ಚಿತ್ರದುರ್ಗ: ಈಚೆಗೆ ನಡೆದ ಅಂಗವಿಕಲರ ಕುಂದುಕೊರತೆ ಸಭೆಯಲ್ಲಿ ಅಂಗವಿಕಲರ ಯಾವ ಬೇಡಿಕೆಗಳೂ ಈಡೇರಿಲ್ಲ. ಸಭೆಯಲ್ಲಿ ಜಿಲ್ಲಾಧಿಕಾರಿಗಳೇ ಗೈರು ಹಾಜರಾಗಿದ್ದರು, ಹೀಗಾಗಿ ಅಂಗವಿಕಲರಿಗೆ ನ್ಯಾಯ ಸಿಕ್ಕಿಲ್ಲ ಎಂದು ಆರೋಪಿಸಿ ರಾಜ್ಯ ಅಂಗವಿಲರ ಒಕ್ಕೂಟದ ಸದಸ್ಯರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಿದ ಸದಸ್ಯರು ಕೂಡಲೇ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿ ಅಂಗವಿಲರ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿದ್ದಾರೆ. 3 ತಿಂಗಳಿಗೊಮ್ಮೆ ಅಂಗವಿಕಲ ಪ್ರತಿನಿಧಿಗಳೊಂದಿಗೆ ಸಮಿತಿ ಸಭೆ ನಡೆಸಬೇಕು. ಇಲ್ಲಿಯವರೆಗೂ 2 ಸಭೆ ನಡೆದಿವೆ. ಆದರೆ ಜಿಲ್ಲಾಧಿಕಾರಿ ಯೇ ಸಭೆಗೆ ಬಂದಿಲ್ಲ. ಹೀಗಾಗಿ ನಮ್ಮ ಹಕ್ಕುಗಳಿಗೆ ಗೌರವವೇ ಇಲ್ಲವಾಗಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪೋಷಕರು ಇಲ್ಲದ ಬುದ್ಧಿಮಾಂದ್ಯ, ಅಂಗವಿಕಲ ಮಕ್ಕಳಿಗೆ ಜಿಲ್ಲಾಡಳಿತ ಪೋಷಕತ್ವ ವಹಿಸಿಕೊಳ್ಳಬೇಕು. ಅಂಗವಿಕಲರಿಗೆ ಮಾಸಾಶನ ನೀಡಲು ₹ 32,000 ಆದಾಯ ಮಿತಿಯ ಷರತ್ತನ್ನು ಕೂಡಲೇ ವಾಪಸ್ ಪಡೆಯಬೇಕು. ಸರ್ಕಾರ ವಸತಿ ಯೋಜನೆಗಳಲ್ಲಿ ಅಂಗವಿಕಲರಿಗೆ ಶೇ 5ರಷ್ಟು ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು.

ಶಾಸಕರು ಹಾಗೂ ಸಂಸದರ ಅನುದಾನದಲ್ಲಿ ಅಂಗವಿಕಲರಿಗಾಗಿ ಅಂಗವಿಕಲರ ಭವನ ನಿರ್ಮಿಸಬೇಕು. ನಕಲಿ ಅಂಗವಿಕಲರ ಪ್ರಮಾಣ ಪತ್ರ ಪಡೆದು ಮಾಸಾಶನ ಪಡೆಯುತ್ತಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಜಿಲ್ಲಾ ಪ್ರವಾಸಿ ಮಂದಿರದಲ್ಲಿ ಅಂಗವಿಲಕರ ಸಮಸ್ಯೆ ಕುರಿತಂತೆ ಚರ್ಚೆ, ಸಭೆ ನಡೆಸಲು ಒಂದು ಕೊಠಡಿಯನ್ನು ಮೀಸಲಿಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಿ.ಮುಕ್ಕಣ್ಣ, ಶಿವಕುಮಾರ್, ಸುಜಾತಾ, ಮಂಜಣ್ಣ, ಎಸ್.ತಿಪ್ಪೇಸ್ವಾಮಿ, ಜಿ.ಎಸ್.ಲೋಕೇಶ್, ಎನ್.ಚಂದ್ರಶೇಖರಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-44-1627247743

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.