ಹಿರಿಯೂರು: ತಾಲ್ಲೂಕಿನ ಬಬ್ಬೂರು ಫಾರಂನಲ್ಲಿರುವ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಜೂನ್ 5 ರಂದು ಸಾವಯವ ಕೃಷಿ ಕುರಿತು ಜಿಲ್ಲೆಯ ಆಸಕ್ತ ರೈತರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೇಂದ್ರದ ಸಹಾಯಕ ನಿರ್ದೇಶಕ ಆರ್. ರಜನೀಕಾಂತ ತಿಳಿಸಿದ್ದಾರೆ.

ಕೃಷಿ ಮತ್ತು ತೋಟಗಾರಿಕಾ ಬೆಳೆಗಳಲ್ಲಿ ಸಾವಯವ ಪದ್ಧತಿಯನ್ನು ಅನುಸರಿಸುವ ವಿಧಾನಗಳು, ನೀರು ಮತ್ತು ಪೋಷಕಾಂಶಗಳ ಸಮರ್ಪಕ ನಿರ್ವಹಣೆ ಕುರಿತು ಬ್ಯಾಡರಹಳ್ಳಿಯ ಪ್ರಗತಿಪರ ಕೃಷಿಕ ಇಂದೂಧರ ಅವರು ರೈತರೊಂದಿಗೆ ಮಾಹಿತಿ ಹಂಚಿಕೊಳ್ಳಲಿದ್ದಾರೆ.

ಹಿರಿಯೂರಿನ ಪ್ರಗತಿಪರ ಕೃಷಿಕ ಶ್ರೀನಿವಾಸ್ ಅವರು, ಜೇನು ಕೃಷಿಯ ಪ್ರಾಮುಖ್ಯತೆ, ಜೇನಿನ ಉಪ ಉತ್ಪನ್ನಗಳು ಮತ್ತು ಜೇನು ಕುಟುಂಬದ ನಿರ್ವಹಣೆ ಕುರಿತು ತಮ್ಮ ಅನುಭವಗಳನ್ನು ತಿಳಿಸಲಿದ್ದು, ಲಾಭದಾಯಕ ಹಾಗೂ ಸುಸ್ಥಿರ ಸಮಗ್ರ ಕೃಷಿ ಪದ್ಧತಿಯ ಕುರಿತು ಆರ್.ರಜನೀಕಾಂತ ರೈತರಿಗೆ ಮಾಹಿತಿ ನೀಡಲಿದ್ದಾರೆ.

8277931058 ಸಂಖ್ಯೆಗೆ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬೇಕು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-44-1401622531

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.