ಚಿತ್ರದುರ್ಗ: ‘ಬೆಳೆಗಳಿಗೆ ಸರಿಯಾದ ಬೆಲೆ ಸಿಗದ ಕಾರಣ ರೈತರು ಸಂಕಷ್ಟ ಸ್ಥಿತಿ ಎದುರಿಸುತ್ತಿದ್ದಾರೆ. ರೈತರು ಎದುರಿಸುತ್ತಿರುವ ಸಮಸ್ಯೆಗಳ ಅರಿವು ನನಗಿದ್ದು ಅವುಗಳನ್ನು ಹಂತಹಂತವಾಗಿ ಪರಿಹರಿಸಲು ಬದ್ಧನಾಗಿದ್ದೇನೆ’ ಎಂದು ಶಾಸಕ ಕೆ.ಸಿ.ವೀರೇಂದ್ರ ಹೇಳಿದರು.

ತಾಲ್ಲೂಕಿನ ಭೀಮಸಮುದ್ರ ಗ್ರಾಮದಲ್ಲಿ ಭಾನುವಾರ ನಡೆದ ಕರ್ನಾಟಕ ರಾಜ್ಯ ರೈತ ಸಂಘದ ಗ್ರಾಮ ಘಟಕ ಉದ್ಘಾಟಿಸಿ ಮಾತನಾಡಿದರು.

‘ಸರ್ಕಾರ ರೂಪಿಸಿರುವ ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು. ಭೀಮಸಮುದ್ರ ಗ್ರಾಮದ ಸುತ್ತಮುತ್ತಲಿನ ರೈತರು ಕೂಡ ಹಲವು ಸಮಸ್ಯೆ ಎದುರಿಸುತ್ತಿದ್ದಾರೆ. ಎಲ್ಲರ ಸಮಸ್ಯೆಗಳನ್ನು ಬಗೆಹರಿಸಲು ಆದ್ಯತೆ ನೀಡಲಾಗುವುದು’ ಎಂದರು.

ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ‘ಬೆಳೆಗಳಿಗೆ ಮಾರುಕಟ್ಟೆಗಳಲ್ಲಿ ಸೂಕ್ತ ಬೆಲೆ ಸಿಗದೆ ರೈತ ಸಾಲಗಾರನಾಗಿದ್ದಾನೆ. ಮಧ್ಯವರ್ತಿಗಳಿಗೆ ಸಾಕಷ್ಟು ಲಾಭವಾಗುತ್ತಿದ್ದು ರೈತರು ನಷ್ಟ ಅನುಭವಿಸುತ್ತಿದ್ದಾರೆ’ ಎಂದರು.

ಪರಿಸರವೇ ವಿನಾಶವಾದರೆ ರೈತನ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ. ಗಣಿ ಬಾಧಿತ ಪ್ರದೇಶಕ್ಕೆ ಪ್ರತ್ಯೇಕವಾಗಿ ನಿಗಮಗಳನ್ನು ತೆರೆದು ರೈತರಿಗೆ ಮತ್ತು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ವಿಜಯಪುರದ ಪ್ರವೀಣ್ ಗುರೂಜಿ ಅಭಿಪ್ರಾಯಪಟ್ಟರು.

ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ‘ಕೃಷಿ ಕ್ಷೇತ್ರಗಳಲ್ಲಿ ಉದ್ಯೋಗ ಸೃಷ್ಟಿ ಮಾಡುವ ಅವಶ್ಯಕತೆ ಇದೆ. ಸರ್ಕಾರದ ಯೋಜನೆಗಳು ಹಾಗೂ ಹವಾಮಾನ ವೈಪರೀತ್ಯದಿಂದ ರೈತ ಮತ್ತೆ ಸಾಲದ ಸುಳಿಯಲ್ಲಿ ಸಿಲುಕಿ ಪ್ರಾಣ ಬಿಡುತ್ತಿದ್ದಾರೆ’ ಎಂದರು.

ಸಂಘದ ರಾಜ್ಯ ಘಟಕದ ಕಾರ್ಯದರ್ಶಿಗಳಾದ ಚಾಮರಸ ಮಾಲಿಪಾಟೀಲ್, ವಸಂತ್ ಕುಮಾರ್, ಉಪಾಧ್ಯಕ್ಷರಾದ ಕೆ.ಪಿ ಭೂತಯ್ಯ, ಬಸ್ತಿಹಳ್ಳಿ ಸುರೇಶ್ ಬಾಬು, ಅರುಣ್ ಕುಮಾರ್, ಕುರುಡಿ ಕೆ.ಸಿ ಹೊರಕೇರಪ್ಪ, ಜಿಲ್ಲಾ ಘಟಕದ ಅಧ್ಯಕ್ಷ ಧನಂಜಯ್, ಚಿಕ್ಕಪ್ಪನಳ್ಳಿ ರುದ್ರಸ್ವಾಮಿ, ಕಾಂತರಾಜ್ ಹುಣ್ಸೆಕಟ್ಟೆ, ರಮೇಶ್ ಬಿ.ದುರ್ಗ, ಸಿ.ಎಲ್ ಅವಿನಾಶ್, ಜಯಣ್ಣ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-44-676982212

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.