ನಾಯಕನಹಟ್ಟಿ: ‘2025–26ನೇ ಸಾಲಿ ನಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ರೈತರ ಬೆಳೆಗಳು ವಿಫಲವಾಗಿದ್ದು, ವಿಮೆ ಪಾವತಿಸಿದ ರೈತರಿಗೆ ವಿಮಾ ಪರಿಹಾರ ಬಿಡುಗಡೆ ಮಾಡಬೇಕು’ ಎಂದು ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ರಾಜ್ಯ ಘಟಕದ ಉಪಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಒತ್ತಾಯಿಸಿದರು.

‘ಚಿತ್ರದುರ್ಗ ಜಿಲ್ಲೆಯು ಸತತ ಬರ ಗಾಲಕ್ಕೆ ತುತ್ತಾಗಿದ್ದು, ಬಹುತೇಕ ರೈತರು ಸಾಲ ಮಾಡಿಕೊಂಡು ಬಿತ್ತನೆ ಕಾರ್ಯ ಕೈಗೊಂಡಿದ್ದಾರೆ. ಆದರೂ ಬೆಳೆಯು ರೈತರ ಕೈಸೇರಿಲ್ಲ. ಇದರಿಂದ ಅವರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲಾ ತಾಲ್ಲೂಕು ಕಚೇರಿಗಳು, ಕೃಷಿ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಜಿಲ್ಲಾಧಿಕಾರಿ ಕಚೇರಿ ಮುಂದೆ ಹಲವು ಬಾರಿ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಗಿದೆ. ಆದರೂ ಇದುವರೆಗೆ ಬೆಳೆ ವಿಮೆ ಪಾವತಿಯಾಗಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಅಧಿಕಾರಿಗಳು ರೈತರ ಜೀವನದ ಜೊತೆಗೆ ಚೆಲ್ಲಾಟವಾಡುತ್ತಿದ್ದಾರೆ. ವಿಮೆ ಪಾವತಿಯ ಬಗ್ಗೆ ಇಚ್ಛಾಶಕ್ತಿ ಪ್ರದರ್ಶಿಸದ ಕಂಪನಿಗಳ ವಿರುದ್ಧ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದೆ ಮೃದು ಧೋರಣೆ ತಾಳಿದ್ದಾರೆ. ಅವರು ವಿಮಾ ಕಂಪನಿಗಳೊಂದಿಗೆ ಶಾಮೀಲಾಗಿರುವ ಸಂಶಯ ಮೂಡಿದೆ. ಹಾಗಾಗಿ ಕೃಷಿ, ತೋಟಗಾರಿಕೆ ಇಲಾಖೆ, ಜಿಲ್ಲಾಧಿಕಾರಿ ಮತ್ತು ಬೆಳೆವಿಮೆ ಕಂಪನಿಯ ಅಧಿಕಾರಿಗಳು ಹಿರೇಹಳ್ಳಿ ಟೋಲ್ ಬಳಿ ಬಂದು ಬೆಳೆವಿಮೆ ಪಾವತಿಗೆ ಇನ್ನು ಎಷ್ಟು ಕಾಲಾವಕಾಶ ಬೇಕು ಎಂಬುದನ್ನು ಸ್ಪಷ್ಟಪಡಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಅನಿರ್ದಿಷ್ಟಾವಧಿವರೆಗೂ ಹೆದ್ದಾರಿ ಟೋಲ್ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ನೂರಾರು ರೈತರು ಟೋಲ್ನ ಎಲ್ಲ ಮಾರ್ಗಗಳನ್ನು ಬಂದ್ ಮಾಡಿ ಸರ್ಕಾರ ಮತ್ತು ವಿಮಾ ಕಂಪನಿಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಕೆಲ ರೈತರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

ಚಳ್ಳಕೆರೆ ತಹಶೀಲ್ದಾರ್ ರೇಹಾನ್ ಪಾಷಾ ಸ್ಥಳಕ್ಕಾಗಮಿಸಿ ರೈತರ ಸಮಸ್ಯೆಗಳನ್ನು ಆಲಿಸಿ ಹಕ್ಕೋತ್ತಾಯದ ಮನವಿ ಪತ್ರ ಸ್ವೀಕರಿಸಿದರು. ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಮತ್ತು ತಾಲ್ಲೂಕು ಘಟಕದ ಪದಾಧಿಕಾರಿಗಳು, ರೈತರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.