ಚಿತ್ರದುರ್ಗ: ‘ಗ್ರಾಮೀಣ ಭಾಗದ ಯಾವುದೇ ಹಳ್ಳಿಯಲ್ಲಿ ಕುಡಿಯುವ ನೀರಿಗೆ ಕೊರತೆ ಎದುರಾದರೆ ಅಧಿಕಾರಿಗಳು ತಕ್ಷಣವೇ ಸ್ಪಂದಿಸಬೇಕು. ಸಮಸ್ಯೆ ತಲೆದೋರಿದ 24 ಗಂಟೆಯೊಳಗೆ ನೀರು ಸರಬರಾಜು ಮಾಡಬೇಕು. ಸಮೀಪದ ಆರ್ಒ ಘಟಕಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು’ ಎಂದು ಸಂಸದ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಕುರಿತ ಸಭೆಯಲ್ಲಿ ಮಾತನಾಡಿದರು.

‘ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಕುರಿತು ದೂರವಾಣಿ ಮೂಲಕ ಅಳಲು ತೋಡಿಕೊಳ್ಳುತ್ತಿದ್ದಾರೆ. ಅಧಿಕಾರಿಗಳು ಹಳ್ಳಿಗಳಿಗೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿ ತಕ್ಷಣವೇ ಸ್ಪಂದಿಸಬೇಕು. ತೀವ್ರ ನೀರಿನ ಅಭಾವವಿರುವ ಗ್ರಾಮಗಳಲ್ಲಿ ಸುತ್ತಮುತ್ತಲಿನ ರೈತರ ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆದು ನೀರು ಪೂರೈಸಬೇಕು. ಕೊಳವೆಬಾವಿ ಸೌಲಭ್ಯವಿಲ್ಲದ ಕಡೆಗಳಲ್ಲಿ ಟ್ಯಾಂಕರ್ ಮೂಲಕ ನೀರು ತಲುಪಿಸುವ ವ್ಯವಸ್ಥೆ ಮಾಡಬೇಕು’ ಎಂದರು.

‘ಬೇಸಿಗೆಯ ಅವಧಿಯಲ್ಲಿ ಮನುಷ್ಯರಷ್ಟೇ ಅಲ್ಲದೆ ಜಾನುವಾರು ಮತ್ತು ಪಕ್ಷಿಗಳಿಗೂ ನೀರಿನ ಅಗತ್ಯವಿರುತ್ತದೆ. ಸಾರ್ವಜನಿಕರು ನೀರು ವ್ಯರ್ಥ ಮಾಡದೆ ಮಿತವಾಗಿ ಬಳಸಬೇಕು. ಉಪ್ಪು ನೀರು ಲಭ್ಯವಿರುವ ಕಡೆಗಳಲ್ಲಿ ಅದನ್ನು ಮನೆ ಬಳಕೆಗೆ ಮತ್ತು ಸಿಹಿ ನೀರನ್ನು ಕುಡಿಯಲು ಮಾತ್ರ ಉಪಯೋಗಿಸಬೇಕು. ನೀರಿನ ಸಮಸ್ಯೆ ಕಂಡುಬಂದರೆ ತಕ್ಷಣವೇ ಅಧಿಕಾರಿಗಳಿಗೆ ತಿಳಿಸಬೇಕು’ ಎಂದು ತಿಳಿಸಿದರು.

‘ವಿ.ವಿ. ಸಾಗರದಿಂದ ಹಿರಿಯೂರಿನ ಸುವರ್ಣಮುಖಿ ನದಿ ಬ್ಯಾರೇಜ್ಗೆ ಕುಡಿಯುವ ನೀರಿನ ಬಳಕೆಗೆ 0.1 ಟಿಎಂಸಿ ನೀರು ಹರಿಸಲು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಿಂದ ಅನುಮತಿ ಪಡೆಯಬೇಕು. ಇದಕ್ಕೆ ಅಗತ್ಯವಿರುವ ಕಾಗದ, ಪತ್ರ ಪ್ರಕ್ರಿಯೆಯನ್ನು ವೇಗವಾಗಿ ನಡೆಸಬೇಕು. ನೀರು ಇಲ್ಲದ ಕಡೆಗಳಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಯಾವುದೇ ರೀತಿಯ ಅಡೆತಡೆಗಳಿದ್ದರೆ ಅವುಗಳನ್ನು ನಿವಾರಿಸಬೇಕು’ ಎಂದರು.

‘ಜಿಲ್ಲೆಯ ಅಂದಾಜು 93 ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಂಡಿದೆ. ಒಟ್ಟು 216 ಜನವಸತಿ ಪ್ರದೇಶಗಳಲ್ಲಿ ನೀರಿನ ಅಭಾವವಿದೆ. ಪ್ರಸಕ್ತ ವರ್ಷದಲ್ಲಿ ಹೊಸದಾಗಿ 54 ಕೊಳವೆ ಬಾವಿಗಳನ್ನು ಕೊರೆಸಲಾಗಿದೆ. ಇದರಲ್ಲಿ 7 ಕೊಳವೆ ಬಾವಿಗಳಲ್ಲಿ ಕಡಿಮೆ ನೀರು ಲಭ್ಯವಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎಸ್. ಆಕಾಶ್ ಮಾಹಿತಿ ನೀಡಿದರು.

‘ಹೊಳಲ್ಕೆರೆ ತಾಲ್ಲೂಕಿನ ಆರ್. ನುಲೇನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಂಗಾಪುರ ಲಂಬಾಣಿಹಟ್ಟಿ, ಚಿಕ್ಕಜಾಜೂರಿನ ಮಾರುತಿ ನಗರ, ಹಿರಿಯೂರು ತಾಲ್ಲೂಕಿನ ಕುಂಟಪ್ಪನಹಟ್ಟಿ ಜನವಸತಿ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಒದಗಿಸಲಾಗುತ್ತಿದೆ. ಜಿಲ್ಲೆಯಲ್ಲಿ 1,045 ಆರ್.ಒ ಘಟಕಗಳಿದ್ದು, 832 ಕಾರ್ಯಾಚರಣೆಯಲ್ಲಿವೆ. 133 ಘಟಕಗಳು ಸ್ಥಗಿತಗೊಂಡಿವೆ. ಆರ್.ಒ. ಘಟಕಗಳ ದುರಸ್ತಿಗೆ ₹ 63 ಲಕ್ಷ ಅನುದಾನದ ಅವಶ್ಯಕತೆ ಇದೆ. ಹೊಸ ಆರ್.ಒ. ಘಟಕಗಳ ನಿರ್ಮಾಣಕ್ಕೆ ಕೆಎಂಇಆರ್ಸಿ ಅಡಿ ಕ್ರಿಯಾ ಯೋಜನೆ ರೂಪಿಸಲಾಗಿದೆ’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಎಂಜಿನಿಯರ್ ಲಮಾಣಿ, ಜಿ.ಪಂ. ಉಪ ಕಾರ್ಯದರ್ಶಿ ರಂಗಸ್ವಾಮಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಅಮರನಾಥ್ ಜೈನ್, ಪೌರಾಯುಕ್ತೆ ಲಕ್ಷ್ಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-44-485997074

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.