಲಿ ಶೂನ್ಯ ಬಡ್ಡಿ ದರದಲ್ಲಿ 619 ರೈತರಿಗೆ ₹35 ಕೋಟಿ ಸಾಲ ಸೌಲಭ್ಯ ಕಲ್ಪಿಸಲಾಗಿದೆ. ಕಳೆದ ವರ್ಷ ಬ್ಯಾಂಕ್ ಒಟ್ಟು ₹106 ಕೋಟಿ ವಹಿವಾಟು ನಡೆಸಿದ್ದು, ಎಲ್ಲಾ ವೆಚ್ಚಗಳನ್ನು ಕಳೆದು ಸುಮಾರು ₹10 ಕೋಟಿ ನಿವ್ವಳ ಲಾಭ ಗಳಿಸಿದೆ’ ಎಂದು ಹೇಳಿದರು.

‘2026-27 ನೇ ಸಾಲಿಗೆ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಶೂನ್ಯ ಬಡ್ಡಿ ದರದಲ್ಲಿ ಜಿಲ್ಲೆಯ 60,000 ರೈತರಿಗೆ ಒಟ್ಟು ₹558 ಕೋಟಿ ಅಲ್ಪಾವಧಿ ಬೆಳೆ ಸಾಲ ವಿತರಣೆ ಮಾಡುವ ಗುರಿ ಹೊಂದಲಾಗಿದೆ. ಇದರಲ್ಲಿ ಪರಿಶಿಷ್ಟ ಜಾತಿಯ 7,152 ರೈತರಿಗೆ ₹ 70.75 ಕೋಟಿ ಹಾಗೂ ಪರಿಶಿಷ್ಟ ಪಂಗಡದ 8,344 ರೈತರಿಗೆ ₹76 ಕೋಟಿ ಸಾಲ ನೀಡಲು ಕಾಯ್ದಿರಿಸಲಾಗಿದೆ. ರೈತರ ಆರ್ಥಿಕ ಸಬಲೀಕರಣವೇ ನಮ್ಮ ಬ್ಯಾಂಕ್ನ ಮೂಲ ಉದ್ದೇಶವಾಗಿದ್ದು, ಮುಂಬರುವ ದಿನಗಳಲ್ಲಿ ಇನ್ನಷ್ಟು ಜನಪರ ಯೋಜನೆಗಳ ಮೂಲಕ ಚಿತ್ರದುರ್ಗ ಡಿಸಿಸಿ ಬ್ಯಾಂಕ್ ಅನ್ನು ರಾಜ್ಯದಲ್ಲೇ ಮಾದರಿ ಸಹಕಾರಿ ಬ್ಯಾಂಕ್ ಆಗಿ ರೂಪಿಸಲಾಗುವುದು’ ಎಂದು ತಿಳಿಸಿದರು.

‘ಬ್ಯಾಂಕಿನಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾಗುವ ನೌಕರರ ಕಲ್ಯಾಣಕ್ಕಾಗಿ ವಿಶೇಷ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಬ್ಯಾಂಕಿನ ಲಾಭಾಂಶದಲ್ಲಿ ಕಾಯ್ದಿರಿಸುವ ಠೇವಣಿಯಿಂದ ಬರುವ ಬಡ್ಡಿಯ ಹಣದ ಮೂಲಕ ನಿವೃತ್ತ ನೌಕರರಿಗೆ ಪಿಂಚಣಿ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ’ ಎಂದರು.

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ಉಪಾಧ್ಯಕ್ಷ ಎಚ್.ಬಿ.ಮಂಜುನಾಥ್, ನಿರ್ದೇಶಕರಾದ ಟಿ.ಮಹಾಂತೇಶ್, ಎಸ್.ಆರ್.ಗಿರೀಶ್, ನಾಗರೆಡ್ಡಿ, ಪಿ.ರಾಜು, ಎಂ.ನಿಶಾನಿ ಜಯಣ್ಣ, ಡಿ.ಎಸ್.ಶಶಿಧರ, ಪಿ.ವಿನೋದಾ ಸ್ವಾಮಿ, ಕೆ.ಜಗಣ್ಣ, ಎಚ್.ಎಂ.ದ್ಯಾಮಣ್ಣ, ಪಿ.ತಿಪ್ಪೇಸ್ವಾಮಿ, ಡಾ.ಕೆ.ಅನಂತ್, ಓ.ಮಂಜುನಾಥ್, ಸಹಕಾರ ಸಂಘಗಳ ಉಪನಿಬಂಧಕ ದಿಲೀಪ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-44-396765775

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.