ಚಿತ್ರದುರ್ಗ: ರೈತರ ಬ್ಯಾಂಕ್ ಖಾತೆಗಳಿಗೆ ಬೆಳೆ ವಿಮೆ ಹಣ ಜಮೆ ಮಾಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ವಿಮಾ ಕಂಪನಿಗಳು ಹಾಗೂ ಜಿಲ್ಲಾಡಳಿತದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ರೈತ ಸಂಘದ ಜಿಲ್ಲಾ ಘಟಕ ಗುರುವಾರ ಪ್ರತಿಭಟನೆ ನಡೆಸಿತು.

ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಆಗಮಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ರೈತರನ್ನು ಒನಕೆ ಓಬವ್ವ ವೃತ್ತದಲ್ಲೇ ಪೊಲೀಸರು ತಡೆದರು.

‘ಕಳೆದ ವರ್ಷ ಮುಂಗಾರು ಕೊರತೆಯಿಂದಾಗಿ ಜಿಲ್ಲೆಯಲ್ಲಿ ಅನೇಕ ಬೆಳೆಗಳು ನಾಶವಾಗಿವೆ. ಚಳ್ಳಕೆರೆ ತಾಲ್ಲೂಕಿನಲ್ಲಿ ಶೇಂಗಾ ಬೆಳೆ ಹಾನಿಯಾಗಿದ್ದರಿಂದ ರೈತರು ಕೈಸುಟ್ಟುಕೊಂಡು ಕೃಷಿಗಾಗಿ ಮಾಡಿದ ಸಾಲ ತೀರಿಸಲಾಗದೆ ಆತ್ಮಹತ್ಯೆಯ ಹಾದಿ ಹಿಡಿಯುವಂತಾಗಿದೆ. ಇಂತಹ ಕಷ್ಟದ ಪರಿಸ್ಥಿತಿಯಲ್ಲಿದ್ದರೂ ವಿಮೆ ಕಂಪನಿಗಳು ಬೆಳೆ ವಿಮೆ ಹಣ ನೀಡುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಚಳ್ಳಕೆರೆ ತಾಲ್ಲೂಕು ಕಚೇರಿ ಎದುರು ಧರಣಿ ನಡೆಸಿದಾಗ ಅಧಿಕಾರಿಗಳು ಸ್ಥಳಕ್ಕೆ ಬಂದು ಬೆಳೆವಿಮೆ ಹಣ ಪಾವತಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈವರೆಗೂ ಯಾವ ರೈತರ ಖಾತೆಗೂ ಹಣ ಬಂದಿಲ್ಲ’ ಎಂದು ದೂರಿದರು.

‘ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ₹ 5,300 ಕೋಟಿ ಘೋಷಿಸಿರುವುದು ಇನ್ನು ಭರವಸೆಯಾಗಿಯೇ ಉಳಿದಿದೆ. ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವಕ್ಕೆ ಆಗಮಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇಂದ್ರ ಸರ್ಕಾರ ನೀಡಿರುವ ಆಶ್ವಾಸನೆಯಂತೆ ₹ 5,300 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಿ’ ಎಂದು ಒತ್ತಾಯಿಸಿದರು.

‘ಚಳ್ಳಕೆರೆ ತಾಲ್ಲೂಕಿನ ಹಿರೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 80 ರೈತರಿಗೆ ಓರಿಯಂಟಲ್ ವಿಮಾ ಕಂಪನಿ ಬೆಳೆ ವಿಮೆ ಪಾವತಿಸಿದ್ದು, ಜಿಲ್ಲೆಯ ಎಲ್ಲಾ ರೈತರಿಗೆ ಏಕೆ ಪಾವತಿಸಿಲ್ಲ? ಇಂತಹ ತಾರತಮ್ಯ ಎಸಗುತ್ತಿರುವ ಈ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ ಮೊಕದ್ದಮೆ ದಾಖಲಿಸಬೇಕು. ಜೊತೆಗೆ ಕಂಪನಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಡಳಿತವನ್ನು ಆಗ್ರಹಿಸಿದರು.

‘ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಅನುಕೂಲವಾಗುತ್ತದೆಂದು ನಂಬಿ ಬೆಳೆ ವಿಮೆ ಕಟ್ಟಿರುವ ರೈತರಿಗೆ ವಿಮೆ ಕಂಪನಿಗಳು ಪರಿಹಾರ ಕೊಡದೆ ಮೋಸ ಮಾಡುತ್ತಿವೆ. ಸರ್ಕಾರವೇ ನೇರವಾಗಿ ಜವಾಬ್ದಾರಿ ವಹಿಸಿಕೊಳ್ಳಬೇಕು. ಜಿಲ್ಲಾಡಳಿತ ಕೃಷಿ ಇಲಾಖೆ, ಬೆಳೆ ವಿಮೆ ಕಂಪನಿಗಳು ನಿರಂತರವಾಗಿ ರೈತರಿಗೆ ಮೋಸ ಮಾಡುತ್ತಿವೆ. ಅಧಿಕಾರಿಗಳು ವಿಮಾ ಕಂಪನಿಗಳ ಜೊತೆ ಶಾಮೀಲಾಗಿ ಅನ್ಯಾಯ ಮಾಡುತ್ತಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ. ಭೂತಯ್ಯ, ಜಿಲ್ಲಾ ಘಟಕದ ಅಧ್ಯಕ್ಷ ಧನಂಜಯ ಹಂಪಯ್ಯನ ಮಾಳಿಗೆ, ಉಪಾಧ್ಯಕ್ಷ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ತಾಲ್ಲೂಕು ಘಟಕದ ಅಧ್ಯಕ್ಷ ಟಿ. ಹಂಪಣ್ಣ, ಕೆ.ಸಿ. ಹೊರಕೇರಪ್ಪ, ಹಿರಿಯೂರು ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಒ. ಶಿವಕುಮಾರ್, ಆರ್. ಚೇತನ್, ಬಸ್ತಿಹಳ್ಳಿ ಜಿ. ಸುರೇಶ್ಬಾಬು, ಬಿ.ಪಿ. ಉಮಾಪತಿ, ಓಂಕಾರಪ್ಪ, ಅಜೇಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-44-1254232558

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.