ಚಿತ್ರದುರ್ಗ: ನಿಯಮಗಳನ್ನು ಗಾಳಿಗೆ ತೂರಿ ನೇರವಾಗಿ ಔಷಧ ಖರೀದಿ, ಜಿಲ್ಲಾ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಲು ವೈಫಲ್ಯ, ಮೇಲಾಧಿಕಾರಿಗಳ ಸೂಚನೆ ಮೀರಿ ಪತ್ರಿಕಾಗೋಷ್ಠಿ ನಡೆಸಿದ್ದು ಇವೇ ಮೊದಲಾದ ಆರೋಪಗಳ ಆಧಾರದ ಮೇಲೆ ಆರೋಗ್ಯ ಇಲಾಖೆ ಬುಧವಾರ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

ಕರ್ತವ್ಯ ಲೋಪದ ಆರೋಪದ ಮೇಲೆ ಇಲಾಖಾ ತನಿಖೆಯನ್ನು ಕಾಯ್ದಿರಿಸಿ ಕರ್ನಾಟಕ ನಾಗರಿಕ ಸೇವಾ ನಿಯಮಗಳಡಿ ಡಾ. ರವೀಂದ್ರ ಅವರನ್ನು ಅಮಾನತು ಮಾಡಲಾಗಿದೆ. ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯದೇ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಆದೇಶಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಶಾಂತಪ್ಪ ಎನ್ ದಾನೆನವರ ತಿಳಿಸಿದ್ದಾರೆ.

ಜಿಲ್ಲಾ ಆರೋಗ್ಯ ರಕ್ಷಾ ಸಭೆಯ ಅನುಮೋದನೆ ಪಡೆಯದೇ ನೇರವಾಗಿ ಔಷಧಿಗಳನ್ನು ಖರೀದಿಸಿದ ಆರೋಪವನ್ನು ರವೀಂದ್ರ ಎದುರಿಸುತ್ತಿದ್ದರು. ಆ.20, 2025ರಂದು ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿದಾಗ ಆಸ್ಪತ್ರೆಯನ್ನು ಸ್ವಚ್ಛವಾಗಿಟ್ಟುಕೊಂಡಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿತ್ತು. ಸಚಿವರು ಕೂಡ ರವೀಂದ್ರ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಜೊತೆಗೆ ಆಸ್ಪತ್ರೆ ಸಿಬ್ಬಂದಿಗೆ ಸಾಮೂಹಿಕವಾಗಿ ರಜೆ ಮಂಜೂರು ಮಾಡಿ ಸೇವೆಯಲ್ಲಿ ವ್ಯತ್ಯಯ ಉಂಟಾಗುವಂತೆ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

ಆಸ್ಪತ್ರೆಗೆ ಬೇಕಾದ ಪರಿಕರಗಳ ಖರೀದಿಯಲ್ಲೂ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಔಷಧಿಗಳ ಕೊರತೆಯುಂಟಾದಾಗ ಜಿಲ್ಲಾ ಶಸ್ತ್ರಚಿಕಿತ್ಸಕರು ಸಿಬ್ಬಂದಿಗೆ ಸರಿಯಾಗಿ ಸ್ಪಂದಿಸಿಲ್ಲ. ಹಣಕಾಸು ನಿರ್ವಹಣೆಯಲ್ಲೂ ಅವ್ಯವಹಾರ ಎಸಗಿದ್ದಾರೆ ಎಂದು ಸಿಬ್ಬಂದಿ ದೂರಿದ್ದರು. ಈ ಬಗ್ಗೆ ಜಿಲ್ಲಾಧಿಕಾರಿ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಿದ್ದರು. ಇದನ್ನು ಪರಿಗಣಿಸಿರುವ ಇಲಾಖೆ ಎಸ್.ಪಿ.ರವೀಂದ್ರ ಅವರನ್ನು ಅಮಾನತುಗೊಳಿಸಿ ಆದೇಶಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-44-1199480875

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.