ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಕೃಷಿ ವಿಜ್ಞಾನ ಕೇಂದ್ರದ ಪ್ರವೇಶಕ್ಕೆ ಈಚೆಗೆ ನಡೆದ ಮರು ಪ್ರವೇಶ ಪರೀಕ್ಷೆಯಲ್ಲಿ ಸ್ಥಳೀಯ ರೈತರ ಮಕ್ಕಳಿಗೆ ಬಹಳ ಅನ್ಯಾಯವಾಗಿದೆ. ಈಗಿನ ಫಲಿತಾಂಶ ಕೈಬಿಟ್ಟು ಹಿಂದೆ ನಡೆದ ಪರೀಕ್ಷೆಯ ಫಲಿತಾಂಶವನ್ನೇ ಪರಿಗಣನೆ ಮಾಡಬೇಕು ಎಂದು ಒತ್ತಾಯಿಸಿ ರೈತಸಂಘ ಹಾಗೂ ಹಸಿರು ಸೇನೆ ಸದಸ್ಯರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರವೇಶ ಪರೀಕ್ಷೆ ಬರೆದವರೂ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಿದರು. ರೈತರ ಮಕ್ಕಳಿಗೆ ಕೃಷಿ ವಿಜ್ಞಾನ ಕೇಂದ್ರದ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಮೇ 10ರಂದು ನಡೆದ ಪ್ರವೇಶ ಪರೀಕ್ಷೆಯಲ್ಲಿ ಹಲವು ರೈತರು ಮಕ್ಕಳು ತೇರ್ಗಡೆ ಹೊಂದಿ ಕೃಷಿ ವಿಜ್ಞಾನ ಕೇಂದ್ರದ ಪ್ರವೇಶಕ್ಕೆ ಅರ್ಹತೆ ಪಡೆದಿದ್ದರು. ಆದರೆ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಗಾಳಿ ಸುದ್ದಿ ಹರಡಿಸಲಾಯಿತು. ನಂತರ ನಡೆಸಲಾದ ತನಿಖೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಎಂಬ ವಿಷಯ ಖಾತ್ರಿಯಾಗಿದೆ. ಇದರ ನಡುವೆಯೂ ಮರು ಪ್ರವೇಶ ಪರೀಕ್ಷೆ ನಡೆಸುವ ಅನಿವಾರ್ಯತೆ ಏನಿತ್ತು ಎಂದು ಪ್ರತಿಭಟನಕಾರರು ಪ್ರಶ್ನಿಸಿದರು.

ಹಿಂದೆ ನಡೆದ ಪ್ರವೇಶ ಪರೀಕ್ಷೆಯಲ್ಲಿ ಪ್ರಶ್ನೆಗಳು ಸುಲಭವಾಗಿದ್ದವು ಎಂಬ ಕಾರಣಕ್ಕೆ ಮರು ಪರೀಕ್ಷೆ ನಡೆಸಿರುವುದು ಸರಿಯಲ್ಲ. ಪ್ರಶ್ನೆ ಪತ್ರಿಕೆ ಸುಲಭವಾಗಿರುವುದು ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಯಾಗುವುದರ ನಡುವೆ ಸಾಕಷ್ಟು ವ್ಯತ್ಯಾಸವಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗದಿದ್ದರೂ ಮರು ಪರೀಕ್ಷೆ ನಡೆಸಿರುವುದು ಖಂಡನೀಯ. ಮರು ಪರೀಕ್ಷೆ ಫಲಿತಾಂಶವನ್ನು ರದ್ದುಗೊಳಿಸಿ ಮೊದಲ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನೇ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಜೂನ್ 2ರಂದು ನಡೆದ ಮರು ಪ್ರವೇಶ ಪರೀಕ್ಷೆಯಲ್ಲಿ ಪ್ರಶ್ನೆಗಳನ್ನು ವಿಚಿತ್ರ ರೀತಿಯಲ್ಲಿ ಕೇಳಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಪಠ್ಯ ಹಾಗೂ ಮಾದರಿ ಪ್ರಶ್ನೆಪತ್ರಿಕೆಗಳಲ್ಲಿ ಇಲ್ಲದ ಪ್ರಶ್ನೆಗಳನ್ನೇ ಕೇಳಲಾಗಿದೆ. ವಿದ್ಯಾರ್ಥಿಗಳನ್ನು ಅನುತ್ತೀರ್ಣ ಮಾಡಬೇಕು ಎಂಬ ಉದ್ದೇಶದಿಂದಲೇ ಹೊಸ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಲಾಗಿದೆ ಎಂಬ ದೂರು ವ್ಯಕ್ತವಾಗಿದೆ. ಆ ಮೂಲಕ ರೈತರ ಮಕ್ಕಳಗೆ ಅನ್ಯಾಯ ಮಾಡಲಾಗಿದೆ ಎಂದು ಹೇಳಿದರು.

ತೋಟಗಾರಿಕೆ ಡೀನ್ ಕೈಗೊಂಡ ನಿರ್ಧಾರದಿಂದ ಸ್ಥಳೀಯ ಮಕ್ಕಳು ಕೃಷಿ ವಿಜ್ಞಾನ ಕೇಂದ್ರ ಪ್ರವೇಶದಿಂದ ವಂಚಿತರಾಗಿದ್ದಾರೆ. ಸ್ಥಳೀಯ ಕೃಷಿ, ಪರಿಸ್ಥಿತಿಗೆ ಅನುಗಣವಾಗಿ ಪ್ರಶ್ನೆ ಕೇಳುವುದನ್ನು ಬಿಟ್ಟು ಹೊರ ಜಿಲ್ಲೆ, ಹೊರ ರಾಜ್ಯಗಳ ಕೃಷಿ ಕುರಿತಾದ ಪ್ರಶ್ನೆಗಳನ್ನು ಕೇಳಿ ಸ್ಥಳೀಯ ವಿದ್ಯಾರ್ಥಿಗಳ ದಿಕ್ಕು ತಪ್ಪಿಸಲಾಗಿದೆ. ಇದರಿಂದ ರೈತರ ಮಕ್ಕಳು ಶಿಕ್ಷಣವನ್ನು ಅರ್ಧದಲ್ಲೇ ಕೈಬಿಡುವ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಅಧಿಕಾರಿಗಳು ಕೂಡಲೇ ಮೊದಲ ಪ್ರವೇಶ ಪತ್ರಿಕೆಯ ಫಲಿತಾಂಶ ಪರಿಗಣನೆ ಮಾಡುವ ನಿರ್ಧಾರ ಕೈಗೊಳ್ಳಬೇಕು. ಇಲ್ಲದಿದ್ದರೆ ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳೊಂದಿಗೆ ಹೋರಾಟ ರೂಪಿಸಲಾಗು ವುದು. ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಅಧಿಕಾರಿಗಳು ಪ್ರೋತ್ಸಾಹ ನೀಡಬೇಕು. ಒಂದು ವೇಳೆ ಹಳೇ ಫಲಿತಾಂಶ ಪರಿಗಣನೆ ಮಾಡದಿದ್ದರೆ ಹೋರಾಟ ಎದುರಿಸಬೇಕಾಗುತ್ತದೆ ಎಂದು ಪ್ರತಿಭಟನಕಾರರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ರೈತಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ, ಮುಖಂಡರಾದ ಬೇಡರಹಳ್ಳಿ ಬಸವರೆಡ್ಡಿ, ಕೆ.ಪಿ.ಭೂತಯ್ಯ, ಕೆ.ಎಂ.ಕಾಂತರಾಜು, ಬಿ.ಎ.ಹನುಮಂತರೆಡ್ಡಿ, ಪಿ.ಚೇತನ್ ಯಳನಾಡು, ವೆಂಕಟೇಶ್ ಬಳಘಟ್ಟ, ಚಂದ್ರಪ್ಪ, ರವಿಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-44-1528204995

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.