ಚಿತ್ರದುರ್ಗ: ‘ಜಿಲ್ಲೆಯಲ್ಲಿ ಮಾದಕ ವಸ್ತು ಸೇವನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರ ಹಾವಳಿ ತಡೆಗಟ್ಟದಿದ್ದರೆ ಪರಿಸ್ಥಿತಿ ಗಂಭೀರವಾಗಲಿದೆ. ಸಂಬಂಧಪಟ್ಟ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡುವ ತುರ್ತು ಎದುರಾಗಿದೆ’ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಜಿಲ್ಲಾ ಮಟ್ಟದ ನ್ಯಾಷನಲ್ ನಾರ್ಕೊಟಿಕ್ಸ್ ಕೋ-ಆರ್ಡಿನೇಷನ್ ಪೋರ್ಟಲ್ಸ್ (ಎನ್ಸಿಒಆರ್ಡಿ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ‘ಮಾದಕ ವಸ್ತುಗಳ ಹಾವಳಿ ತಡೆಗಟ್ಟಲು ಮತ್ತು ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ಇಡಲು ಪೊಲೀಸ್, ಅಬಕಾರಿ, ಅರಣ್ಯ, ಕೃಷಿ, ತೋಟಗಾರಿಕೆ ಸೇರಿದಂತೆ ಶಾಲಾ ಕಾಲೇಜುಗಳ ಮುಖ್ಯಸ್ಥರು ನಿರಂತರ ಶ್ರಮಿಸಬೇಕು’ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

‘ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಗಾಂಜಾ ಮಾರಾಟದ ಪ್ರಕರಣಗಳು ಕಡಿಮೆ ಆಗಿವೆ. ಆದರೆ, ಮಾದಕ ವಸ್ತುಗಳ ಸೇವನೆ ಪ್ರಕರಣ ಹೆಚ್ಚಾಗುತ್ತಿರುವುದು ಆತಂಕಕಾರಿ ವಿಚಾರ. ಶಾಲಾ- ಕಾಲೇಜುಗಳಲ್ಲಿ ವ್ಯಾಪಕ ಜಾಗೃತಿ ಹಮ್ಮಿಕೊಳ್ಳಬೇಕು’ ಎಂದರು.

‘ಜಿಲ್ಲೆಯು ಆಂಧ್ರಪ್ರದೇಶದೊಂದಿಗೆ ಸುಮಾರು 150 ಕಿ.ಮೀ ಗಡಿ ಹಂಚಿಕೊಂಡಿದೆ. ಈ ಭಾಗದ ಕಾಲುದಾರಿಗಳ ಮೂಲಕ ಅಕ್ರಮವಾಗಿ ಸೇಂದಿ ಮತ್ತು ಮಾದಕ ವಸ್ತುಗಳ ಸಾಗಣೆ ಮಾಡುವ ಸಾಧ್ಯತೆ ಇದೆ. ಇದನ್ನು ತಡೆಗಟ್ಟಲು ಅಬಕಾರಿ ಮತ್ತು ಪೊಲೀಸ್ ಇಲಾಖೆಗಳು ಚೆಕ್ಪೋಸ್ಟ್ ಸ್ಥಾಪಿಸಿ ಕಾರ್ಯಾಚರಣೆ ನಡೆಸಬೇಕು’ ಎಂದು ತಿಳಿಸಿದರು.

‘ಆರೋಗ್ಯ ಇಲಾಖೆಯಿಂದ ಪ್ರಾಥಮಿಕ, ಸಮುದಾಯ ಆಸ್ಪತ್ರೆಗಳಿಗೆ ಡ್ರಗ್ ಟೆಸ್ಟಿಂಗ್ ಕಿಟ್ ಸರಬರಾಜು ಮಾಡಬೇಕು. ಶಂಕಿತರನ್ನು ಪೊಲೀಸರು ಪರೀಕ್ಷೆಗೆ ಕರೆ ತಂದಾಗ ವೈದ್ಯರು ಅಸಹಕಾರ ನೀಡಬಾರದು. ತಪಾಸಣೆ ಮಾಡಲು ನಿರಾಕರಿಸುವ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಎಚ್ಚರಿಸಿದರು.

‘ಗಾಂಜಾ ಬೆಳೆಯುವುದರಿಂದ ಎದುರಿಸಬೇಕಾದ ಕಾನೂನು ಸಂಘರ್ಷದ ಕುರಿತು ರೈತರಿಗೆ ಜಾಗೃತಿ ಮೂಡಿಸಬೇಕು. ಬೆಳೆ ಸಮೀಕ್ಷೆ ಹಂತದಲ್ಲಿ ಸಮೀಕ್ಷಾಕಾರರಿಗೆ ಗಾಂಜಾ ಬೆಳೆಯ ಮಾಹಿತಿ ನೀಡಲು ತರಬೇತಿ ನೀಡಿ’ ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

‘ಅಂತರರಾಜ್ಯ ಮದ್ಯ ಸಾಗಣೆ ತಡೆಗಟ್ಟಲು ಆಂಧ್ರಪ್ರದೇಶದ ಅಧಿಕಾರಿಗಳೊಂದಿಗೆ ಸಮನ್ವಯ ಸಭೆಗಳನ್ನು ನಡೆಸಲಾಗುತ್ತಿದೆ. ಅಲ್ಲದೆ, ಕಂಟ್ರೋಲ್ ರೂಮ್ ಸ್ಥಾಪಿಸಲಾಗಿದ್ದು, ಜನರು ದೂರು ನೀಡಿದ ತಕ್ಷಣ ಸ್ಪಂದಿಸಲು ಹೋಮ್ ಗಾರ್ಡ್ಗಳ ತಂಡವನ್ನು ನಿಯೋಜಿಸಲಾಗಿದೆ’ ಎಂದು ಅಬಕಾರಿ ಉಪ ಆಯುಕ್ತೆ ಆಶಾಲತಾ ಸಭೆಗೆ ತಿಳಿಸಿದರು.

ಉಪವಿಭಾಗಾಧಿಕಾರಿ ಕೆ.ಜೆ.ಕಾಂತರಾಜು, ಪೊಲೀಸ್ ಉಪಾಧೀಕ್ಷಕರಾದ ಅರುಣ್ ನಾಗೇಗೌಡ, ಶಿವಕುಮಾರ್, ಎಂ.ಜಿ.ಸತ್ಯನಾರಾಯಣ್ ರಾವ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಜಿ.ಸವಿತಾ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಬಿ.ಮಂಜುನಾಥ, ಆರ್ಸಿಎಚ್ ಅಧಿಕಾರಿ ಡಾ.ಅಭಿನವ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-44-1390538047

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.